
ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವರ್ಸಸ್ ಜಿಂಬಾಬ್ವೆ ಐಸಿಸಿ ಟಿ20 ವಿಶ್ವಕಪ್ ಸೂಪರ್ 12 ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಜಿಂಬಾಬ್ವೆ ಉತ್ತಮ ಆರಂಭ ಪಡೆತ್ತಿದ್ದಾರೂ ಮಧ್ಯಮ ಓವರ್‌ಗಳಲ್ಲಿ ಹಠಾತ್ ಕುಸಿತದಿಂದಾಗಿ ಸಾಧಾರಣ ಮೊತ್ತ ಕಲೆಹಾಕಿದೆ.
ಆರಂಭಿಕ ಓವರ್‌ನಲ್ಲೇ ಶಾಹೀನ್ ಅಫ್ರಿದಿಗೆ 14ರನ್ ಬಾರಿ ಪವರ್‌ಪ್ಲೇ ಓವರ್‌ಗಳಲ್ಲಿ ಉತ್ತಮ ರನ್ ಕಲೆಹಾಕಿದ್ದ ಜಿಂಬಾಬ್ವೆ ತಂಡವು 7 ರಿಂದ 15 ಓವರ್‌ಗಳೊಳಗೆ 5 ವಿಕೆಟ್ ಕಳೆದುಕೊಳ್ಳುವ ಮೂಲಕ ತನ್ನ ಪತನಕ್ಕೆ ತಾನೇ ಕಾರಣವಾಯಿತು.
42ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿದ್ದ ಜಿಂಬಾಬ್ವೆ 10 ಓವರ್‌ಗೆ 3 ವಿಕೆಟ್ ಕಳೆದುಕೊಂಡು 64ರನ್ ಕಲೆಹಾಕಿತು. ಆದ್ರೆ ನಂತರದಲ್ಲಿ ಹಠಾತ್ ಕುಸಿತಕ್ಕೊಳಗಾದ ಜಿಂಬಾಬ್ವೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಒಬ್ಬರ ಹಿಂದೆ ಮತ್ತೊಬ್ಬರು ಪೆವಿಲಿಯನ್ ಸೇರಿಕೊಂಡರು.
ಮೊಹಮ್ಮದ್ ವಾಸಿಂ ಜ್ಯೂನಿಯರ್ ಹಾಗೂ ಶದಾಬ್ ಖಾನ್ ದಾಳಿಗೆ ತತ್ತರಿಸಿದ ಜಿಂಬಾಬ್ವೆ ತಂಡವು ನಿಗಿದತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130ರನ್ ಕಲೆಹಾಕಿತು. ಜಿಂಬಾಬ್ವೆ ಪರ ಸೇನ್ ವಿಲಿಯಮ್ಸ್ 31ರನ್‌ಗಳಿಸಿದ್ದು ಬಿಟ್ಟರೆ ಯಾವೊಬ್ಬ ಬ್ಯಾಟರ್ ಕೂಡ ತಂಡಕ್ಕೆ ನೆರವಾಗಲಿಲ್ಲ. ರ್ಯಾನ್ ಬರ್ಲ್ 10, ಬ್ರಾಡ್ ಇವಾನ್ಸ್ 19ರನ್ ಕಲೆಹಾಕಿದರು. ಆದ್ರೆ ಈ ಕೊಡುಗೆ ತಂಡದ ಮೊತ್ತವನ್ನ ಸವಾಲಿನ ಸ್ಕೋರ್ ಹಾಕಲು ಸಾಧ್ಯವಾಗಲಿಲ್ಲ.
ಪಾಕಿಸ್ತಾನ ತಂಡದ ಪರ ಮೊಹಮ್ಮದ್ ವಾಸಿಂ ಜ್ಯೂನಿಯರ್ 4 ಓವರ್‌ಗಳಲ್ಲಿ 24ರನ್ ನೀಡಿ 4 ವಿಕೆಟ್ ಕಬಳಿಸಿದ್ರೆ, ಶದಾಬ್ ಖಾನ್ 23 ರನ್ ನೀಡಿ 3 ವಿಕೆಟ್ ಉರುಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡ್ರು. ಹ್ಯಾರಿಸ್ ರೌಫ್ 4 ಓವರ್‌ಗಳಲ್ಲಿ 1 ಮೇಡನ್ ಸಹಿತ ಕೇವಲ 12 ರನ್ ನೀಡಿ 1 ವಿಕೆಟ್ ಪಡೆದರು.
ಪಾಕಿಸ್ತಾನ ತಂಡದ ಪ್ಲೇಯಿಂಗ್ ಇಲೆವೆನ್
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ
ಬೆಂಚ್: ಖುಶ್ದಿಲ್ ಶಾ, ಫಖರ್ ಜಮಾನ್, ಮೊಹಮ್ಮದ್ ಹಸ್ನೈನ್, ಆಸಿಫ್ ಅಲಿ
ಜಿಂಬಾಬ್ವೆ ತಂಡದ ಪ್ಲೇಯಿಂಗ್ ಇಲೆವೆನ್
ಜಿಂಬಾಬ್ವೆ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ (ನಾಯಕ), ಮಿಲ್ಟನ್ ಶುಂಬಾ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ರಿಚರ್ಡ್ ನಾಗರವಾ, ಬ್ಲೆಸ್ಸಿಂಗ್ ಮುಜರಬಾನಿ
ಬೆಂಚ್: ವೆಲ್ಲಿಂಗ್ಟನ್ ಮಸಕಡ್ಜಾ, ಕ್ಲೈವ್ ಮದಂಡೆ, ಟೋನಿ ಮುನ್ಯೊಂಗಾ, ಟೆಂಡೈ ಚತಾರಾ