ಟಿ20 ವಿಶ್ವಕಪ್: ಯುವರಾಜ್ ಸಿಂಗ್ ದಾಖಲೆ ಮುರಿದ ರೋಹಿತ್ ಶರ್ಮಾ, ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್

ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಸೂಪರ್ 12 ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದು ನಿಗದಿತ 20 ಓವರ್‌ಗಳಲ್ಲಿ 179 ರನ್ ಕಲೆಹಾಕಿದ್ದು, ಡಚ್ ತಂಡಕ್ಕೆ 180 ರನ್ ಗುರಿ ನೀಡಿದೆ. ಈ ಪಂದ್ಯದಲ್ಲಿ ಹಿಟ್‌ಮ್ಯಾನ್ ರೋಹಿತ್ ಶರ್ಮಾ ನೂತನ ದಾಖಲೆ ಮಾಡಿದ್ದಾರೆ.
ಟೀಂ ಇಂಡಿಯಾ ಪರ ಮಿಂಚಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚುವ ಮೂಲಕ ತಂಡದ ಸ್ಕೋರನ್ನು ಹೆಚ್ಚಿಸಿದ್ರು. ರೋಹಿತ್ ಶರ್ಮಾ 39 ಎಸೆತಗಳಲ್ಲಿ 53ರನ್ ಕಲೆಹಾಕಿ ಟಿ20 ಕ್ರಿಕೆಟ್‌ನಲ್ಲಿ 29 ಅರ್ಧಶತಕ ದಾಖಲಿಸಿದ್ರೆ, ವಿರಾಟ್ ಕೊಹ್ಲಿ ಅಜೇಯ 62 ರನ್ ಕಲೆಹಾಕಿ ಟಿ20 ಕ್ರಿಕೆಟ್‌ನಲ್ಲಿ ದಾಖಲೆಯ 35ನೇ ಅರ್ಧಶತಕದ ದಾಖಲೆ ಬರೆದಿದ್ದಾರೆ. ಜೊತೆಗೆ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅರ್ಧಶತಕದ ಗಡಿದಾಟಿದ್ರು.

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತದ ಬ್ಯಾಟ್ಸ್‌ಮನ್!
ರೋಹಿತ್ ಶರ್ಮಾ 53ರನ್‌ಗಳ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ಒಳಗೊಂಡಿದ್ದವು. 135.90 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿರುವ ರೋಹಿತ್ ಟಿ20 ವಿಶ್ವಕಪ್‌ನಲ್ಲಿ ನೂತನ ದಾಖಲೆ ಬರೆದಿದ್ದಾರೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ದಾಖಲಿಸಿದ ಟೀಂ ಇಂಡಿಯಾ ಬ್ಯಾಟರ್ ಎಂಬ ದಾಖಲೆ ರೋಹಿತ್ ಹೆಸರಿಗೆ ಸೇರಿದೆ.
ಟಿ20 ವಿಶ್ವಕಪ್‌ನಲ್ಲಿ ಇದುವರೆಗೂ ರೋಹಿತ್ ಶರ್ಮಾ 34 ಬಾರಿ ಚೆಂಡನ್ನು ಬೌಂಡರಿ ಗೆರೆ ದಾಟಿಸಿದ್ದು ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಟಿ20 ವಿಶ್ವಕಪ್‌ನಲ್ಲಿ 33 ಸಿಕ್ಸರ್ ಸಿಡಿಸಿದ ದಾಖಲೆಯನ್ನು ಹೊಂದಿದ್ದಾರೆ.
T20 ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ದ.ಆಫ್ರಿಕಾಗೆ ಭರ್ಜರಿ ಗೆಲುವು, 104ರನ್‌ಗಳಿಂದ ಸೋತ ಶಕೀಬ್ ಪಡೆ

T20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿರುವ ಕ್ರಿಸ್‌ಗೇಲ್
ಇನ್ನು ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆಯು ವಿಂಡೀಸ್ ದೈತ್ಯ ಕ್ರಿಸ್‌ಗೇಲ್ ಹೆಸರಿನಲ್ಲಿದೆ. ಕ್ರಿಸ್‌ಗೇಲ್ ನಿವೃತ್ತಿಗೂ ಮುನ್ನ ಚುಟುಕು ವಿಶ್ವಕಪ್‌ನಲ್ಲಿ 63 ಸಿಕ್ಸರ್ ಸಿಡಿಸಿದ್ದಾರೆ. ಇದೀಗ ಗೇಲ್ ಬಳಿಕ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರಲ್ಲಿ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ.
IND vs NED: ರೋಹಿತ್, ಕೊಹ್ಲಿ, ಸೂರ್ಯ ಆಕರ್ಷಕ ಅರ್ಧಶತಕ; ನೆದರ್ಲ್ಯಾಂಡ್ಸ್‌ಗೆ ಬೃಹತ್ ಗುರಿ ನೀಡಿದ ಭಾರತ

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿ
ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿಯನ್ನ ಈ ಕೆಳಗೆ ಕಾಣಬಹುದು
ಕ್ರಿಸ್‌ಗೇಲ್ 63
ರೋಹಿತ್ ಶರ್ಮಾ 34*
ಯುವರಾಜ್ ಸಿಂಗ್ 33
ಶೇನ್ ವ್ಯಾಟ್ಸನ್ 31
ಎಬಿಡಿ ವಿಲಿಯರ್ಸ್ 30
ಮಹೇಲಾ ಜಯವರ್ಧನೆ 25
ವಿರಾಟ್ ಕೊಹ್ಲಿ 25*
ಡ್ವೇನ್ ಬ್ರಾವೋ 24
ಜೆ.ಪಿ ಡುಮಿನಿ 23
ಶಕೀಬ್ ಅಲ್ ಹಸನ್ 23
ರಾಸ್ ಟೇಲರ್ 23
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications