Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PAK Vs SA : ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ, ದಕ್ಷಿಣ ಆಫ್ರಿಕಾ ಸ್ಟಾರ್ ಆಟಗಾರ ಹೊರಕ್ಕೆ, ಪ್ಲೇಯಿಂಗ್ XI,

T20 World Cup 2022: Pakistan Have Won The Tos Opt Batting Against South Africa

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ ಸೆಮಿಫೈನಲ್ ಆಸೆ ಜೀವಂತವಾಗಿರಲಿದೆ. ಒಂದು ವೇಳೆ ಸೋತರೆ ಪಾಕಿಸ್ತಾನ ಟಿ20 ವಿಶ್ವಕಪ್‌ನಿಂದ ಹೊರಬೀಳಲಿದೆ.

ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲ್ಲುವ ಫೇವರಿಟ್ ತಂಡವಾಗಿದೆ. ಬಲಿಷ್ಟ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿರುವ ಹರಿಣಗಳ ಪಡೆ ಇದುವರೆಗೂ ಪಂದ್ಯಾವಳಿಯಲ್ಲಿ ಅಜೇಯವಾಗಿದೆ.

ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಗಾಯಗೊಂಡಿರುವ ಫಖಾರ್ ಜಮಾನ್ ತಂಡದಿಂದ ಹೊರಬಿದ್ದಿದ್ದು, ಮೊಹಮ್ಮದ್ ಹ್ಯಾರಿಸ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ನೆದರ್ಲ್ಯಾಂಡ್ಸ್ ವಿರುದ್ಧ ಆಡಿದ್ದ ತಂಡವೇ ಹರಿಣಗಳ ವಿರುದ್ಧ ಕಣಕ್ಕಿಳಿಯಲಿದೆ. ಪಾಕಿಸ್ತಾನ ಕೂಡ ಬಲಿಷ್ಠ ಬೌಲಿಂಗ್ ವಿಭಾಗವನ್ನು ಹೊಂದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನಡುವ ವಿಶ್ವಾಸದಲ್ಲಿದೆ.

ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ, ಭಾರತದ ವಿರುದ್ಧದ ಪಂದ್ಯದಲ್ಲಿ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದ್ದ ಡೇವಿಡ್ ಮಿಲ್ಲರ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ, ಅವರ ಬದಲಿಗೆ ಹೆನ್ರಿಚ್ ಕ್ಲಾಸೆನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸ್ಪಿನ್ನರ್ ಕೇಶವ್ ಮಹಾರಾಜ್ ಬದಲಿಗೆ ತಬ್ರೈಜ್ ಶಮ್ಸಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಉಭಯ ತಂಡಗಳ ಆಡುವ ಬಳಗ

ದಕ್ಷಿಣ ಆಫ್ರಿಕಾ : ಕ್ವಿಂಟನ್ ಡಿ ಕಾಕ್ , ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಅನ್ರಿಚ್ ನೋಕಿಯಾ, ತಬ್ರೈಜ್ ಶಮ್ಸಿ

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ

Story first published: Thursday, November 3, 2022, 13:22 [IST]
Other articles published on Nov 3, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+