ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಟೀಮ್ ಇಂಡಿಯಾ ಅಲ್ಲ, ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಭಾರತದ ಮಾಜಿ ಕ್ರಿಕೆಟಿಗ

T20 World Cup 2022: Saba Karim said Australia is Most Favorite team To Win The World Cup

ಟಿ20 ವಿಶ್ವಕಪ್‌ನ ಆರಂಭಕ್ಕೆ ಇನ್ನು ಒಂದು ತಿಂಗಳಿಗಿಂತಲೂ ಕಡಿಮೆ ಸಮಯಾವಕಾಶವಿದೆ. ಈ ಮಹತ್ವದ ಟೂರ್ನಿಗೂ ಮುನ್ನ ಭಾರತ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಟಿ20 ಸರಣಿಯಲ್ಲಿ ಭಾಗಿಯಾಗುವ ಮೂಲಕ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆರಟಿಗ ಸಬಾ ಕರೀಮ್ ಪ್ರತಿಕ್ರಿಯೆ ನೀಡಿದ್ದು ಈ ಬಾರಿಯ ಟಿ20 ವಿಶ್ವಕಪ್‌ ಗೆಲ್ಲುವ ಸಾಧ್ಯತೆಯಿರುವ ನೆಚ್ಚಿನ ತಂಡವನ್ನು ಹೆಸರಿಸಿದ್ದಾರೆ.

ಈ ವರ್ಷದಲ್ಲಿ ಆಡಿರುವ ಎಲ್ಲಾ ದ್ವಿಕ್ಷೀಯ ಸರಣಿಯಲ್ಲಿಯೂ ಅಮೋಘ ಪ್ರದರ್ಶನ ನೀಡಿದ್ದ ಭಾರತ ತಂಡ ಕಳೆದ ಏಷ್ಯಾ ಕಪ್ ಟೂರ್ನಿಯಲ್ಲಿ ಮಾತ್ರ ನೀರಸ ಪ್ರದರ್ಶನ ನೀಡಿತ್ತು. ಅದರಲ್ಲೂ ಬೌಲಿಂಗ್ ವಿಭಾಗದ ಪ್ರದರ್ಶನ ಭಾರತ ತಂಡದ ಕಳವಳವನ್ನು ಹೆಚ್ಚಿಸಿದೆ. ಜಸ್ಪ್ರೀತ್ ಬೂಮ್ರಾ ಅವರಂಥಾ ಅನುಭವಿ ಟಿ20 ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗಿದ್ದರು ಕೂಡ ಆಸಿಸ್ ನೆಲದಲ್ಲಿ ಒಟ್ಟಾರೆ ತಂಡವಾಗಿ ಭಾರತ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲವಾಗಿದೆ.

ಲಾರ್ಡ್ಸ್‌ ಮೈದಾನದಲ್ಲಿ ಕ್ರಿಕೆಟ್ ವೃತ್ತಿಜೀವನಕ್ಕೆ ಅಂತ್ಯ ಹಾಡಿದ ಜೂಲನ್ ಗೋಸ್ವಾಮಿಲಾರ್ಡ್ಸ್‌ ಮೈದಾನದಲ್ಲಿ ಕ್ರಿಕೆಟ್ ವೃತ್ತಿಜೀವನಕ್ಕೆ ಅಂತ್ಯ ಹಾಡಿದ ಜೂಲನ್ ಗೋಸ್ವಾಮಿ

ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಸಬಾ ಕರೀಮ್

ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಸಬಾ ಕರೀಮ್

ಇನ್ನು ವಿಶ್ವಕಪ್‌ನ ಆರಂಭಕ್ಕೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗರು ಹಾಗೂ ಕ್ರಿಕೆಟ್ ವಿಶ್ಲೇಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು ಎಂದು ಹೆಸರಿಸಿದ್ದಾರೆ. ಹಾಲಿ ಚಾಂಪಿಯನ್ ಹಾಗೂ ಈ ಬಾರಿಯ ವಿಶ್ವಕಪ್‌ನ ಆತಿಥೇಯ ರಾಷ್ಟ್ರವಾಗಿರುವ ಆಸ್ಟ್ರೇಲಿಯಾವೇ ವಿಶ್ವಕಪ್ ಟೂರ್ನಿ ಗೆಲ್ಲುವ ನೆಚ್ಚಿನ ತಂಡ ಎಂದಿದ್ದಾರೆ ಸಬಾ ಕರೀಮ್.

ಕಾರಣ ವಿವರಿಸಿದ ಸಬಾ ಕರೀಮ್

ಕಾರಣ ವಿವರಿಸಿದ ಸಬಾ ಕರೀಮ್

ಅನೇಕ ಮಾಜಿ ಕ್ರಿಕೆಟಿಗರ ಅಭಿಪ್ರಾಯದಂತೆ ಸಬಾ ಕರೀಮ್ ಕೂಡ ಆಸ್ಟ್ರೇಲಿಯಾ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದಿದ್ದಾರೆ. ಇದಕ್ಕೆ ಅವರು ಕೆಲ ಕಾರಣಗಳನ್ನು ಕೂಡ ನೀಡಿದ್ದಾರೆ. ಆಸ್ಟ್ರೇಲಿಯಾ ತಂಡದ ಸಾಕಷ್ಟು ಅತ್ಯುತ್ತಮ ಬಿಗ್ ಹಿಟ್ಟರ್‌ಗಳನ್ನು ಹೊಂದಿದೆ, ಅಲ್ಲದೆ ಈ ಬಾರಿಯ ವಿಶ್ವಕಪ್ ಟೂರ್ನಿ ಅದರ ತವರಿನಲ್ಲಿಯೇ ನಡೆಯುತ್ತಿದೆ. ತವರಿನ ಲಾಭವನ್ನು ಆಸಿಸ್ ಪೆ ಉತ್ತಮವಾಗಿ ಬಳಸಿಕೊಳ್ಳುವ ನಿರೀಕ್ಷೆಯಿದ್ದು ಟ್ರೋಫಿಯನ್ನು ತನ್ನಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಸಬಾ ಕರೀಮ್ ವಿವರಿಸಿದ್ದಾರೆ.

ಬಿಗ್ ಹಿಟ್ಟರ್‌ಗಳ ಪಾತ್ರ ಪ್ರಮುಖ

ಬಿಗ್ ಹಿಟ್ಟರ್‌ಗಳ ಪಾತ್ರ ಪ್ರಮುಖ

ಇನ್ನು ಈ ಬಾರಿಯ ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾರಣ ಅಲ್ಲಿನ ಕ್ರೀಡಾಂಗಣಗಳ ಸ್ವರೂಪಗಳ ಬಗ್ಗೆ ಕೂಡ ವಿಶ್ಲೇಷಣೆಗಳು ನಡೆಯುತ್ತಿದೆ. ಆಸಿಸ್ ನೆಲದ ಕ್ರೀಡಾಂಗಣಗಳು ದೊಡ್ಡದಾಗಿದ್ದು ಇಲ್ಲಿ ಸಿಕ್ಸರ್‌ಗಳನ್ನು ಬಾರಿಸಲು ಪವರ್‌ಹಿಟ್ಟರ್‌ಗಳು ಯಾವುದೇ ತಂಡಕ್ಕಾದರೂ ಶಕ್ತಿ ನೀಡಬಲ್ಲರು. ಆಸ್ಟ್ರೇಲಿಯಾ ತಂಡದಲ್ಲಿ ಅಂಥಾ ಪವರ್‌ಹಿಟ್ಟರ್‌ಗಳ ಸಂಖ್ಯೆ ಹೆಚ್ಚಾಗಿದೆ ಎಂಬುದು ಸಬಾ ಕರೀಮ್ ಅಭಿಪ್ರಾಯ. ಆಸ್ಟ್ರೇಲಿಯಾ ತಂಡದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮಿಚೆಲ್ ಮಾರ್ಶ್ ಮತ್ತು ಮಾರ್ಕಸ್ ಸ್ಟೋಯ್ನಿಸ್‌ರಂತಾ ಆಟಗಾರರು ಆಸ್ಟ್ರೇಲಿಯಾ ತಂಡದ ವಿಶ್ವಕಪ್‌ನ ಅಭಿಯಾನದಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಸಬಾ ಕರೀಮ್ ಹೇಳಿದ್ದಾರೆ.

ಕುತೂಹಲ ಮೂಡಿಸಿದ ಆಸಿಸ್ ವಿರುದ್ಧದ ಟಿ20 ಸರಣಿ

ಕುತೂಹಲ ಮೂಡಿಸಿದ ಆಸಿಸ್ ವಿರುದ್ಧದ ಟಿ20 ಸರಣಿ

ಇನ್ನು ಈ ಬಾರಿಯ ವಿಶ್ವಕಪ್‌ ಟೂರ್ನಿಗೂ ಮುನ್ನ ಭಾರತ ತಂಡ ಆಸ್ಟ್ರೇಲಿಯಾವನ್ನು ತವರಿನಲ್ಲಿ ಮೂರು ಪಂದ್ಯಗಳ ಚುಟುಕು ಸರಣಿಯಲ್ಲಿ ಎದುರಿಸಿದೆ. ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ವಿಭಾಗ ಅಮೋಘ ಪ್ರದರ್ಶನ ನೀಡಿದ್ದರೂ ಬೌಲಿಂಗ್ ವಿಭಾಗ ಮತ್ತೊಮ್ಮೆ ಹಿನ್ನಡೆ ಅನುಭವಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಭಾರತ ಸೋಲು ಅನುಭವಿಸುವಂತಾಯಿತು. ಆದರೆ ಎರಡನೇ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದರು ಕೂಡ ಭಾರತ ತಂಡದ ಪ್ರದರ್ಶನ ಗಮನಾರ್ಹವಾಗಿತ್ತು. ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್‌ನಲ್ಲಿ ಸ್ಪೋಟಕ ಪ್ರದರ್ಶನ ನೀಡಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ. ಹೀಗಾಗಿ ಹೈದರಾಬಾದ್‌ನಲ್ಲಿ ನಡೆಯುವ ಅಂತಿಮ ಪಂದ್ಯ ಸರಣಿಯ ನಿರ್ಣಾಯಕ ಪಂದ್ಯ ಎನಿಸಿಕೊಂಡಿದ್ದು ಕುತೂಹಲ ಹೆಚ್ಚಿಸಿದೆ.

Story first published: Sunday, September 25, 2022, 13:05 [IST]
Other articles published on Sep 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X