ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಈತನನ್ನು ಪರಿಗಣಿಸಬೇಕಿತ್ತು, ಅನ್ಯಾಯವಾಗಿದೆ; ದಾನೀಶ್ ಕನೇರಿಯಾ

ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2022ರಲ್ಲಿ ರೋಹಿತ್ ಶರ್ಮಾ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್‌ನಲ್ಲಿ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.
ಸೋಮವಾರ (ಸೆಪ್ಟೆಂಬರ್ 12)ದಂದು ಬಿಸಿಸಿಐ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯು, ಟಿ20 ವಿಶ್ವಕಪ್ 2022ಗಾಗಿ 15 ಸದಸ್ಯರ ತಂಡವನ್ನು ಮತ್ತು ಪಂದ್ಯಾವಳಿಗಾಗಿ 4 ಸ್ಟ್ಯಾಂಡ್‌ಬೈ ಆಟಗಾರರನ್ನು ಘೋಷಿಸಿದೆ.
ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದಾನೀಶ್ ಕನೇರಿಯಾ ಭಾರತ ತಂಡದ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ್ದು, "ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರಿಗಿಂತ ಮುಂಚಿತವಾಗಿ 2022ರ ಐಸಿಸಿ ಟಿ20 ವಿಶ್ವಕಪ್‌ಗಾಗಿ ಭಾರತದ ತಂಡದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಬೇಕಿತ್ತು," ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐ ಭಾರತದ 15 ಸದಸ್ಯರ ತಂಡವನ್ನು ಪ್ರಕಟ
ಅಕ್ಟೋಬರ್ 22ರಿಂದ ಪ್ರಾರಂಭವಾಗುವ ಟಿ20 ವಿಶ್ವಕಪ್ 2022ಗಾಗಿ ಬಿಸಿಸಿಐ ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಿದ ನಂತರ ದಾನೀಶ್ ಕನೇರಿಯಾ ಅವರಿಂದ ಈ ಹೇಳಿಕೆಗಳು ಬಂದಿವೆ.
ಸಂಜು ಸ್ಯಾಮ್ಸನ್ ಭಾರತದ ವೈಟ್-ಬಾಲ್ ತಂಡದಲ್ಲಿ ಹೊರಗಿದ್ದಾರೆ ಮತ್ತೆ ಮುಂಬರುವ ಟಿ20 ವಿಶ್ವಕಪ್‌ಗಾಗಿ ಆಯ್ಕೆದಾರರಿಂದ ಕಡೆಗಣಿಸಲ್ಪಟ್ಟಿದ್ದಾರೆ. ಗಮನಾರ್ಹವಾಗಿ, ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್‌ಗೆ ಸ್ಯಾಮ್ಸನ್ ಅವರನ್ನು ಪರಿಗಣಿಸಲಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಭಾರತದ ತವರು ಸರಣಿಗಳಿಗೂ ಅವರನ್ನು ನಿರ್ಲಕ್ಷಿಸಲಾಗಿದೆ
"ಸಂಜು ಸ್ಯಾಮ್ಸನ್ ಅವರಂತಹವರಿಗೆ ಸ್ವಲ್ಪ ಅನ್ಯಾಯವಾಗಿದೆ. ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಪರಿಗಣಿಸಬೇಕಾಗಿತ್ತು. ಸ್ಥಾನ ಸಿಗದಿದ್ದಲ್ಲಿ ಅವರು ಏನು ತಪ್ಪು ಮಾಡಿದ್ದಾರೆ? ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ತವರು ಸರಣಿಗಳಿಗೂ ಅವರನ್ನು ನಿರ್ಲಕ್ಷಿಸಲಾಗಿದೆ. ನಾನು ರಿಷಭ್ ಪಂತ್ ಬದಲಿಗೆ ಸ್ಯಾಮ್ಸನ್‌ರನ್ನು ಆಯ್ಕೆ ಮಾಡುತ್ತೇನೆ," ಎಂದು ದಾನೀಶ್ ಕನೇರಿಯಾ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.
ಟಿ20 ವಿಶ್ವಕಪ್‌ಗೆ ಭಾರತವು ಉಮ್ರಾನ್ ಮಲಿಕ್ ಅವರನ್ನು ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಬೇಕಿತ್ತು ಎಂದು ಕೂಡ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಕನೇರಿಯಾ ಸಲಹೆ ನೀಡಿದರು.

ರೋಹಿತ್ ಶರ್ಮಾ, ಕೆಎಲ್ ರಾಹುಲ್ ರನ್ ಗಳಿಸಬೇಕು
"ಭಾರತೀಯ ಬ್ಯಾಟರ್‌ಗಳು ಸ್ಥಿರವಾಗಿ ವೇಗವಾಗಿ ಬೌಲಿಂಗ್ ಮಾಡುವ ಬೌಲರ್ ವಿರುದ್ಧ ಅಭ್ಯಾಸ ಮಾಡಬೇಕಾಗಿರುವುದರಿಂದ ಉಮ್ರಾನ್ ಮಲಿಕ್ ಅವರನ್ನು ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಒಬ್ಬರನ್ನಾಗಿ ಭಾರತ ಇರಿಸಬಹುದಿತ್ತು".
ಇನ್ನು ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಕೆಎಲ್ ರಾಹುಲ್ ಅವರ ಫಾರ್ಮ್ ಭಾರತ ತಂಡಕ್ಕೆ ಬಹಳ ಮುಖ್ಯ ಎಂದು ಕನೇರಿಯಾ ಭಾವಿಸಿದ್ದಾರೆ.
"ಅದೇ ರೀತಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವಾಗ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರಂತಹವರು ದೊಡ್ಡ ರನ್ ಗಳಿಸಬೇಕು. ಇಲ್ಲದಿದ್ದರೆ, ಅವರ ಅಭಿಯಾನವು ಏಷ್ಯಾ ಕಪ್‌ನಲ್ಲಿದ್ದಂತೆಯೇ ಇರುತ್ತದೆ," ಎಂದು ದಾನೀಶ್ ಕನೇರಿಯಾ ತಿಳಿಸಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications