Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್, ಇಂಗ್ಲೆಂಡ್ vs ಪಾಕಿಸ್ತಾನ: ಯಾರ ಮುಡಿಗೇರಲಿದೆ ಚಾಂಪಿಯನ್ ಪಟ್ಟ!

T20 World Cup 2022 Final match, England vs Pakistan: pitch report, weather forecast, Playing 11

ಟಿ20 ವಿಶ್ವಕಪ್‌ನಲ್ಲಿ ಇಂದು (ಭಾನುವಾರ) ಫೈನಲ್ ಪಂದ್ಯ ನಡೆಯಲಿದ್ದು ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಈ ಅಂತಿಮ ಸುತ್ತಿನಲ್ಲಿ ಪ್ರಶಸ್ತಿಗಾಗಿ ಸ್ಪರ್ಧೆ ನಡೆಸಲಿದೆ. ಸಾಕಷ್ಟು ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿರುವ ಎರಡು ತಂಡಗಳು ತೀವ್ರ ಪೈಪೋಟಿ ನಡೆಸಲಿದ್ದು ಎರಡನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ಆತ್ಮವಿಶ್ವಾಸದಲ್ಲಿದೆ.

ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸಾಕಷ್ಟು ಏರಿಳಿತಗಳನ್ನು ಅನುಭವಿಸಿದೆ. ಟೂರ್ನಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ಹಾಗೂ ಜಿಂಬಾಬ್ವೆ ವಿರುದ್ಧ ಸೋಲು ಅನುಭವಿಸಿದ್ದ ಪಾಕ್ ಪಡೆ ಬಹುತೇಕ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಪಾಕಿಸ್ತಾನಕ್ಕೆ ಅದೃಷ್ಟವೂ ಸಾಥ್ ನೀಡಿದ ಕಾರಣ ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ್ದು ಫೈನಲ್‌ಗೆ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ತಂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದು ಫೈನಲ್‌ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಆತ್ಮವಿಶ್ವಾಸದಲ್ಲಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ
ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಗುರುವಾರ ಮೆಲ್ಬರ್ನ್‌ ಮೈದಾನದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಪಾಕಿಸ್ತಾನ ಸಂಭಾವ್ಯ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ ಮತ್ತು ನಸೀಮ್ ಶಾ.

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ& ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಫಿಲ್ ಸಾಲ್ಟ್/ಡೇವಿಡ್ ಮಲನ್, ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರನ್, ಮಾರ್ಕ್ ವುಡ್/ಕ್ರಿಸ್ ಜೋರ್ಡಾನ್, ಆದಿಲ್ ರಶೀದ್ ಮತ್ತು ಕ್ರಿಸ್ ವೋಕ್ಸ್.

Story first published: Sunday, November 13, 2022, 8:40 [IST]
Other articles published on Nov 13, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+