
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಟಿಯಾರ ಶನಿವಾರ ಪರ್ತ್‌ನಲ್ಲಿ ಅಭ್ಯಾಸ ನಡೆಸಿತು. ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಪರ್ತ್ ಪಿಚ್ ಪರಿಶೀಲನೆ ನಡೆಸಲು ಹೋದರು, ಆದರೆ ಮಳೆಯ ಕಾರಣದಿಂದಾಗಿ ಪಿಚ್ ಅನ್ನು ಮುಚ್ಚಲಾಗಿತ್ತು.
ಭಾನುವಾರ ನಡೆಯಲಿರುವ ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಶನಿವಾರ ಟೀಂ ಇಂಡಿಯಾ ಅಭ್ಯಾಸಕ್ಕೆ ಮಳೆ ಅಡ್ಡಿಪಡಿಸಿತು. ಶೀತದ ವಾತಾವರಣವಿದ್ದ ಪರ್ತ್‌ನಲ್ಲಿ ಐಚ್ಛಿಕ ಅಭ್ಯಾಸದ ಅವಧಿಯಲ್ಲಿ ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಕಠಿಣ ಅಭ್ಯಾಸ ನಡೆಸಿದರು.
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಎಲ್ಲಾ ಪ್ರಮುಖ ಆಟಗಾರರು ಬಿಗ್ ಗೇಮ್‌ಗೆ ಮೊದಲು ವಿಶ್ರಾಂತಿ ಪಡೆದರು. ಎರಡೂ ತಂಡಗಳಿಗೆ ಈ ಪಂದ್ಯ ಬಹಳ ಮುಖ್ಯವಾಗಲಿದೆ, ಒಂದು ವೇಳೆ ಭಾರತ ಗೆದ್ದರೆ ತನ್ನ ಸೆಮಿಫೈನಲ್ ಸ್ಥಾನ ಬಹುತೇಕ ಖಚಿತವಾಗಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಮೊದಲು ರಿಷಬ್ ಪಂತ್ ನೆಟ್ಸ್‌ನಲ್ಲಿ ಬೆವರು ಹರಿಸಿದ್ದರು. ಪಂತ್, ದಿನೇಶ್ ಕಾರ್ತಿಕ್, ಶಾರ್ದೂಲ್ ಠಾಕೂರ್ ಮತ್ತು ದೀಪಕ್ ಹೂಡಾ ಅವರೊಂದಿಗೆ ಐಚ್ಛಿಕ ತರಬೇತಿ ಅವಧಿಯಲ್ಲಿ ಕಠಿಣ ಅಭ್ಯಾಸ ನಡೆಸಿದರು. ಈ ಟಿ20 ವಿಶ್ವಕಪ್‌ನಲ್ಲಿ ಪಂತ್ ಒಂದೂ ಪಂದ್ಯವನ್ನು ಆಡಿಲ್ಲ. ಆದರೆ, ಶನಿವಾರದಂದು ಅವರು ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಅಭ್ಯಾಸ ಮಾಡಲು ನಿರ್ಧರಿಸಿದರು.

ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಇಲ್ಲ
ರೋಹಿತ್ ಶರ್ಮಾ ಮತ್ತು ನಾಯಕ ಮತ್ತು ಕೋಚ್ ರಾಹುಲ್ ದ್ರಾವಿಡ್ ಒಟ್ಟಿಗೆ ಆಗಮಿಸಿದರು. ಭಾರತ ತಂಡದ ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ದಿನೇಶ್ ಕಾರ್ತಿಕ್ ನೆಟ್‌ಗೆ ಹೋದರು.
ಸತತವಾಗಿ ಎರಡು ಗೆಲುವಿನ ನಂತರ ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಸಿದ್ಧವಾಗುತ್ತಿರುವ ಭಾರತ ತಂಡದಲ್ಲಿ ಬದಲಾವಣೆಗೆ ಅವಕಾಶವಿಲ್ಲ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ, ಭಾರತ ತಂಡ ಉತ್ತಮವಾಗಿ ಆಡಿತು, ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನೆದರ್ಲ್ಯಾಂಡ್ಸ್ ಅನ್ನು 56 ರನ್‌ಗಳಿಂದ ಸೋಲಿಸಿದರು. ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ತಮ್ಮ ಲಯಕಂಡುಕೊಂಡಿದ್ದು ಭಾರತದ ಚಿಂತೆಯನ್ನು ದೂರ ಮಾಡಿದೆ.
ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್ ಮೊಹಮ್ಮದ್ ಶಮಿ.
ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್