ಟಿ20 ವಿಶ್ವಕಪ್: ಪಾಕಿಸ್ತಾನ ಫೈನಲ್‌ಗೇರಲು 153 ರನ್‌ಗಳ ಗುರಿ ನೀಡಿದ ನ್ಯೂಜಿಲೆಂಡ್

ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂದು ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿದೆ. ಪಾಕಿಸ್ತಾನದ ಬಿಗು ಬೌಲಿಂಗ್ ದಾಳಿಯಿಂದಾಗಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ನ್ಯೂಜಿಲೆಂಡ್ ತಂಡ ವಿಫಲವಾಗಿದೆ. ನಿಗದಿತ 20 ಓವರ್‌ಗಳಲ್ಲಿ 153 ರನ್‌ಗಳ ಸವಾಲಿನ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ನ್ಯೂಜಿಲೆಂಡ್ ವಿರುದ್ಧ ಆರಂಭಿಕ ಓವರ್‌ನಿಂದಲೇ ಪಾಕಿಸ್ತಾನ ತಂಡ ನಿಯಂತ್ರಣ ಸಾಧಿಸಲು ಯಶಸ್ವಿಯಾಯಿತು. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡ್ಯಾರೆಲ್ ಮಿಚೆಲ್ ಅವರ ಬ್ಯಾಟಿಂಗ್‌ನ ಕಾರಣದಿಂದಾಗಿ ಕಿವೀಸ್ ಪಡೆ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಯಿತು. ಈ ಜೋಡಿ ತಂಡವನ್ನು ಕುಸಿತದಿಂದ ಪಾರು ಮಾಡುವುದರ ಜೊತೆಗೆ ಉತ್ತಮ ಜೊತೆಯಾಟದಲ್ಲಿಯೂ ಭಾಗಿಯಾಯಿತು.
ಕೇನ್ ವಿಲಿಯಮ್ಸನ್ 42 ಎಸೆತಗಳಲ್ಲಿ 46 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರೆ ಮಿಷೆಲ್ 35 ಎಸೆತಗಳಲ್ಲಿ 53 ರನ್‌ಗಳನ್ನು ಸಿಡಿಸಿ ಅಜೇಯವಾಗುಳಿದರು. ಈ ಇಬ್ಬರು ಆಟಗಾರರ ಬ್ಯಾಟಿಂಗ್‌ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ ನ್ಯೂಜಿಲೆಂಡ್ ತಂಡ 4 ವಿಕೆಟ್ ಕಳೆದುಯಕೊಂಡು 152 ರನ್‌ಗಳನ್ನು ಗಳಿಸಲು ಯಶಸ್ವಿಯಾಗಿದೆ.
ಪಾಕಿಸ್ತಾನದ ಪರವಾಗಿ ಬೌಲರ್‌ಗಳು ರನ್ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾದರ ಕೂಡ ಹೆಚ್ಚಿನ ವಿಕೆಟ್ ಪಡೆಯುವಲ್ಲಿ ಯಶಸ್ಸು ಕಾಣಲಿಲ್ಲ. ಶಾಹೀನ್ ಅಫ್ರಿದಿ 2 ವಿಕೆಟ್ ಪಡೆದರೆ ಒಂದು ವಿಕೆಟ್ ಮೊಹಮ್ಮದ್ ನವಾಜ್ ಪಾಲಾಯಿತು.
ನ್ಯೂಜಿಲೆಂಡ್ಞ ಆಡುವ ಬಳಗ : ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್
ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಬೆಂಚ್: ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications