Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದಕ್ಷಿಣ ಆಫ್ರಿಕಾ vs ನೆದರ್ಲೆಂಡ್ಸ್: ಸಂಭಾವ್ಯ ಆಡುವ ಬಳಗ, ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

T20 World Cup 2022, South Africa vs Netherlands: pitch report weather forecast and Probable XI details

ಟಿ20 ವಿಶ್ವಕಪ್‌ನಲ್ಲಿ ಭಾನುವಾರ ಮೂರು ಪಂದ್ಯಗಳು ನಡೆಯಲಿದ್ದು ಗ್ರೂಪ್ 2ರ ಪಂದ್ಯಗಳು ಇದಾಗಿರಲಿದೆ. ಈ ಮೂಲಕ ಸೂಪರ್ 12 ಹಂತಕ್ಕೆ ತೆರೆಬೀಳಲಿದೆ. ಭಾನುವಾರದ ಮೂರು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ನೆದರ್ಲೆಂಡ್ಸ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಈ ಪಂದ್ಯದ ಫಲಿತಾಂಶ ಆ ತಂಡದ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಸೆಮಿಫೈನಲ್ ಟಿಕೆಟ್ ಖಚಿತಪಡಿಸಿಕೊಳ್ಳಲು ದಕ್ಷಿಣ ಆಫ್ರಿಕಾ ತಂಡಕ್ಕೆ ಮಹತ್ವದ್ದಾಗಿದೆ.

ಇನ್ನು ಈ ಟೂರ್ನಿಯಲ್ಲಿ ಅಜೇಯವಾಗಿಳಿದಿದ್ದ ದಕ್ಷಿಣ ಆಫ್ರಿಕಾ ತಂಡ ಕಳೆದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಸೋಲು ಅನುಭವಿಸುವ ಮೂಲಕ ಹಿನ್ನಡೆ ಅನುಭವಿಸಿತು. ಆದರೆ ನೆದರ್ಲೆಂಡ್ಸ್ ತಂಡದ ಸವಾಲನ್ನು ಸುಲಭವಾಗಿ ಎದುರಿಸುವ ಆತ್ಮವಿಶ್ವಾಸ ದಕ್ಷಿಣ ಆಫ್ರಿಕಾ ತಂಡದಲ್ಲಿದ್ದು ಟೆಂಬಾ ಬವುಮಾ ಪಡೆಗೆ ನೆದರ್ಲೆಂಡ್ಸ್ ಸುಲಭ ಸವಾಲಾಗುವ ಸಾಧ್ಯತೆಯಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ

ದಕ್ಷಿಣ ಆಫ್ರಿಕಾ ಹಾಗೂ ನೆದರ್ಲೆಂಡ್ಸ್ ತಂಡಗಳು ಭಾನುವಾರ ಅಡಿಲೇಡ್‌ ಮೈದಾನದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮುಂಜಾನೆ 5:30ಕ್ಕೆ ಆರಂಭವಾಗಲಿದ್ದು 5 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಹವಾಮಾನ ವರದಿ: ಪಂದ್ಯದ ದಿನ ಅಡಿಲೇಡ್ ಪರಿಸರದಲ್ಲಿ ಪಂದ್ಯಕ್ಕೆ ಪೂರಕವಾದ ವಾತಾವರಣವಿರಲಿದೆ. 17-27 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದ್ದು ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳು ಇಲ್ಲ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಪಿಚ್ ರಿಪೋರ್ಟ್: ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲ ನೀಡುವ ಸಾಧ್ಯತೆಯಿದೆ. ಚೆಂಡು ಬ್ಯಾಟ್‌ಗೆ ನೇರವಾಗಿ ಬರುವ ಕಾರಣ ಇಲ್ಲಿ ಬ್ಯಾಟಿಂಗ್ ನಡೆಸುವುದನ್ನು ಬ್ಯಾಟರ್‌ಗಳು ಆನಂದಿಸಲಿದ್ದಾರೆ. ಇಲ್ಲಿನ ಮೇಲ್ಮೈನಲ್ಲಿ ಬೌಲರ್‌ಗಳು ಲೈನ್ ಮತ್ತು ಲೆಂತ್‌ನಲ್ಲಿ ಎಡವದಿದ್ದರೆ ಮಾತ್ರವೇ ಯಶಸ್ಸು ಸಾಧಿಸಬಹುದು.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ದಕ್ಷಿಣ ಆಫ್ರಿಕಾ ಸಂಭಾವ್ಯ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೋಸೌ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ

ನೆದರ್ಲೆಂಡ್ಸ್ ಸಂಭಾವ್ಯ ಆಡುವ ಬಳಗ: ಸ್ಟೀಫನ್ ಮೈಬರ್ಗ್, ಮ್ಯಾಕ್ಸ್ ಒ'ಡೌಡ್, ಟಾಮ್ ಕೂಪರ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡ್, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್, ಬ್ರಾಂಡನ್ ಗ್ಲೋವರ್

Story first published: Saturday, November 5, 2022, 22:03 [IST]
Other articles published on Nov 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+