Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Ban T20 World Cup : ಬಾಂಗ್ಲಾ ವಿರುದ್ಧ ಗೆಲ್ಲಲೇಬೇಕಾದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11

India vs bangladesh

ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 12ನ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿವೆ. ಸೆಮಿಫೈನಲ್‌ ತಲುಪಲು ಟೀಂ ಇಂಡಿಯಾ ಈ ಪಂದ್ಯವನ್ನ ಗೆಲ್ಲಲೇಬೇಕಿದ್ದು, ಬಾಂಗ್ಲಾದೇಶ ತಂಡಕ್ಕೆ ಸೆಮೀಸ್ ತಲುಪುವ ಅವಕಾಶ ಬಹುತೇಕ ಇಲ್ಲವಾಗಿದೆ.

ಗ್ರೂಪ್‌ 2ನಲ್ಲಿ ಸ್ಥಾನ ಪಡೆದಿರುವ ಟೀಂ ಇಂಡಿಯಾ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನ ಅಲಂಕರಿಸಿದೆ. ವಿಶ್ವಕಪ್‌ನ ಸೆಮಿಫೈನಲ್ ಟಿಕೆಟ್ ಪಡೆಯಲು ಭಾರತ ಮುಂದಿನ ಎರಡು ಪಂದ್ಯಗಳನ್ನ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

ಅಡಿಲೇಡ್‌ನ ಅಡಿಲೇಡ್ ಓವಲ್ ಮೈದಾನದಲ್ಲಿ ನವೆಂಬರ್ 2ರಂದು ಭಾರತ ಮತ್ತು ಬಾಂಗ್ಲಾದೇಶ ಪಂದ್ಯ ನಡೆಯಲಿದೆ. ಪ್ರಸ್ತುತ 4 ಪಾಯಿಂಟ್ಸ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಭಾರತ ಬಾಂಗ್ಲಾ ವಿರುದ್ಧ ಗೆಲ್ಲಲು ರಣತಂತ್ರ ಹೂಡಲು ರೆಡಿಯಾಗಿದ್ದು, ಈಗಾಗಲೇ ಅಭ್ಯಾಸ ನಡೆಸಿದೆ. ಮಳೆ ಸತತವಾಗಿ ಸುರಿಯುತ್ತಿರುವ ಕಾರಣ ಒಳಾಂಗಣ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸಿದ್ದಾರೆ.

ಅಡಿಲೇಡ್‌ನಲ್ಲಿ ಭಾರತ-ಬಾಂಗ್ಲಾ ಪಂದ್ಯಕ್ಕೆ ಮಳೆ ಭೀತಿ!

ಅಡಿಲೇಡ್‌ನಲ್ಲಿ ಭಾರತ-ಬಾಂಗ್ಲಾ ಪಂದ್ಯಕ್ಕೆ ಮಳೆ ಭೀತಿ!

ಅಡಿಲೇಡ್‌ನಲ್ಲಿ ಬುಧವಾರ ಶೇಕಡಾ 70ರಷ್ಟು ಮಳೆಬರುವ ಸಾಧ್ಯತೆ ಎದುರಾಗಿದೆ. ಆದ್ರೆ 1 ರಿಂದ 3 ಮಿಲಿ ಮೀಟರ್ ಮಳೆಯಾಗಲಿದೆ ಎಂಬುದು ಕೊಂಚ ಸಮಾಧಾನ ತರುವಂತಹ ವಿಷಯವಾಗಿದೆ. ಸ್ಟೇಡಿಯಂನಲ್ಲಿ ಪಶ್ಚಿಮದಿಂದ ನೈರುತ್ಯದ ಕಡೆಗೆ 25 ರಿಂದ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಹೆಡ್ ಟು ಹೆಡ್ ರೆಕಾರ್ಡ್‌ ಭಾರತ ಎದುರಾಳಿ ಬಾಂಗ್ಲಾದೇಶ ವಿರುದ್ಧ ಮೇಲುಗೈ ಸಾಧಿಸಿದ್ದು, ಇದುವರೆಗೆ 11 ಟಿ20 ಅಂತರಾಷ್ಟ್ರೀಯ ಪಂದ್ಯಗಳ ಮುಖಾಮುಖಿಯಲ್ಲಿ ಭಾರತ 10 ಪಂದ್ಯಗಳನ್ನ ಜಯಿಸಿದೆ. ಬಾಂಗ್ಲಾದೇಶ ಕೇವಲ 1 ಬಾರಿ ಪಂದ್ಯ ಜಯಿಸಿದೆ.

ಟಿ20 ವಿಶ್ವಕಪ್‌: KL ರಾಹುಲ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದ ರಾಹುಲ್ ದ್ರಾವಿಡ್

ಭಾರತ ಸಂಭಾವ್ಯ ಪ್ಲೇಯಿಂಗ್ 11

ಭಾರತ ಸಂಭಾವ್ಯ ಪ್ಲೇಯಿಂಗ್ 11

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಡಿಸಿದ ತಂಡವನ್ನೇ ಬಹುತೇಕ ಕಣಕ್ಕಿಳಿಸುವ ಸಾಧ್ಯತೆಯಿದೆ. ಆದ್ರೆ ಈ ಬಾರಿ ದಿನೇಶ್‌ ಕಾರ್ತಿಕ್ ಬದಲು ರಿಷಭ್ ಪಂತ್ ಮತ್ತು ಸ್ಪಿನ್ನರ್ ಯುಜವೇಂದ್ರ ಚಹಾಲ್ ಪ್ಲೇಯಿಂಗ್ 11ನಲ್ಲಿ ಅವಕಾಶ ಪಡೆಯಬಹುದು.

ರೋಹಿತ್ ಶರ್ಮಾ(ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ / ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಯುಜವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್

SMAT 2022: 55 ಎಸೆತಗಳಲ್ಲಿ 126ರನ್ ಚಚ್ಚಿದ ಶುಭಮನ್ ಗಿಲ್, ಕರ್ನಾಟಕ ವಿರುದ್ಧ ಪಂಜಾಬ್‌ಗೆ ಗೆಲುವು

ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್ 11

ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್ 11

ಬಾಂಗ್ಲಾದೇಶ ತಂಡದ ನಾಯಕ ಶಾಕೀಬ್ ಅಲ್ ಹಸನ್ ಈಗಾಗಲೇ ಪತ್ರಿಕಾಗೋಷ್ಟಿಯಲ್ಲಿ ಟೀಂ ಇಂಡಿಯಾ ಶಾಕ್ ನೀಡಲು ರೆಡಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಸ್ವತಃ ವಿಶ್ವಕಪ್‌ ಗೆಲ್ಲಲು ಬಂದಿಲ್ಲ ಎಂದು ಹೇಳುವ ಮೂಲಕ ರೇಸ್‌ನಿಂದ ಹೊರಗುಳಿದಿದ್ದಾರೆ. ಬಾಂಗ್ಲಾದೇಶ ಸಂಭಾವ್ಯ ತಂಡವನ್ನ ಈ ಕೆಳಗೆ ಕಾಣಬಹುದು.

ಬಾಂಗ್ಲಾದೇಶ ಸಂಭಾವ್ಯ 11: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್

Story first published: Tuesday, November 1, 2022, 20:12 [IST]
Other articles published on Nov 1, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+