Ind vs Eng : ಸೆಮಿಫೈನಲ್‌ನಲ್ಲಿ ಭಾರತಕ್ಕೆ ಇಂಗ್ಲೆಂಡ್ ಸವಾಲು: ಪಂದ್ಯದ ಸಮಯ, ಹವಾಮಾನ, ಸಂಭಾವ್ಯ ಆಡುವ ಬಳಗ

ಟಿ20 ವಿಶ್ವಕಪ್‌ನಲ್ಲಿ ಗುರುವಾರ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಹಾಗೂ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಭಾನುವಾರ ನಡೆಯಲಿರುವ ಫೈನಲ್ ಹಂತದ ಮುಖಾಮುಖಿಯಲ್ಲಿ ಸೆಣೆಸಾಡಲಿದೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು. ಆಡಿದ ಐದು ಪಂದ್ಯಗಳ ಪೈಕಿ ಭಾರತ ನಾಲ್ಕು ಗೆಲುವು ಸಾಧಿಸಿದ್ದು ಅಗ್ರಸ್ಥಾನಿಯಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ 71 ರನ್‌ಗಳ ಬೃಹತ್ ಅಂತರದೊಂದಿಗೆ ಭಾರತ ಗೆಲುವು ಸಾಧಿಸಿದೆ. ಮತ್ತೊಂದೆಡೆ ಇಂಗ್ಲೆಂಡ್ ತಂಡ ಐದು ಪಂದ್ಯಗಳ ಪೈಕಿ ಮೂರು ಗೆಲುವು ಒಂದು ಸೋಲು ಹಾಗೂ ಪಂದ್ಯ ಪಂದ್ಯದ ಮಳೆಗೆ ಆಹುತಿಯಾಗಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಗುರುವಾರ ಅಡಿಲೇಡ್ ಮೈದಾನದಲ್ಲಿ ಎರಡನೇ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
FIFA World Cup 2022: ನೇಮರ್ ನಾಯಕತ್ವದ 5 ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡ ಪ್ರಕಟ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಹವಾಮಾನ ವರದಿ: ಪಂದ್ಯದ ದಿನ ಅಡಿಲೇಡ್ ಸುತ್ತಮುತ್ತ ಪಂದ್ಯಕ್ಕೆ ಪೂರಕವಾದ ವಾತಾವರಣವಿರಲಿದೆ. 13-22 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದ್ದು ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳು ಇಲ್ಲ ಎಂದು ಹವಾಮಾನ ವರದಿಗಳಿಂದ ಸ್ಪಷ್ಟವಾಗಿದೆ.
ಪಿಚ್ ರಿಪೋರ್ಟ್: ಅಡಿಲೇಡ್ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಕ್ಕೆ ಸಮಾನವಾಗಿ ಬೆಂಬಲ ನೀಡಲಿದೆ. ಆರಂಭದಲ್ಲಿ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲ ನೀಡುವ ಸಾಧ್ಯತೆಯಿದ್ದು ನಂತರ ಸ್ಪಿನ್ನರ್‌ಗಳಿಗೆ ಉತ್ತಮ ನೆರವು ದೊರೆಯಲಿದೆ. ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳನ್ನು ಎದುರಿಸುವಾಗ ಬ್ಯಾಟರ್‌ಗಳು ಎಚ್ಚರಿಕೆಯಿಂದ ಆಡಬೇಕಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್/ ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಅಲೆಕ್ಸ್ ಹೇಲ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್

ಫೈನಲ್‌ಗೇರಿದ ಪಾಕಿಸ್ತಾನ
ಮತ್ತೊಂದೆಡೆ ಮೊದಲ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ಭರ್ಜರಿ ಸೆಣೆಸಾಟವನ್ನು ನಡೆಸಿದವು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡವನ್ನು ಭರ್ಜರಿಯಾಗಿ ಮಣಿಸುವಲ್ಲಿ ಯಶಸ್ವಿಯಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ನ್ಯೂಜಿಲೆಂಡ್ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದ ಪಾಕಿಸ್ತಾನ ತಂಡ ಅಮೋಘ ಗೆಲುವು ಸಾಧಿಸಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ಭಾರತ vs ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಎರಡು ತಂಡಗಳು ಪ್ರಶಸ್ತಿಗಾಗಿ ಸೆಣೆಸಾಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications