For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ಪಾಲಿಗೆ ವಿಲನ್ ಆದ ಮಳೆರಾಯ: ರೋಚಕ ಗೆಲುವು ಸಾಧಿಸಿದ ಐರ್ಲೆಂಡ್

T20 world cup 2022: Ireland won against England by 5 runs on DLS

ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಹಾಗೂ ಐರ್ಲೆಂಡ್ ನಡುವಿನ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗಿದ್ದು ಡಕ್ವರ್ತ್ ಲೂಯೀಸ್ ನಿಯಮದ ಅನ್ವಯ ಪಂದ್ಯದ ಫಲಿತಾಂಶ ಹೊರಬಿದ್ದಿದೆ. ಈ ಪಂದ್ಯದಲ್ಲಿ ಎಎಲ್ ನಿಯಮದ ಆಧಾರದಲ್ಲಿ ಐರ್ಲೆಂಡ್ ತಂಡ 5 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದ್ದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತವುಂಟಾಗಿದೆ.

ಐರ್ಲೆಂಡ್ ತಂಡ ನೀಡಿದ್ದ 160 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಇಂಗ್ಲೆಂಡ್ ತಂಡ 14.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್‌ಗಳಿಸಿತ್ತು. ಈ ಸಂದರ್ಭದಲ್ಲಿ ಮಳೆ ಸುರಿಯಲು ಆರಂಭಿಸಿದ್ದು ಪಂದ್ಯ ಮುಂದುವರಿಯಲು ಅವಕಾಶ ದೊರೆತಿಲ್ಲ. ಹೀಗಾಗಿ ಡಕ್ವರ್ತ್ ಲೂಯೀಸ್ ನಿಯಮದ ಪ್ರಕಾರ ಈ ಹಂತದಲ್ಲಿ ಇಂಗ್ಲೆಂಡ್ ತಂಡ 5 ರನ್‌ಗಳನ್ನು ಹಿಂದುಳಿದಿದ್ದ ಕಾರಣ ಜೋಸ್ ಬಟ್ಲರ್ ಪಡೆ 5 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ.

ಆರಂಭದಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚಿದ ಐರ್ಲೆಂಡ್

ಆರಂಭದಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚಿದ ಐರ್ಲೆಂಡ್

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಐರ್ಲೆಂಡ್ ತಂಡ ಮೊದಲ ವಿಕೆಟ್‌ಅನ್ನು ಶೀಘ್ರವಾಗಿ ಕಳೆದುಕೊಂಡಿದ್ದರೂ ಎರಡನೇ ವಿಕೆಟ್‌ಗೆ ಭರ್ಜರಿ ಪ್ರದರ್ಶನ ನೀಡಿತು. ನಾಯಕ ಬಲ್ಬರ್ನೈ ಹಾಗೂ ಲೂರ್ಕಾನ್ ಟಕ್ಕರ್ ಇಂಗ್ಲೆಂಡ್ ಬೌಲಿಂಗ್ ದಾಳಿಗೆ ಭರ್ಜರಿ ಪ್ರತ್ಯುತ್ತರ ನೀಡುತ್ತಾ 12 ಓವರ್‌ಗಳ ವೇಳೆಗೆ 103 ರನ್‌ಗಳನ್ನು ಗಳಿಸಲು ಕಾರಣವಾದರು. ಈ ಸಂದರ್ಭದಲ್ಲಿ ಈ ಜೋಡಿ ಬೇರ್ಪಟ್ಟಿತು.

ದ್ವಿತಿಯಾರ್ಧದಲ್ಲಿ ಬೌಲಿಂಗ್‌ನಲ್ಲಿ ಇಂಗ್ಲೆಂಡ್‌ಗೆ ಮೇಲುಗೈ

ದ್ವಿತಿಯಾರ್ಧದಲ್ಲಿ ಬೌಲಿಂಗ್‌ನಲ್ಲಿ ಇಂಗ್ಲೆಂಡ್‌ಗೆ ಮೇಲುಗೈ

ನಂತರವೂ ಬರ್ಬರ್ನೈ ಬ್ಯಾಟಿಂಗ್ ಮುಂದುವರಿಸಿದ್ದು ಭರ್ಜರಿ ಅರ್ಧ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು. 47 ಎಸೆತಗಳಲ್ಲಿ ಐರ್ಲೆಂಡ್ ನಾಯಕ 62 ರನ್ ಸಿಡಿಸಿ ವಿಕೆಟ್ ಕಳೆದುಕೊಂಡರು. ಆದರೆ ನಂತರ ಬಂದ ಆಟಗಾರರಿಂದ ಉತ್ತಮ ಪ್ರದರ್ಶನ ಬಾರಲಿಲ್ಲ. ಹೀಗಾಗಿ ಇಂಗ್ಲೆಂಡ್ ಬೌಲಿಂಗ್ ವಿಭಾಗ ಸಂಪೂರ್ಣ ಮೇಲುಗೈ ಸಾಧಿಸಿತು. 19.2 ಓವರ್‌ಗಳಲ್ಲಿ ಆಲೌಟ್ ಆದ ಐರ್ಲೆಂಡ್ ತಂಡ 159 ರನ್‌ ಗಳಿಸಿತು.
ಇಂಗ್ಲೆಂಡ್ ತಂಡದ ಪರವಾಗಿ ಬೌಲಿಂಗ್‌ನಲ್ಲಿ ಮಾರ್ಕ್‌ವುಡ್ ಹಾಗೂ ಲಿವಿಂಗ್‌ಸ್ಟನ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಇಬ್ಬರು ಕೂಡ ಐರ್ಲೆಂಡ್ ತಂಡದ ತಲಾ ಮೂರು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಉಳಿದಂತೆ ಸ್ಯಾಮ್ ಕರನ್ ಎರಡು ವಿಕೆಟ್ ಪಡೆದರೆ ಒಂದು ವಿಕೆಟ್ ಬೆನ್ ಸ್ಟೋಕ್ಸ್ ಪಾಲಾಯಿತು.

ಮುಗ್ಗರಿಸಿದ ಅಗ್ರ ಕ್ರಮಾಂಕ: ಬೌಲಿಂಗ್‌ನಲ್ಲಿ ಐರ್ಲೆಂಡ್ ಮೇಲುಗೈ

ಮುಗ್ಗರಿಸಿದ ಅಗ್ರ ಕ್ರಮಾಂಕ: ಬೌಲಿಂಗ್‌ನಲ್ಲಿ ಐರ್ಲೆಂಡ್ ಮೇಲುಗೈ

ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಅಗ್ರ ಕ್ರಮಾಂಕ ಸಂಪೂರ್ಣ ವೈಫಲ್ಯ ಅನುಭವಿಸಿತು. ಸವಾಲಿನ ಗುರಿಯನ್ನು ನೀಡಿದ ಐರ್ಲೆಂಡ್ ತಂಡ ಈ ಗುರಿಯನ್ನು ರಕ್ಷಣೆ ಮಾಡುವ ದೃಷ್ಟಿಯಲ್ಲಿ ಹೆಜ್ಜೆಯಿಡಲು ಆರಂಭಿಸಿತು. ನಾಯಕ ಆರಂಭಿಕ ಆಟಗಾರ ಜೋಸ್ ಬಟ್ಲರ್ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರೆ ಅಲೆಕ್ಸ್ ಹೀಲ್ಸ್ 7 ರನ್‌ಗಳನ್ನು ಗಳಿಸಿ ಔಟಾದರು. ಬಳಿಕ ಬೆನ್ ಸ್ಟೋಕ್ಸ್ ಕೂಡ 6 ರನ್ ಮಾತ್ರವೇ ಗಳಿಸಿ ಔಟಾದಾಗ ತಂಡದ ಮೊತ್ತ 29 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ನಂತರ ನಿಧಾನವಾಗಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದ ಡೇವಿಡ್ ಮಲನ್ ಹಾಗೂ ಹ್ಯಾರಿ ಬ್ರೂಕ್ ಕೂಡ ಬಳಿಕ ವಿಕೆಟ್ ಕಳೆದುಕೊಂಡರು. ನಂತರ ಬ್ಯಾಟಿಂಗ್‌ಗಿಳಿದ ಮೊಯೀನ್ ಅಲಿ 12 ಎಸೆತಗಳಲ್ಲಿ 24 ರನ್‌ಗಳಿಸಿ ಹೋರಾಟ ನೀಡುವ ಮನೋಭಾವ ತೋರಿಸಿದರು. ಆದರೆ ಆಗ ಮಳೆ ಇಂಗ್ಲೆಂಡ್ ಪಾಲಿಗೆ ವಿಲನ್ ರೂಪದಲ್ಲಿ ಎಂಟ್ರಿ ಕೊಟ್ಟಿತ್ತು. 14.3 ಓವರ್‌ಗಳಲ್ಲಿ 105 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಬಂದ ಇಂಗ್ಲೆಂಡ್ ತಂಡ ಡಕ್ವರ್ತ್ ಲೂಯೀಸ್ ನಿಯಮದ ಅನ್ವಯ ಈ ಹಂತದಲ್ಲಿ ಐರ್ಲೆಂಡ್ ತಂಡಕ್ಕಿಂತ 5 ರನ್ ಹಿಂದುಳಿದಿತ್ತು. ನಂತರ ಇದರ ಆಧಾರದಲ್ಲಿ ಐರ್ಲೆಂಡ್ ತಂಡವನ್ನು ವಿಜಯೀ ಎಂದು ಘೋಷಣೆ ಮಾಡಲಾಗಿದೆ.

ಐರ್ಲೆಂಡ್ ಆಡುವ ಬಳಗ

ಐರ್ಲೆಂಡ್ ಆಡುವ ಬಳಗ

ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್
ಬೆಂಚ್: ಸ್ಟೀಫನ್ ಡೊಹೆನಿ, ಕಾನರ್ ಓಲ್ಫರ್ಟ್, ಗ್ರಹಾಂ ಹ್ಯೂಮ್, ಸಿಮಿ ಸಿಂಗ್

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್ : ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಫಿಲಿಪ್ ಸಾಲ್ಟ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಟೈಮಲ್ ಮಿಲ್ಸ್

Story first published: Wednesday, October 26, 2022, 13:46 [IST]
Other articles published on Oct 26, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+