ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್ ಸವಾಲು ಗೆದ್ದು ಫೈನಲ್‌ಗೇರುತ್ತಾ ಪಾಕಿಸ್ತಾನ?

T20 World Cup 2022 Semi Final 1, Can Pakistan beat New Zealand in 1st Semi Final

ಟಿ20 ವಿಶ್ವಕಪ್‌ನಲ್ಲಿ ಬುಧವಾರ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶ ಪಡೆಯಲಿದ್ದು ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಹೀಗಾಗಿ ಬುಧವಾರದ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದ್ದು ಯಾರಿಗೆ ಮೇಲುಗೈ ದೊರೆಯಲಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಪಾಕಿಸ್ತಾನ ತಂಡ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸುವ ಮೂಲಕ ಹಿನ್ನಡೆ ಅನುಭವಿಸಿತ್ತು. ಆದರೆ ನಂತರದ ಮೂರು ಪಂದ್ಯಗಳಲ್ಲಿ ಕೂಡ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಹಾಗಿದ್ದರೂ ಪಾಕಿಸ್ತಾನಕ್ಕೆ ಸೆಮಿಫೈನಲ್ ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟಿದ್ದು ನೆದರ್ಲೆಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಅಂತಿಮ ಪಂದ್ಯ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್‌ಗೆ ಆಘಾತಕಾರಿ ರೀತಿಯಲ್ಲಿ ಶರಣಾಗಿತ್ತು. ಇದು ದಕ್ಷಿಣ ಆಫ್ರಿಕಾದ ಸೆಮಿಫೈನಲ್ ಕನಸನ್ನು ಭಗ್ನಗೊಳಿಸಿದರೆ ಪಾಕಿಸ್ತಾನದ ಕನಸು ಜೀವಂತವಾಗಿರುವಂತೆ ಮಾಡಿತು. ಬಳಿಕ ಬಾಂಗ್ಲಾದೇಶ ತಂಡವನ್ನು ಮಣಿಸಿ ಪಾಕ್ ಪಡೆ ಸೆಮಿಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ.

IND vs ENG: ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ; ರೋಹಿತ್ ಶರ್ಮಾಗೆ ಗಾಯIND vs ENG: ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ; ರೋಹಿತ್ ಶರ್ಮಾಗೆ ಗಾಯ

ನ್ಯೂಜಿಲೆಂಡ್ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿಕೊಂಡು ಬಂದಿರುವ ತಂಡವಾಗಿದ. ಇದರ ಪರಿಣಾಮವಾಗಿ ಕಿವೀಸ್ ಬಳಗ ಗ್ರೂಪ್ 1ರ ಅಗ್ರ ತಂಡವಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಆದರೆ ಪಾಕಿಸ್ತಾನದ ಪರಿಸ್ಥಿತಿ ತೀರಾ ಭಿನ್ನವಾಗಿದೆ. ತಂಡದ ಪ್ರತಿಯೊಂದು ವಿಭಾಗ ಕೂಡ ಸ್ಥಿರ ಪ್ರದರ್ಶನ ನೀಡಲು ವಿಫಲವಾಗುತ್ತಿದೆ. ಆರಂಭಿಕ ಆಟಗಾರರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಈ ಟೂರ್ನಿಯಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ನ್ಯೂಜಿಲೆಂಡ್ ತಂಡ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭರ್ಜರಿಯಾಗಿ ಮಣಿಸಿ ಅದ್ಭುತ ಆರಂಭವನ್ನು ಪಡೆದಿತ್ತು. ಅದಾದ ಬಳಿಕ ಅಫ್ಘಾನಿಸ್ತಾನದ ವಿರುದ್ಧ ಸುಲಭ ಗೆಲುವು ದಾಖಲಿಸಿದ ಕಿವೀಸ್ ಪಡೆ ನಂತರ ಇಂಗ್ಲೆಂಡ್ ವಿರುದ್ಧ ಸೋಲಿನ ರುಚಿ ಅನುಭವಿಸಿತ್ತು. ನಂತರದ ಎರಡು ಪಂದ್ಯಗಳಲ್ಲಿ ಶ್ರೀಲಂಕಾ ಹಾಗೂ ನೆದರ್ಲೆಂಡ್‌ ತಂಡವನ್ನು ಎದುರಿಸಿ ಗೆಲುವು ಸಾಧಿಸಿದ ನ್ಯೂಜಿಲೆಂಡ್ ಸಿಲಭವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದು ಮಾತ್ರವಲ್ಲದೆ ಅಗ್ರ ಸ್ಥಾನವನ್ನು ಕೂಡ ಪಡೆದುಕೊಂಡಿತ್ತು.

ನ್ಯೂಜಿಲೆಂಡ್: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ನವಾಜ್, ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ, ಖುಶ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ

Story first published: Tuesday, November 8, 2022, 23:34 [IST]
Other articles published on Nov 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X