ಬಾಂಗ್ಲಾದೇಶ vs ದ. ಆಫ್ರಿಕಾ: ರೊಸ್ಸೊ ಅಬ್ಬರದ ಶತಕಕ್ಕೆ ಶಕೀಬ್ ಪಡೆ ತಬ್ಬಿಬ್ಬು: ಬಾಂಗ್ಲಾ ಗೆಲುವಿಗೆ ದೊಡ್ಡ ಗುರಿ

ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರಿಲೇ ರೊಸ್ಸೋ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ಅಬ್ಬರದ ಶತಕ ಸಿಡಿಸಿದ್ದಾರೆ. ಇದರ ಪರಿಣಾಮವಾಗಿ ದಕ್ಷಿಣ ಆಫ್ರಿಕಾ ತಂಡ ಬಾಂಗ್ಲಾದೇಶದ ವಿರುದ್ಧ ಬೃಹತ್ ಗಳಿಸಲು ಯಶಸ್ವಿಯಾಗಿದ್ದು ಬಾಂಗ್ಲಾದೇಶಕ್ಕೆ ಕಠಿಣ ಗುರಿಯನ್ನು ನಿಗದಿಪಡಿಸಿದೆ. ಕ್ವಿಂಟನ್ ಡಿಕಾಕ್ ಹಾಗೂ ರಲೇ ರೊಸ್ಸೋ ಜೋಡಿ ಬಾಂಗ್ಲಾ ಬೌಲರ್‌ಗಳ ಸಂಪೂರ್ಣವಾಗಿ ದಂಡಿಸಿದ್ದು ಬೃಹತ್ ಮೊತ್ತಕ್ಕೆ ಕಾರಣವಾದರು.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ತಂಡ ನಾಯಕ ಟೆಂಬಾ ಬವುಮಾ ವಿಕೆಟ್‌ಅನ್ನು ಆರಂಭದಲ್ಲಿಯೇ ಕಳೆದುಕೊಂಡಿತು. ಆದರೆ ಕ್ವಿಂಟನ್ ಡಿಕಾಕ್ ಹಾಗೂ ರೋಸ್ಸೋ ಜೋಡಿ ದಕ್ಷಿಣ ಆಫ್ರಿಕಾ ತಂಡಕ್ಕೆ ಯಾವುದೇ ಹಿನ್ನಡೆಯಾಗದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು. ಸ್ಪೋಟಕವಾಗಿ ಬ್ಯಾಟಿಂಗ್ ನಡೆಸುತ್ತಾ ಸಾಗಿದ ಆಫ್ರಿಕಾದ ಈ ಜೋಡಿ ಎರಡನೇ ವಿಕೆಟ್‌ಗೆ 168 ರನ್‌ಗಳ ಜೊತೆಯಾಟವನ್ನು ನೀಡಿತು.
ಈ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ 38 ಎಸೆತಗಳಲ್ಲಿ 63 ರನ್‌ಗಳನ್ನು ಗಳಿಸಿದರೆ ರೊಸ್ಸೋ 56 ಎಸೆತಗಳಲ್ಲಿ 109 ರನ್‌ಗಳನ್ನು ಗಳಿಸಿದರು. ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್‌ಗಳನ್ನು ಗಳಿಸಿದೆ. ಈ ಮೂಲಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಸೂಪರ್ 12 ಹಂತದಲ್ಲಿ ಬಾಂಗ್ಲಾದೇಶ ಮೊದಲ ಪಂದ್ಯವನ್ನು ನೆದರ್ಲೆಂಡ್ಸ್ ತಂಡದ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ 9 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಆದರೆ ದಕ್ಷಿಣ ಆಫ್ರಿಕಾ ತಂಡದ ಮೊದಲ ಪಂದ್ಯ ಜಿಂಬಾಬ್ವೆ ವಿರುದ್ಧ ನಿಗದಿಯಾಗಿತ್ತಾದರೂ ಈ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆದ್ದು ಅಂಕವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸಲಿದೆ ಎರಡು ತಂಡಗಳು.
ದಕ್ಷಿಣ ಆಫ್ರಿಕಾ ಆಡುವ ಬಳಗ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಕಿ ನಾರ್ಜಿಯಾ, ತಬ್ರೈಜ್ ಶಮ್ಸಿ
ಬೆಂಚ್: ಮಾರ್ಕೊ ಜಾನ್ಸೆನ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಲುಂಗಿ ಎನ್ಗಿಡಿ
ಬಾಂಗ್ಲಾದೇಶ ಆಡುವ ಬಳಗ
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನೂರುಲ್ ಹಸನ್, ಮೊಸದ್ದೆಕ್ ಹೊಸೈನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಎಬಾಡೋತ್ ಹೊಸೈನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಯಾಸಿರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications