ಈ 4 ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿದೆ ಎಂದ ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಈ ಬಾರಿಯ ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಿದೆ. ಮೊದಲ ದಿನದಿಂದಲೇ ಸಾಕಷ್ಟು ರೋಮಾಂಚನಕಾರಿ ಸೆಣೆಸಾಟಗಳು ನಡೆಯುತ್ತಿದ್ದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಈ ಸಂದರ್ಭದಲ್ಲಿ ಭಾರತ ತಂಡದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎನಿಸಿಕೊಂಡಿರುವ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಬಗ್ಗೆ ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶ ಪಡೆಯಲಿರುವ ನಾಲ್ಕು ತಂಡಗಳನ್ನು ಸೌರವ್ ಗಂಗೂಲಿ ಹೆಸರಿಸಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಭಾರತವಿರುವ ಗುಂಪಿನಲ್ಲಿ ಪಾಕಿಸ್ತಾನ ತಂಡ ಸೆಮಿಫೈನಲ್‌ಗೆ ಪ್ರವೇಶ ಪಡೆಯುವುದಿಲ್ಲ ಎಂದು ಸೌರವ್ ಗಂಗೂಲಿ ಊಹಿಸಿ ಕುತೂಹಲ ಮೂಡಿಸಿದ್ದಾರೆ.

ಪಾಕ್ ವಿರುದ್ಧ ರೋಹಿತ್ ಪಡೆ ಗೆಲ್ಲಲಿದೆ ಎಂದ ಗಂಗೂಲಿ
ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೂ ಮುನ್ನ ಮಾತನಾಡಿದ ಸೌರವ್ ಗಂಗೂಲಿ ಭಾರತ ಪಾಕ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಊಹಿಸಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಪಡೆಗೆ ಬೆಂಬಲವಾಗಿ ಮಾತನಾಡಿದ ಸೌರವ್ ಗಂಗೂಲಿ ಪಂದ್ಯವನ್ನು ಭಾರತ ಗೆಲ್ಲಲಿದೆ ಎಂದಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡ ಅದ್ಭುತವಾಗಿ ಪ್ರದರ್ಶಣ ನೀಡಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಸೌರವ್ ಗಂಗೂಲಿ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ವಿಫಲವಾಗಿ ಲೀಗ್ ಹಂತದಿಂದಲೇ ಹೊರಬಿದ್ದಿತ್ತು. ಆದರೆ ಈಗ ಭಾರತ ತಂಡ ಉತ್ತಮ ಲಯದಲ್ಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದಾರೆ ಗಂಗೂಲಿ.

ಸೆಮಿಫೈನಲ್‌ಗೇರುವ ತಂಡಗಳು ಇವು ಎಂದ ಗಂಗೂಲಿ
ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಈ ಬಾರಿಯ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. "ನಾನು ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳನ್ನು ಆಯ್ಕೆ ಮಾಡುತ್ತಿದ್ದೇನೆ. ದಕ್ಷಿಣ ಆಫ್ರಿಕಾ ಉತ್ತವಾದ ಬೌಲಿಂಗ್ ವಿಭಾಗವನ್ನು ಹೊಂದಿದೆ. ಆಸ್ಟ್ರೇಲಿಯಾ ನೆಲದಲ್ಲಿ ಅತೀ ದೊಡ್ಡ ಪಾತ್ರವನ್ನು ನಿರ್ವಹಿಸಲಿದೆ" ಎಂದಿದ್ದಾರೆ ಸೌರವ್ ಗಂಗೂಲಿ.

ಭಾರತ ಟೂರ್ನಿ ಗೆಲ್ಲುವ ಫೇವರೀಟ್ ತಂಡ
ಇನ್ನು ಮುಂದುವರಿದು ಮಾತನಾಡಿದ ಸೌರವ್ ಗಂಗೂಲಿ ಕಳೆದ ವಿಶ್ವಕಪ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಿರುವುದು ಈ ಬಾರಿ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. "ಈ ಹಿಂದೆ ಏನಾಗಿತ್ತೋ ಅದನ್ನು ಚರ್ಚಿಸುವುದರಲ್ಲಿ ಅರ್ಥವಿಲ್ಲ. ಭಾರತ ಈ ಟೂರ್ನಿಯನ್ನು ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ವಿಶ್ವಕಪ್‌ನಲ್ಲಿ ಹೋರಾಟಗಳು ಭಿನ್ನವಾಗಿರುತ್ತದೆ. ಎರಡು- ಮೂರು ವಾರಗಳ ಅವಧಿಯಲ್ಲಿ ಯಾವ ತಂಡ ಅತ್ಯುತ್ತಮ ಆಟವನ್ನು ನೀಡುತ್ತದೆ ಎಂಬುದು ಮುಖ್ಯವಾಗುತ್ತದೆ" ಎಂದಿದ್ದಾರೆ ಸೌರವ್ ಗಂಗೂಲಿ.

ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ,
ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications