ಟಿ20 ವಿಶ್ವಕಪ್, ಸೆಮಿಫೈನಲ್: ಪಾಕಿಸ್ತಾನ vs ನ್ಯೂಜಿಲೆಂಡ್: Live ಸ್ಕೋರ್, ಪ್ಲೇಯಿಂಗ್ XI

ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಪಾಕಿಸ್ತಾನ ತಂಡ ಮೊದಲಿಗೆ ಬೌಲಿಂಗ್ ದಾಳಿ ನಡೆಸುವ ಸವಾಲು ಸ್ವೀಕರಿಸಿದೆ. ಎರಡು ತಂಡಗಳು ಕೂಡ ಬಲಿಷ್ಠ ಆಡುವ ಬಳಗದೊಂದಿಗೆ ಕಣಕ್ಕಿಳಿದಿದೆ.
ಇನ್ನು ಈ ಪಂದ್ಯಕ್ಕಾಗಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ಎರಡು ತಂಡಗಳು ಕೂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ನ್ಯೂಜಿಲೆಂಡ್ ತಂಡ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಆಟಗಾರರೆಲ್ಲರೂ ಉತ್ತಮ ಫಾರ್ಮ್‌ನಲ್ಲಿದ್ದಾರೆ. ತಂಡದಲ್ಲಿ ಸಾಕಷ್ಟು ಸಕಾರಾತ್ಮಕ ಅಂಶಗಳು ಕಾಣಿಸುತ್ತವೆ. ಆದರೆ ಪಾಕಿಸ್ತಾನ ತಂಡ ಸೆಮಿಫಯನಲ್‌ಗೆ ಅಚ್ಚರಿಯೆನ್ನುವಂತೆ ಅವಕಾಶ ಗಿಟ್ಟಿಸಿಕೊಂಡಿದೆ. ತಂಡದಲ್ಲಿ ಸಾಕಷ್ಟು ಸಮಸ್ಯೆಗಳು ಗೋಚರಿಸುತ್ತಿದ್ದರೂ ಈ ಹಂತದಲ್ಲಿ ಅವುಗಳನ್ನು ಮೆಟ್ಟಿ ನಿಂತು ಕಣಕ್ಕಿಳಿಯುವ ವಿಶ್ವಾಸದಲ್ಲಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ

ಆತ್ಮವಿಶ್ವಾಸದಲ್ಲಿದೆ ಪಾಕಿಸ್ತಾನ
ಟಿ20 ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ನ್ಯೂಜಿಲೆಂಡ್‌ಗೆ ಪ್ರವಾಸ ಕೈಗೊಂಡು ಟಿ20 ತ್ರಿಕೋನ ಸರಣಿಯಲ್ಲಿ ಭಾಗಿಯಾಗಿತ್ತು. ಈ ಟೂರ್ನಿಯಲ್ಲಿ ಫೈನಲ್ ಸೇರಿದಂತೆ ಒಟ್ಟು ಮೂರು ಬಾರಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿತ್ತು. ಈ ಪೈಕಿ ಫೈನಲ್ ಪಂದ್ಯ ಸೇರಿದಂತೆ ಎರಡು ಬಾರಿ ಪಾಕಿಸ್ತಾನ ಗೆಲುವು ಸಾಧಿಸಿತ್ತು. ಈ ಸರಣಿಯಲ್ಲಿನ ಗೆಲುವು ಪಾಕಿಸ್ತಾನಕ್ಕೆ ಸೆಮಿಫೈನಲ್ ಪಂದ್ಯದಲ್ಲಿ ಆತ್ಮವಿಶ್ವಾಸ ಹೆಚ್ಚಿಸಲಿದೆ.

ನ್ಯೂಜಿಲೆಂಡ್ ಆಡುವ ಬಳಗ
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್

ಪಾಕಿಸ್ತಾನ ಆಡುವ ಬಳಗ
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಬೆಂಚ್: ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications