PAK vs BAN: ಬಾಂಗ್ಲಾದೇಶ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಪಾಕಿಸ್ತಾನ

ಭಾನುವಾರ, ನವೆಂಬರ್ 6ರಂದು ಅಡಿಲೇಡ್ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್ 12ರ ನಿರ್ಣಾಯಕ ಪಂದ್ಯದಲ್ಲಿ ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ತಂಡದ ವಿರುದ್ಧ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ನಿರಾಯಾಸವಾಗಿ ಗೆದ್ದು ನಾಲ್ಕನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿತು.
ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿ, ಎದುರಾಳಿ ಪಾಕಿಸ್ತಾನಕ್ಕೆ 128 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು.
ಬಾಂಗ್ಲಾದೇಶ ನೀಡಿದ 128 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಪಾಕಿಸ್ತಾನ 18.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿ ಗೆಲುವಿನ ನಗೆ ಬೀರಿತು.
128 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನಕ್ಕೆ ಮೊಹಮ್ಮದ್ ರಿಜ್ವಾನ್ (32) ಮತ್ತು ಬಾಬರ್ ಅಜಂ(25) ಉತ್ತಮ ಅಡಿಪಾಯ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ ಜೊತೆಯಾಟಕ್ಕೆ 10.3 ಓವರ್‌ಗಳಲ್ಲಿ 57 ರನ್ ಗಳಿಸಿದರು.

ನಾಯಕ ಬಾಬರ್ ಅಜಂ ಔಟಾದ ನಂತರ ಕ್ರೀಸ್‌ಗೆ ಬಂದ ನವಾಜ್ ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅನಂತರ ಮೊಹಮ್ಮದ್ ಹ್ಯಾರಿಸ್ ಕೇವಲ 12 ಎಸೆತಗಳಲ್ಲಿ 31 ರನ್ ಗಳಿಸುವ ಮೂಲಕ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಲು ಮತ್ತು ನಾಲ್ಕನೇ ತಂಡವಾಗಿ ಸೆಮಿಫೈನಲ್‌ನಲ್ಲಿ ಸ್ಥಾನ ಗಳಿಸಲು ನೆರವಾದರು.
ಬಾಂಗ್ಲಾದೇಶದ ಪರ ಬೌಲಿಂಗ್‌ನಲ್ಲಿ ಶಕೀಬ್ ಅಲ್ ಹಸನ್, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್ ತಲಾ ಒಂದೊಂದು ವಿಕೆಟ್ ಪಡೆದರು.
ಪಾಕಿಸ್ತಾನವು ಈಗ ಗ್ರೂಪ್ 2ರಿಂದ ಸೆಮಿಫೈನಲ್‌ಗೆ ಭಾರತ ತಂಡದ ಜೊತೆ ಅರ್ಹತೆ ಪಡೆದುಕೊಂಡಿದೆ. ಇದಕ್ಕೂ ಮೊದಲು, ಪಾಕಿಸ್ತಾನದ ಶಾಹೀನ್ ಶಾ ಆಫ್ರಿದಿ 22 ರನ್ ನೀಡಿ 4 ವಿಕೆಟ್ ಪಡೆದು ಬಾಂಗ್ಲಾದೇಶದ ಬ್ಯಾಟಿಂಗ್ ಬಲವನ್ನು ಮುರಿದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications