Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್: ದ.ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

Rohit sharma

ಪರ್ತ್‌ನ ಪರ್ತ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಸೂಪರ್ 12 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಸೂಪರ್ 12ನ ಮೊದಲೆರಡು ಪಂದ್ಯಗಳಲ್ಲಿ ಈಗಾಗಲೇ ಗೆಲುವು ಸಾಧಿಸಿರುವ ಟೀಂ ಇಂಡಿಯಾ, ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ರಣತಂತ್ರದೊಂದಿಗೆ ಕಣಕ್ಕಿಳಿದಿದೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡಿದ್ದು, ಅಕ್ಷರ್ ಪಟೇಲ್ ಬದಲು ಸ್ಫೋಟಕ ಬ್ಯಾಟರ್ ದೀಪಕ್ ಹೂಡಾ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿ ಓರ್ವ ಆಟಗಾರನ ಬದಲಾವಣೆ ಆಗಿದ್ದು ಸ್ಪಿನ್ನರ್ ತಬ್ರೈಜ್ ಶಮ್ಸಿ ಬದಲು ಪೇಸರ್ ಲುಂಗಿ ಎನ್‌ಗಿಡಿ ಆಡುವ ಹನ್ನೊಂದರಲ್ಲಿ ಅವಕಾಶ ಪಡೆದಿದ್ದಾರೆ. ಈ ಮೂಲಕ ಹರಿಣಗಳು ಹೆಚ್ಚುವರಿ ಪೇಸರ್‌ಗೆ ಮಣೆ ಹಾಕಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಆಗಿದ್ದು, ಸಂಪೂರ್ಣ ಪ್ಲೇಯಿಂಗ್ ಇಲೆವೆನ್ ಅನ್ನು ಈ ಕೆಳಗೆ ಕಾಣಬಹುದು.

ಟೀಂ ಇಂಡಿಯಾ ಪ್ಲೇಯಿಂಗ್ 11

ಟೀಂ ಇಂಡಿಯಾ ಪ್ಲೇಯಿಂಗ್ 11

ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ಬೆಂಚ್: ಅಕ್ಷರ್ ಪಟೇಲ್, ರಿಷಭ್ ಪಂತ್, ಹರ್ಷಲ್ ಪಟೇಲ್, ಯುಜವೇಂದ್ರ ಚಹಾಲ್

ಟಿ20 ವಿಶ್ವಕಪ್‌ನ ಅತಿ ಹೆಚ್ಚು ಮೌಲ್ಯಯುತ ಆಟಗಾರ ಈತನೇ ಎಂದ ಮಾಜಿ ಕ್ರಿಕೆಟಿಗ

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11

ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಟೆಂಬಾ ಬವುಮಾ(ನಾಯಕ), ರಿಲೀ ರೋಸೌ, ಏಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಎರ್ನಿಕ್ ನೊರ್ಕಿಯಾ

ಬೆಂಚ್: ಹೆನ್ರಿಚ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ರೀಜಾ ಹೆಂಡ್ರಿಕ್ಸ್, ತಬ್ರೈಜ್ ಶಮ್ಸಿ

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಆಸ್ಟ್ರೇಲಿಯಾಗೆ ಇದೊಂದೇ ದಾರಿ ಎಂದ ಆ್ಯರೋನ್ ಫಿಂಚ್

ಹೆಡ್ ಟು ಹೆಡ್ ರೆಕಾರ್ಡ್

ಹೆಡ್ ಟು ಹೆಡ್ ರೆಕಾರ್ಡ್

ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯ ಇತಿಹಾಸವನ್ನು ತೆಗೆದು ನೋಡಿದ್ರೆ, ಭಾರತವೇ ಮೇಲುಗೈ ಸಾಧಿಸಿದೆ. ಅದ್ರಲ್ಲೂ ಟಿ20 ವಿಶ್ವಕಪ್‌ಗೂ ಮುನ್ನ ದಕ್ಷಿಣ ಆಫ್ರಿಕಾ ತಂಡವು ಭಾರತದ ಪ್ರವಾಸ ಕೈಗೊಂಡಿತ್ತು. ಈ ವೇಳೆಯಲ್ಲಿ ಟಿ20 ಸರಣಿ ಜೊತೆಗೆ ಏಕದಿನ ಸರಣಿಯನ್ನು ಸೋತು ತವರಿಗೆ ಬರಿಗೈನಲ್ಲಿ ವಾಪಸ್ಸಾಗಿತ್ತು.

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 23 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 13 ಪಂದ್ಯವನ್ನ ಜಯಸಿದ್ರೆ, ದಕ್ಷಿಣ ಆಫ್ರಿಕಾ 9 ಪಂದ್ಯಗಳನ್ನ ಗೆದ್ದು ಬೀಗಿತು. 1 ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

Story first published: Sunday, October 30, 2022, 16:28 [IST]
Other articles published on Oct 30, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+