ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

PAK Vs SA : ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನ, ಸೆಮಿಫೈನಲ್ ಆಸೆ ಇನ್ನೂ ಜೀವಂತ

T20 World Cup 2022: Pakistan Won By 33 Runs Against South Africa And Alive In Semi Final Race

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 33 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. 185 ರನ್‌ಗಳ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಮಳೆಯಿಂದಾಗಿ 14 ಓವರ್ ಗಳಲ್ಲಿ 142 ರನ್ ಗುರಿ ನೀಡಲಾಯಿತು. 14 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 108 ರನ್ ಗಳಿಸುವ ಮೂಲಕ 33 ರನ್‌ಗಳ ಸೋಲನುಭವಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಶದಾಬ್ ಖಾನ್ ಮತ್ತು ಇಫ್ತಿಕರ್ ಅಹ್ಮದ್ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. ಬೃಹತ್ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಶಹೀನ್ ಅಫ್ರಿದಿ ಮಾರಕವಾದರು.

ಆತನಂತೆ ರನ್ ಗಳಿಸುವುದು ನಂಬಲಸಾಧ್ಯ ಸಂಗತಿ ಎಂದ ಶೇನ್ ವಾಟ್ಸನ್ಆತನಂತೆ ರನ್ ಗಳಿಸುವುದು ನಂಬಲಸಾಧ್ಯ ಸಂಗತಿ ಎಂದ ಶೇನ್ ವಾಟ್ಸನ್

ಕ್ವಿಂಟನ್ ಡಿ ಕಾಕ್ ಮತ್ತು ರಿಲೀ ರೊಸೊಬ್ ಅವರನ್ನು ಆರಂಭದಲ್ಲೇ ಔಟ್ ಮಾಡುವ ಮೂಲಕ ಆಘಾತ ನೀಡಿದರು. ನಂತರ ನಾಯಕ ಟೆಂಬಾ ಬವುಮಾ 19 ಎಸೆತಗಳಲ್ಲಿ 36 ರನ್ ಗಳಿಸುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಯತ್ನಿಸಿದರು. ಐಡೆನ್ ಮಾರ್ಕ್ರಮ್ 14 ಎಸೆತಗಳಲ್ಲಿ 20 ರನ್ ಗಳಿಸಿ ಶದಾಬ್‌ ಖಾನ್‌ಗೆ ವಿಕೆಟ್ ಒಪ್ಪಿಸಿದರು. ಬವುಮಾ ಕೂಡ ಶಬಾದ್ ಬೌಲಿಂಗ್‌ನಲ್ಲಿ ಔಟಾದರು.

ಪಂದ್ಯಕ್ಕೆ ಅಡ್ಡಿಯಾದ ಮಳೆ

ಪಂದ್ಯಕ್ಕೆ ಅಡ್ಡಿಯಾದ ಮಳೆ

ಈ ಹಂತದಲ್ಲಿ ಮಳೆ ಪಂದ್ಯವನ್ನು ಅಡ್ಡಪಡಿಸಿತು. ಮಳೆ ನಿಂತ ನಂತರ ಪಂದ್ಯವನ್ನು ಮತ್ತೆ ಆರಂಭಿಸಲಾಯಿತು. ಡಿಎಲ್‌ಎಸ್ ನಿಯಮದ ಪ್ರಕಾರ 14 ಓವರ್ ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಯಿತು. ಮಳೆಗೂ ಮುನ್ನ 9 ಓವರ್ ಗಳಲ್ಲಿ 66 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾ ಉಳಿದ 5 ಓವರ್ ಗಳಲ್ಲಿ ಗೆಲುವಿಗೆ 73 ರನ್ ಗಳಿಸಬೇಕಿತ್ತು. 14 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 108 ರನ್ ಗಳಿಸುವ ಮೂಲಕ 33 ರನ್‌ಗಳ ಸೋಲನುಭವಿಸಿತು.

ಉತ್ತಮ ಬೌಲಿಂಗ್ ಸಂಘಟಿಸಿದ ಪಾಕಿಸ್ತಾನ ದಕ್ಷಿಣ ಆಫ್ರಿಕಾ ತಂಡವನ್ನು ಕಟ್ಟಿಹಾಕಿದರು. ಶಾಹೀನ್ ಅಫ್ರಿದಿ 3 ಓವರ್ ಗಳಲ್ಲಿ 14 ರನ್ ನೀಡಿ 3 ವಿಕೆಟ್ ಪಡೆದರು. ಶದಾಬ್ ಖಾನ್ 2 ಓವರ್ ಗಳಲ್ಲಿ 16 ರನ್‌ ನೀಡಿ ಎರಡು ವಿಕೆಟ್ ಪಡೆದು ಮಿಂಚಿದರು.

T20 ವಿಶ್ವಕಪ್: ದ.ಆಫ್ರಿಕಾ ವಿರುದ್ಧ ಪಾಕ್‌ ಗೆದ್ದ ಬಳಿಕ ಪಾಯಿಂಟ್ಸ್ ಟೇಬಲ್‌ ಅಪ್‌ಡೇಟ್

ಶದಾಬ್, ಇಫ್ತಿಕರ್ ಅರ್ಧಶತಕ

ಶದಾಬ್, ಇಫ್ತಿಕರ್ ಅರ್ಧಶತಕ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಆರಂಭದಲ್ಲೇ ಭಾರಿ ಆಘಾತ ಅನುಭವಿಸಿತು. ಆರಂಭಿಕ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಂ ಮತ್ತೆ ವೈಫಲ್ಯ ಅನುಭವಿಸಿದರು. ರಿಜ್ವಾನ್ 4 ರನ್ ಗಳಿಸಿ ಔಟಾದರೆ, ಬಾಬರ್ 6 ರನ್ ಗಳಿಸಿ ಔಟಾದರು.

ಶಾನ್ ಮಸೂದ್ ಕೂಡ 2 ರನ್‌ಗಳಿಗೆ ಔಟಾಗುವ ಮೂಲಕ ಪಾಕಿಸ್ತಾನ ಕಡಿಮೆ ಮೊತ್ತಕ್ಕೆ ಕುಸಿಯುವ ಭೀತಿ ಅನುಭವಿಸಿತ್ತು. ಮೊಹಮ್ಮದ್ ಹ್ಯಾರಿಸ್ 11 ಎಸೆತಗಳಲ್ಲಿ 28 ರನ್ ಸಿಡಿಸಿ ಪಾಕಿಸ್ತಾನಕ್ಕೆ ಚೇತರಿಕೆ ನೀಡಿದರು. ನಂತರ ಬಂದ ಇಫ್ತಿಕರ್ ಅಹ್ಮದ್ 35 ಎಸೆತಗಳಲ್ಲಿ 51 ರನ್ ಗಳಿಸಿದರು. ಮೊಹಮ್ಮದ್ ನವಾಜ್ 22 ಎಸೆತಗಳಲ್ಲಿ 28 ರನ್ ಗಳಿಸಿದರು. ಶದಾಬ್ ಖಾನ್ ಕೇವಲ 22 ಎಸೆತಗಳಲ್ಲಿ 52 ರನ್ ಸಿಡಿಸುವ ಮೂಲಕ ಪಾಕಿಸ್ತಾನ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ದಕ್ಷಿಣ ಆಫ್ರಿಕಾ : ಕ್ವಿಂಟನ್ ಡಿ ಕಾಕ್ , ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಅನ್ರಿಚ್ ನೋಕಿಯಾ, ತಬ್ರೈಜ್ ಶಮ್ಸಿ

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ

Story first published: Thursday, November 3, 2022, 17:45 [IST]
Other articles published on Nov 3, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X