IRE vs NZ: ಐರ್ಲೆಂಡ್ vs ನ್ಯೂಜಿಲೆಂಡ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಶುಕ್ರವಾರ (ನವೆಂಬರ್ 4) ಐರ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಅಡಿಲೇಡ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2022 ಸೂಪರ್ 12ರ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಂಡ್ರ್ಯೂ ಬಾಲ್ಬಿರ್ನಿ ನಾಯಕತ್ವದ ಐರ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲಿದೆ.
ಗ್ರೂಪ್ 1ರಲ್ಲಿ ನ್ಯೂಜಿಲೆಂಡ್ ತಂಡವು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದೊಂದಿಗೆ ಒಂದು ಪಂದ್ಯ ಬಾಕಿ ಇರುವಂತೆ ತಲಾ 5 ಪಾಯಿಂಟ್‌ಗಳನ್ನು ಹೊಂದಿ ಸಮಬಲವಾಗಿದೆ,. ಆದರೆ ನೆಟ್ ರನ್‌ರೇಟ್‌ನ ಆಧಾರದ ಮೇಲೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅಡಿಲೇಡ್‌ನಲ್ಲಿ ಐರ್ಲೆಂಡ್ ವಿರುದ್ಧದ ಗೆಲುವು ಸೆಮಿಫೈನಲ್ ಸ್ಥಾನವನ್ನು ಖಾತರಿಪಡಿಸುತ್ತದೆ.
ಮತ್ತೊಂದೆಡೆ, ಐರ್ಲೆಂಡ್ ಈ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡಲಿದೆ. ಹಿಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಐರ್ಲೆಂಡ್ ತಂಡವನ್ನು 42 ರನ್‌ಗಳಿಂದ ಸೋಲಿಸಿತ್ತು.
ಐರ್ಲೆಂಡ್ vs ನ್ಯೂಜಿಲೆಂಡ್ ತಂಡಗಳ ಆಡುವ 11ರ ಬಳಗ
ಐರ್ಲೆಂಡ್ ಆಡುವ 11ರ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡಿ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಬ್ಯಾರಿ ಮೆಕಾರ್ಥಿ, ಜೋಶ್ ಲಿಟಲ್.
ನ್ಯೂಜಿಲೆಂಡ್ ಆಡುವ 11ರ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಡೇರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications