Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ vs ಇಂಗ್ಲೆಂಡ್: ಟಾಸ್ ರಿಪೋರ್ಟ್, ಆಡುವ ಬಳಗ Live ಸ್ಕೋರ್

T20 world cup 2022 Final: Pakistan vs England, Toss report, Live score, playing XI

ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಮೆಲ್ಬರ್ನ್‌ನಲ್ಲಿ ಆರಂಭವಾಗಿದ್ದು ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ಮಧ್ಯೆ ಚಾಂಪಿಯನ್ ಪಟ್ಟಕ್ಕಾಗಿ ಹೋರಾಟ ನಡೆಯುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಎರಡು ತಂಡಗಳು ಕೂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಪಾಕಿಸ್ತಾನ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿದ್ದ ತಂಡದೊಂಡಿಗೆ ಆಡಲಿಳಿದರೆ ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಸೆಮಿಫೈನಲ್‌ನಲ್ಲಿ ಕಣಕ್ಕಿಳಿದಿದ್ದ ತಂಡದೊಂದಿಗೆ ಆಡಲು ಇಳಿದಿದೆ. ಹೀಗಾಗಿ ಈ ಫೈನಲ್ ಪಂದ್ಯಕ್ಕೂ ಇಂಗ್ಲೆಂಡ್ ತಂಡದ ಪರವಾಗಿ ಮಾರ್ಕ್‌ ವುಡ್ ಕಣಕ್ಕಿಳಿಯುತ್ತಿಲ್ಲ.

Live ಸ್ಕೋರ್‌ಕಾರ್ಡ್ ಹೀಗಿದೆ

1
53429

ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸಾಕಷ್ಟು ಏರಿಳಿತಗಳನ್ನು ಅನುಭವಿಸಿದೆ. ಟೂರ್ನಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ಹಾಗೂ ಜಿಂಬಾಬ್ವೆ ವಿರುದ್ಧ ಸೋಲು ಅನುಭವಿಸಿದ್ದ ಪಾಕ್ ಪಡೆ ಬಹುತೇಕ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಪಾಕಿಸ್ತಾನಕ್ಕೆ ಅದೃಷ್ಟವೂ ಸಾಥ್ ನೀಡಿದ ಕಾರಣ ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ್ದು ಫೈನಲ್‌ಗೆ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ತಂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದು ಫೈನಲ್‌ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಆತ್ಮವಿಶ್ವಾಸದಲ್ಲಿದೆ.

ಪಾಕಿಸ್ತಾನ ಆಡುವ ಬಳಗ ಹೀಗಿದೆ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

ಬೆಂಚ್: ಖುಶ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ

ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್

ಬೆಂಚ್: ಡೇವಿಡ್ ವಿಲ್ಲಿ, ಡೇವಿಡ್ ಮಲನ್, ಟೈಮಲ್ ಮಿಲ್ಸ್, ಮಾರ್ಕ್ ವುಡ್

Story first published: Sunday, November 13, 2022, 13:22 [IST]
Other articles published on Nov 13, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+