Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

NZ vs SL: ನ್ಯೂಜಿಲೆಂಡ್ vs ಶ್ರೀಲಂಕಾ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

T20 World Cup 2022: New Zealand vs Sri Lanka Toss Report, Playing XI & Live Score

ಶನಿವಾರ, ಅಕ್ಟೋಬರ್ 29ರಂದು ನಡೆಯುತ್ತಿರುವ ಟಿ20 ವಿಶ್ವಕಪ್‌ನ ಸೂಪರ್ 12ರಲ್ಲಿ ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗುತ್ತಿವೆ.

ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ದಸುನ್ ಶನಕ ನಾಯಕತ್ವದ ಶ್ರೀಲಂಕಾ ವಮೊದಲು ಬೌಲಿಂಗ್ ಮಾಡಲಿದೆ.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಹೈ-ವೋಲ್ಟೇಜ್ ಪಂದ್ಯವು ಶುಕ್ರವಾರದಂದು ಯಾವುದೇ ಫಲಿತಾಂಶವನ್ನು ನೀಡದೆ ನಿರಾಸೆ ಮೂಡಿಸಿತ್ತು. ಇನ್ನು ಎರಡು ಪಂದ್ಯಗಳಿಂದ ಮೂರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನ್ಯೂಜಿಲೆಂಡ್, ಐದನೇ ಸ್ಥಾನದಲ್ಲಿರುವ ಶ್ರೀಲಂಕಾವನ್ನು ಎದುರಿಸುತ್ತಿದೆ.

ಮತ್ತೊಂದೆಡೆ, ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ ವಿರುದ್ಧ ಮಳೆಯಿಂದ ರದ್ದಾದ ಪಂದ್ಯದ ಮೊದಲು ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆಸೀಸ್ ಅನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿ ದಾಖಲೆ ಅಂತರದಲ್ಲಿ ಗೆದ್ದಿತ್ತು. ನ್ಯೂಜಿಲೆಂಡ್ ಎರಡು ಪಂದ್ಯಗಳಿಂದ ಮೂರು ಅಂಕಗಳೊಂದಿಗೆ ಗುಂಪಿನ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಆಡುವ 11ರ ಬಳಗ
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಲಹಿರು ಕುಮಾರ, ಕಸುನ್ ರಜಿತಾ.

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್

Story first published: Saturday, October 29, 2022, 13:27 [IST]
Other articles published on Oct 29, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+