ಟಿ20 ವಿಶ್ವಕಪ್ 2022: ದ. ಆಫ್ರಿಕಾ vs ಬಾಂಗ್ಲಾದೇಶ, ಟಾಸ್ ರಿಪೋರ್ಟ್, ಆಡುವ ಬಳಗ ಹಾಗೂ Live ಸ್ಕೋರ್

ಇಂದು ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು ಸಿಡ್ನಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಬಾಂಗ್ಲಾದೇಶ ರನ್ ಬೆನ್ನಟ್ಟುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಹೆಚ್ಚುವರಿ ಸ್ಪಿನ್ನರ್‌ನೊಂದಿಗೆ ದಕ್ಷಿಣ ಆಫ್ರಿಕಾ ತಂಡ ನಿರ್ಧರಿಸಿರುವ ಕಾರಣ ಲುಂಗಿ ಎನ್‌ಗಿಡಿ ಬದಲಿಗೆ ತಬ್ರೈಜ್ ಶಂಸಿಗೆ ಆಡುವ ಬಳಗದಲ್ಲಿ ಸ್ಥಾನ ದೊರೆತಿದೆ. ಮತ್ತೊಂದೆಡೆ ಬಾಂಗ್ಲಾದೇಶ ತಂಡ ಕೂಡ ಒಂದು ಬದಲಾವಣೆ ಮಾಡಿಕೊಂಡಿದ್ದು ಯಾಸಿರ್ ಅಲಿ ಸ್ಥಾನದಲ್ಲಿ ಮೆಹದಿ ಹಸನ್ ಅವಕಾಶ ಪಡೆದುಕೊಂಡಿದ್ದಾರೆ.

ಗೆಲುವಿನ ಮೇಲೆ ಇತ್ತಂಡಗಳ ಕಣ್ಣು
ಸೂಪರ್ 12 ಹಂತದಲ್ಲಿ ಬಾಂಗ್ಲಾದೇಶ ಮೊದಲ ಪಂದ್ಯವನ್ನು ನೆದರ್ಲೆಂಡ್ಸ್ ತಂಡದ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ 9 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಆದರೆ ದಕ್ಷಿಣ ಆಫ್ರಿಕಾ ತಂಡದ ಮೊದಲ ಪಂದ್ಯ ಜಿಂಬಾಬ್ವೆ ವಿರುದ್ಧ ನಿಗದಿಯಾಗಿತ್ತಾದರೂ ಈ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆದ್ದು ಅಂಕವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸಲಿದೆ ಎರಡು ತಂಡಗಳು.

ದಕ್ಷಿಣ ಆಫ್ರಿಕಾ ಆಡುವ ಬಳಗ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಕಿ ನಾರ್ಜಿಯಾ, ತಬ್ರೈಜ್ ಶಮ್ಸಿ
ಬೆಂಚ್: ಮಾರ್ಕೊ ಜಾನ್ಸೆನ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಲುಂಗಿ ಎನ್ಗಿಡಿ

ಬಾಂಗ್ಲಾದೇಶ ಆಡುವ ಬಳಗ
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನೂರುಲ್ ಹಸನ್, ಮೊಸದ್ದೆಕ್ ಹೊಸೈನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಎಬಾಡೋತ್ ಹೊಸೈನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಯಾಸಿರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications