PAK vs NED: ಪಾಕಿಸ್ತಾನ vs ನೆದರ್ಲ್ಯಾಂಡ್ಸ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಭಾನುವಾರ, ಅಕ್ಟೋಬರ್ 30ರಂದು ನಡೆಯಲಿರುವ ಟಿ20 ವಿಶ್ವಕಪ್‌ನ ತನ್ನ ಸೂಪರ್ 12, ಗ್ರೂಪ್ 2ರ ಮುಖಾಮುಖಿಯಲ್ಲಿ ಪಾಕಿಸ್ತಾನ ತಂಡವು ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಸೆಣಸುತ್ತಿದೆ.
ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸ್ಕಾಟ್ ಎಡ್ವರ್ಡ್ಸ್ ನಾಯಕತ್ವದ ನೆದರ್ಲ್ಯಾಂಡ್ಸ್ ತಂಡ ಟಾಸ್ ಗೆದ್ದಿದ್ದು, ಹೀಗಾಗಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಮೊದಲು ಬೌಲಿಂಗ್ ಮಾಡಲಿದೆ.
ಪಾಕಿಸ್ತಾನ ತಂಡವು ಭಾರತ ಮತ್ತು ಜಿಂಬಾಬ್ವೆ ವಿರುದ್ಧ ಸೋತಿದ್ದರೆ, ನೆದರ್ಲ್ಯಾಂಡ್ಸ್ ತಂಡ ಬಾಂಗ್ಲಾದೇಶ ಮತ್ತು ಭಾರತದ ವಿರುದ್ಧ ಸೋಲು ಕಂಡಿದೆ. ಉಭಯ ತಂಡಗಳು ಇಂದಿನ ಹಣಾಹಣಿಯಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಬಯಸುತ್ತಿವೆ. ಏಕೆಂದರೆ ಇದು ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಪಾಕಿಸ್ತಾನ vs ನೆದರ್ಲ್ಯಾಂಡ್ಸ್ ಆಡುವ 11ರ ಬಳಗ
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಖರ್ ಜಮಾನ್ (ಹೈದರ್ ಅಲಿ ಬದಲಾಗಿ), ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ವಾಸಿಮ್.
ನೆದರ್ಲ್ಯಾಂಡ್ಸ್: ಸ್ಟೀಫನ್ ಮೈಬರ್ಗ್ (ವಿಕ್ರಮಜಿತ್ ಸಿಂಗ್ ಬದಲಾಗಿ), ಮ್ಯಾಕ್ಸ್ ಒ'ಡೌಡ್, ಬಾಸ್ ಡಿ ಲೀಡೆ, ಟಾಮ್ ಕೂಪರ್, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ರೋಲೋಫ್ ವ್ಯಾನ್ ಡೆರ್ ಮೆರ್ವೆ (ಲೋಗನ್ ವ್ಯಾನ್ ಬದಲಾಗಿ), ಬ್ರಾಂಡನ್ ಗ್ಲೋವರ್ (ಶರೀಜ್ ಅಹ್ಮದ್ ಬದಲಾಗಿ), ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications