Nz vs Pak : ನ್ಯೂಜಿಲೆಂಡ್ vs ಪಾಕಿಸ್ತಾನ ಸೆಮಿಫೈನಲ್ ಹಣಾಹಣಿ: ಹವಾಮಾನ ವರದಿ, ಆಡುವ ಬಳಗ ಹಾಗೂ ಪಿಚ್ ರಿಪೋರ್ಟ್

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಪಂದ್ಯಗಳ ಆರಂಭಕ್ಕೆ ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಬುಧವಾರ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ. ಗ್ರೂಪ್ 1ರಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿರುವ ನ್ಯೂಜಿಲೆಂಡ್ ತಂಡ ಅತ್ಯಂತ ಸ್ಥಿರ ಪ್ರದರ್ಶನ ನೀಡಿ ಮಿಂಚುತ್ತಿರುವ ತಂಡವಾಗಿದೆ. ಇತ್ತ ಪಾಕಿಸ್ತಾನ ಅಸ್ಥಿರ ಪ್ರದರ್ಶನ ನೀಡುತ್ತಿದ್ದು ಅಚ್ಚರಿಯೆಂಬಂತೆ ಅಂತಿಮ ಕ್ಷಣದಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದೆ.
ಪಾಕಿಸ್ತಾನ ತಂಡ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸುವ ಮೂಲಕ ಹಿನ್ನಡೆ ಅನುಭವಿಸಿತ್ತು. ಆದರೆ ನಂತರದ ಮೂರು ಪಂದ್ಯಗಳಲ್ಲಿ ಕೂಡ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಹಾಗಿದ್ದರೂ ಪಾಕಿಸ್ತಾನಕ್ಕೆ ಸೆಮಿಫೈನಲ್ ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟಿದ್ದು ನೆದರ್ಲೆಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಅಂತಿಮ ಪಂದ್ಯ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್‌ಗೆ ಆಘಾತಕಾರಿ ರೀತಿಯಲ್ಲಿ ಶರಣಾಗಿತ್ತು. ಇದು ದಕ್ಷಿಣ ಆಫ್ರಿಕಾದ ಸೆಮಿಫೈನಲ್ ಕನಸನ್ನು ಭಗ್ನಗೊಳಿಸಿದರೆ ಪಾಕಿಸ್ತಾನದ ಕನಸು ಜೀವಂತವಾಗಿರುವಂತೆ ಮಾಡಿತು. ಬಳಿಕ ಬಾಂಗ್ಲಾದೇಶ ತಂಡವನ್ನು ಮಣಿಸಿ ಪಾಕ್ ಪಡೆ ಸೆಮಿಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ
ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯ ಬುಧವಾರ ಸಿಡ್ನಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಹವಾಮಾನ ವರದಿ: ಪಂದ್ಯದ ದಿನ ಸಿಡ್ನಿ ಕ್ರೀಡಾಂಗಣದ ಪರಿಸರದಲ್ಲಿ ಮೋಡಕವಿದ ವಾತಾವರಣವಿರಲಿದೆ. 15-21 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದ್ದು ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳು ಇಲ್ಲ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಪಿಚ್ ರಿಪೋರ್ಟ್: ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲ ನೀಡುವ ಸಾಧ್ಯತೆಯಿದೆ. ಚೆಂಡು ಬ್ಯಾಟ್‌ಗೆ ನೇರವಾಗಿ ಬರುವ ಕಾರಣ ಇಲ್ಲಿ ಬ್ಯಾಟಿಂಗ್ ನಡೆಸುವುದನ್ನು ಬ್ಯಾಟರ್‌ಗಳು ಆನಂದಿಸಲಿದ್ದಾರೆ. ಇಲ್ಲಿನ ಮೇಲ್ಮೈನಲ್ಲಿ ಬೌಲರ್‌ಗಳು ಲೈನ್ ಮತ್ತು ಲೆಂತ್‌ನಲ್ಲಿ ಎಡವದಿದ್ದರೆ ಮಾತ್ರವೇ ಯಶಸ್ಸು ಸಾಧಿಸಬಹುದು.

ಸಂಭಾವ್ಯ ಆಡುವ ಬಳಗ ಹೀಗಿದೆ
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಡೇರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications