Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್: ವಿಕ್ಟೋರಿಯಾ ಗವರ್ನರ್ ಭೇಟಿ ಮಾಡಿದ ಟೀಂ ಇಂಡಿಯಾ ಪ್ಲೇಯರ್ಸ್‌

Team india

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಅಕ್ಟೋಬರ್ 23ರಂದು ಟೀಂ ಇಂಡಿಯಾ ತನ್ನ ಅಭಿಯಾನವನ್ನ ಆರಂಭಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಲಿದ್ದು, ಈಗಾಗಲೇ ಮೆರ್ಲರ್ನ್‌ನಲ್ಲಿ ಅಭ್ಯಾಸ ಕೂಡ ಆರಂಭಿಸಿದೆ.

ಮೆಲ್ಬರ್ನ್‌ನಲ್ಲಿ ಈಗಾಗಲೇ ಬೀಡು ಬಿಟ್ಟಿರುವ ಟೀಂ ಇಂಡಿಯಾ ಸ್ಕ್ವಾಡ್‌ ಸದಸ್ಯರು ಶುಕ್ರವಾರ ವಿಕ್ಟೋರಿಯಾ ಗವರ್ನರ್‌ ಭೇಟಿ ಮಾಡಿದ್ದು, ಔತಣಕೂಟದಲ್ಲಿ ಭಾಗಿಯಾಗಿ ಫೋಟೊಗಳಿಗೆ ಪೋಸ್ ನೀಡಿದ್ದಾರೆ. ವಿಕ್ಟೋರಿಯಾ ಗವರ್ನರ್ ಲಿಂಡಾ ಡೆಸ್ಸಾ ಎಸಿ ಅಧಿಕೃತ ಆಹ್ವಾನದ ಮೇರೆಗೆ ಟೀಂ ಇಂಡಿಯಾ 15 ಸದಸ್ಯರನ್ನೊಳಗೊಂಡ ಸ್ಕ್ವಾಡ್‌ ಮೆಲ್ಬರ್ನ್‌ನಲ್ಲಿರುವ ಗವರ್ನರ್ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಗವರ್ನರ್ ಆಫ್ ವಿಕ್ಟೋರಿಯಾ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟೀಂ ಇಂಡಿಯಾ ಆಟಗಾರರ ಭೇಟಿಯ ಕುರಿತಾದ ಫೋಟೋಗಳನ್ನು ಹರಿಬಿಡಲಾಗಿದೆ.

2021ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ 2022ರ ವಿಶ್ವಕಪ್ ತನ್ನ ಮೊದಲ ಪಂದ್ಯದಲ್ಲಿ ಪಾಕ್ ತಂಡವನ್ನೇ ಎದುರಿಸುತ್ತಿದ್ದು, ಎಂಸಿಜಿ ಮೈದಾನದಲ್ಲಿ ಶುಭಾರಂಭ ಮಾಡುವ ಕನಸನ್ನು ಹೊತ್ತಿದೆ.

ಗ್ರೂಪ್ ಬಿನಲ್ಲಿ ಸ್ಥಾನ ಪಡೆದಿರುವ ಟೀಂ ಇಂಡಿಯಾ ಜೊತೆಗೆ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್‌ ಹಾಗೂ ಜಿಂಬಾಬ್ವೆ ತಂಡಗಳು ಸೂಪರ್ 12 ಹಂತದಲ್ಲಿ ಕಾದಾಟ ನಡೆಸಲಿವೆ. 2007ರ ಚೊಚ್ಚಲ ವಿಶ್ವಕಪ್ ಗೆದ್ದ ಬಳಿಕ ಟೀಮ ಇಂಡಿಯಾ 15 ವರ್ಷಗಳ ಬಳಿಕ ಮತ್ತೊಂದು ವಿಶ್ವಕಪ್ ಗೆಲ್ಲುವ ಕನಸು ಹೊತ್ತಿದ್ದು, ರೋಹಿತ್ ಶರ್ಮಾ ನಾಯಕತ್ವದಲ್ಲಿ ಯಶಸ್ವಿಯಾಗುತ್ತಾ ಕಾದು ನೋಡಬೇಕಿದೆ.

Story first published: Friday, October 21, 2022, 23:30 [IST]
Other articles published on Oct 21, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+