T20 World Cup 2022: ಸೆಮಿಫೈನಲ್‌ನಲ್ಲಿ ಆಡುವ ಮೂರು ತಂಡಗಳನ್ನು ಹೆಸರಿಸಿದ ವಾಸಿಂ ಅಕ್ರಮ್

ಪಾಕಿಸ್ತಾನ ಕ್ರಿಕೆಟ್ ತಂಡದ ಲೆಜೆಂಡರಿ ವೇಗದ ಬೌಲರ್ ವಾಸಿಂ ಅಕ್ರಮ್ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2022ರ ಸೆಮಿಫೈನಲ್‌ನಲ್ಲಿ ಆಡಲು ಭಾರತ, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾವನ್ನು ಬೆಂಬಲಿಸಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಪ್ರಸ್ತುತ ಟಿ20ನಲ್ಲಿ ಅಗ್ರ ಶ್ರೇಯಾಂಕದ ತಂಡವಾಗಿದೆ. ಇತ್ತೀಚೆಗೆ, ಭಾರತ ತಂಡ ಕ್ಯಾಲೆಂಡರ್ ವರ್ಷದಲ್ಲಿ ಹೆಚ್ಚು ಟಿ20 ಪಂದ್ಯಗಳ ಗೆಲುವಿನ ಪಾಕಿಸ್ತಾನದ ದಾಖಲೆಯನ್ನು ಮುರಿದರು.
ಒಂದೆರಡು ದಿನಗಳ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯ ಗೆದ್ದ ನಂತರ ಮೆನ್ ಇನ್ ಬ್ಲೂ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾದ ಅತಿ ಹೆಚ್ಚು ಗೆಲುವುಗಳ ದಾಖಲೆಯನ್ನು ಸರಿಗಟ್ಟಿದರು.
ಪಾಕಿಸ್ತಾನದ ಅತ್ಯುನ್ನತ ಮಟ್ಟದಲ್ಲಿ ವಿಕೆಟ್ ಟೇಕರ್ ಆಗಿರುವ ವಾಸಿಂ ಅಕ್ರಮ್, ಈ ಮಧ್ಯೆ ದಕ್ಷಿಣ ಆಫ್ರಿಕಾವನ್ನು ಟಿ20 ವಿಶ್ವಕಪ್‌ನ ಕಪ್ಪು-ಕುದುರೆಯಾಗಿ ಆಯ್ಕೆ ಮಾಡಿದರು.

ಆಸ್ಟ್ರೇಲಿಯಾ, ಭಾರತ ಮತ್ತು ಪಾಕಿಸ್ತಾನ ತಂಡಗಳನ್ನು ನೋಡಲು ಬಯಸುತ್ತೇನೆ
"2022ರ ಟಿ20 ವಿಶ್ವಕಪ್ ಸೆಮಿಫೈನಲ್‌ಗಾಗಿ, ನಾನು ಆಸ್ಟ್ರೇಲಿಯಾ, ಭಾರತ ಮತ್ತು ಪಾಕಿಸ್ತಾನ ತಂಡಗಳನ್ನು ನೋಡಲು ಬಯಸುತ್ತೇನೆ. ಆದರೆ ದಕ್ಷಿಣ ಆಫ್ರಿಕಾವು ಡಾರ್ಕ್ ಹಾರ್ಸ್ ಆಗಿರಬಹುದು," ಎಂದು ವಾಸಿಂ ಅಕ್ರಮ್ ದುಬೈನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆಸ್ಟ್ರೇಲಿಯಾದ ಮಟ್ಟಿಗೆ ಹೇಳುವುದಾದರೆ, ಅವರು ಪ್ರಸ್ತುತ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ವಿರುದ್ಧ ಹೋರಾಡುತ್ತಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಆರೋನ್ ಫಿಂಚ್ ನಾಯಕತ್ವದ ಆಸೀಸ್ ಈಗಾಗಲೇ ಸರಣಿಯನ್ನು ಕಳೆದುಕೊಂಡಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಕಳೆದ ಬಾರಿ ಪಂದ್ಯಾವಳಿಯನ್ನು ಗೆದ್ದ ನಂತರ ಆಸ್ಟ್ರೇಲಿಯಾ ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿದೆ.

ಅಕ್ಟೋಬರ್ 22ರಂದು ನ್ಯೂಜಿಲೆಂಡ್ vs ಆಸ್ಟ್ರೇಲಿಯಾ
ಮತ್ತೊಂದೆಡೆ, ಪಾಕಿಸ್ತಾನ ತಂಡ ಪ್ರಸ್ತುತ ನ್ಯೂಜಿಲೆಂಡ್‌ನಲ್ಲಿ ತ್ರಿಕೋನ ಸರಣಿಯಲ್ಲಿ ಭಾಗವಹಿಸುತ್ತಿದೆ. ಬಾಬರ್ ಅಜಂ ನಾಯಕತ್ವದ ತಂಡ ಈಗಾಗಲೇ ಸರಣಿಯ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.
ಅಕ್ಟೋಬರ್ 23ರ ಭಾನುವಾರದಂದು ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಮೈದಾನ (ಎಂಸಿಜಿ)ದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ಮುಖಾಮುಖಿಯಾಗುವ ಮೂಲಕ ತಮ್ಮ ಟಿ20 ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿವೆ.
ಪಾಕಿಸ್ತಾನ ತಂಡವು ಇತ್ತೀಚೆಗೆ ಮೊಯಿನ್ ಅಲಿ ನಾಯಕತ್ವದ ಇಂಗ್ಲೆಂಡ್ ವಿರುದ್ಧ ಏಳು ಪಂದ್ಯಗಳ ಟಿ20 ಪಂದ್ಯಗಳ ಸರಣಿಯನ್ನು 3-4 ರಿಂದ ಕಳೆದುಕೊಂಡಿತು. ಅಕ್ಟೋಬರ್ 22ರಂದು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಬ್ಲ್ಯಾಕ್ ಕ್ಯಾಪ್ಸ್ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಮೊದಲ ವಿಶ್ವಕಪ್ ಪಂದ್ಯವನ್ನು ಎದುರಿಸಲಿದೆ.

ಟಿ20 ವಿಶ್ವಕಪ್ 2022ಗಾಗಿ ಪಾಕಿಸ್ತಾನ ಪೂರ್ಣ ತಂಡ
ಬಾಬರ್ ಅಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಂ, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನ್ ಮಸೂದ್, ಯುಎಸ್ ಖಾದಿರ್
ಮೀಸಲು ಆಟಗಾರರು: ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್, ಶಹನವಾಜ್ ದಹಾನಿ

ಟಿ20 ವಿಶ್ವಕಪ್‌ಗಾಗಿ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್
ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications