ಭಾರತದ ಸೆಮಿಫೈನಲ್ ಕನಸಿಗೆ ಜಿಂಬಾಬ್ವೆ ಸವಾಲು: ಅಡ್ಡಿಯಾಗಲಿದೆಯಾ ಮಳೆ, ಪಿಚ್ ರಿಪೋರ್ಟ್ ಹಾಗೂ ಆಡುವ ಬಳಗ

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಅಂತಿಮ ಪಂದ್ಯ ಭಾನುವಾರ ನಡೆಯಲಿದ್ದು ಭಾರತ ಹಾಗೂ ಜಿಂಬಾಬ್ವೆ ನಡುವಿನ ಕದನದ ಮೂಲಕ ಈ ಮಹತ್ವದ ಹಂತದ ಸೆಣೆಸಾಟಕ್ಕೆ ತೆರೆ ಬೀಳಲಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದರೆ ಸೆಮಿಫೈನಲ್‌ಗೆ ಪ್ರವೇಶಿಸುವ ಕಾರಣ ಟೀಮ್ ಇಂಡಿಯಾ ಪಾಲಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ಈವರೆಗೆ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಟೀಮ್ ಇಂಡಿಯಾ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಒಂದು ಪಂದ್ಯದಲ್ಲಿ ಸೋತಿದೆ. ಹೀಗಾಗಿ ಆರು ಅಂಕಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ ಭಾರತ. ಜಿಂಬಾಬ್ವೆ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್‌ಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ. ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಸೆಣೆಸಾಡಿ ಐದು ರನ್‌ಗಳ ಅಂತರದ ರೋಚಕ ಗೆಲುವು ಸಾಧಿಸಲು ಯಶಸ್ವಿಯಾಗಿತ್ತು.
ಮತ್ತೊಂದೆಡೆ ಜಿಂಬಾಬ್ವೆ ತಂಡ ಸೂಪರ್ 12 ಹಂತದಲ್ಲಿ ಕೇವಲ ಒಂದು ಗೆಲುವು ಸಾಧಿಸಲು ಮಾತ್ರವೇ ಯಶಸ್ವಿಯಾಗಿದೆ. ಆದರೆ ಆ ಗೆಲುವು ಪಾಕಿಸ್ತಾನದ ವಿರುದ್ಧ ಬಂದಿದ್ದು ಪಾಕ್ ತಂಡವನ್ನು ಟೂರ್ನಿಯಿಂದ ಬಹುತೇಕ ಹೊರಹಾಕುವಂತೆ ಮಾಡಿದೆ ಎಂಬುದರಲ್ಲಿ ಅನುಮಾನವಿಲ್ಲ. ಹೀಗಾಗಿ ಭಾರತದ ವಿರುದ್ಧದ ಪಂದ್ಯದಲ್ಲಿಯೂ ಜಿಂಬಾಬ್ವೆ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ
ಭಾರತ ಹಾಗೂ ಜಿಂಬಾಬ್ವೆ ತಂಡಗಳು ಭಾನುವಾರ ಮೆಲ್ಬರ್ನ್‌ನ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಹವಾಮಾನ ವರದಿ: ಪಂದ್ಯದ ದಿನ ಮೆಲ್ಬರ್ನ್‌ನಲ್ಲಿ 13-24 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ. ಪಂದ್ಯದ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾಣ ವರದಿಗಳು ಹೇಳುತ್ತಿದೆ.
ಪಿಚ್ ರಿಪೋರ್ಟ್: ಮೆಲ್ಬರ್ನ್ ಪಿಚ್ ಬ್ಯಾಟರ್‌ಗಳಿಗೆ ಹಾಗೂ ಬೌಲಿಂಗ್ ವಿಭಾಗಕ್ಕೆ ಸಮಾನವಾದ ನೆರವು ನೀಡುವ ನಿರೀಕ್ಷೆಯಿದೆ. ಆರಂಭದಲ್ಲಿ ಬೌಲರ್‌ಗಳಿಗೆ ಪಿಚ್ ನೆರವು ನೀಡಲಿದ್ದು ಪಂದ್ಯ ಮುಂದುವರಿದಂತೆಯೇ ಬ್ಯಾಟರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಸ್ಪಿನ್ನರ್‌ಗಳಖ ಪಾತ್ರ ಕೂಡ ಇಲ್ಲಿ ಮಹತ್ವವಾಗುವ ಸಾಧ್ಯತೆಯಿದೆ.

ಸಂಭಾವ್ಯ ಆಡುವ ಬಳಗ ಹೀಗಿದೆ
ಟೀಮ್ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಜಿಂಬಾಬ್ವೆ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ (ನಾಯಕ), ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ಟೋನಿ ಮುನ್ಯೊಂಗಾ, ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಟೆಂಡೈ ಚಟಾರಾ, ರಿಚರ್ಡ್ ನಾಗರವಾ, ಬ್ಲೆಸ್ಸಿಂಗ್ ಮುಜರಬಾನಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications