India Vs South Africa : ಡೇವಿಡ್ ಮಿಲ್ಲರ್ ಆರ್ಭಟ ಭಾರತದ ವಿರುದ್ಧ ಗೆದ್ದ ದಕ್ಷಿಣ ಆಫ್ರಿಕಾ

ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಬಹುತೇಕ ಹತ್ತಿರವಾಗಿದೆ. ಐಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಜಯ ದಾಖಲಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ಸೌತ್ ಆಫ್ರಿಕಾ ಬೌಲರ್ ಗಳು ಶಾಕ್ ನೀಡಿದರು. ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು.
ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಲಿಲ್ಲ. ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ದೀಪಕ್ ಹೂಡಾ ಕೂಡ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ ಒಬ್ಬರೇ ಏಕಾಂಗಿಯಾಗಿ ಹೋರಾಡಿದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಕೂಡ ರನ್ ಗಳಿಸದಿರುವುದು ತಂಡದ ಸ್ಕೋರ್ ಮೇಲೆ ಪರಿಣಾಮ ಬೀರಿತು.
ದಕ್ಷಿಣ ಆಫ್ರಿಕಾ ಪರವಾಗಿ ಲುಂಗಿ ಎಂಗಿಡಿ 4 ವಿಕೆಟ್ ಪಡೆದು ಮಿಂಚಿದರು. ಎಡಗೈ ವೇಗಿ ವ್ಯಾಯ್ನೆ ಪಾರ್ನೆಲ್ ಕೂಡ 3 ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಶಾಕ್ ಕೊಟ್ಟರು. ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಟೀಂ ಇಂಡಿಯಾಗೆ ಸೂರ್ಯಕುಮಾರ್ ಆಸರೆ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ದಕ್ಷಿಣ ಆಫ್ರಿಕಾ ವೇಗಿಗಳು ಶಾಕ್ ನೀಡಿದರು. ಕೆಎಲ್ ರಾಹುಲ್ ತಮ್ಮ ವೈಫಲ್ಯವನ್ನು ಮುಂದುವರೆಸಿದರು. 14 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ 15 ರನ್, ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟಾದರು.
ಟೀಂ ಇಂಡಿಯಾ ಪರವಾಗಿ ಸೂರ್ಯಕುಮಾರ್ ಒಬ್ಬರೇ ದಕ್ಷಿಣ ಆಫ್ರಿಕಾ ಬೌಲಿಂಗ್ ಅನ್ನು ಸಮರ್ಥವಾಗಿ ಎದುರಿಸಿದರು. 40 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ಗಳಿಸುವ ಮೂಲಕ ಭಾರತ 133 ರನ್ ಕಲೆಹಾಕಲು ಸಹಾಯ ಮಾಡಿದರು.
PKL 2022: ಬೆಂಗಳೂರು ಗೂಳಿಗಳ ಆರ್ಭಟಕ್ಕೆ ಶರಣಾದ ಜೈಪುರ ಪಿಂಕ್ ಪ್ಯಾಂಥರ್ಸ್

ಮಾರಕ ದಾಳಿ ನಡೆಸಿದ ದಕ್ಷಿಣ ಆಫ್ರಿಕಾ
ವೇಗಿಗಳಿಗೆ ಸಹಕಾರಿಯಾಗಿದ್ದ ಪಿಚ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್ ಗಳು ಮಿಂಚಿದರು. ಆರಂಭದಿಂದಲೇ ಭಾರತದ ಬ್ಯಾಟರ್ ಗಳನ್ನು ಕಾಡಿದರು. ಲುಂಗಿ ಎನ್‌ಗಿಡಿ ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಔಟ್ ಮಾಡುವ ಮೂಲಕ ಭಾರತದ ಬ್ಯಾಟಿಂಗ್ ಬಲವನ್ನೇ ಮುರಿದರು. ಅವರು 4 ಓವರ್ ಗಳಲ್ಲಿ 29 ರನ್ ನೀಡಿ 4 ವಿಕೆಟ್ ಪಡೆದರು.
ವ್ಯಾಯ್ನ್ ಪ್ಯಾರ್ನೆಲ್ ಕೂಡ ಅತ್ಯುತ್ತಮ ಬೌಲಿಂಗ್ ಮಾಡಿದರು, 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್ ಪಡೆದರು. ಮತ್ತೊಬ್ಬ ವೇಗಿ ಅನ್ರಿಚ್ ನೋಕಿಯಾ 4 ಓವರ್ ಗಳಲ್ಲಿ 23 ರನ್ ನೀಡಿ 1 ವಿಕೆಟ್ ಪಡೆದರು.

ಫೀಲ್ಡಿಂಗ್ ವೈಫಲ್ಯದ ಲಾಭ ಪಡೆದ ದಕ್ಷಿಣ ಆಫ್ರಿಕಾ
134 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತದ ಬೌಲರ್ ಗಳು ಆರಂಭದಲ್ಲಿ ಆಘಾತ ನೀಡಿದರು. ಅರ್ಷ್‌ದೀಪ್ ತಮ್ಮ ಮೊದಲನೇ ಓವರ್ ನಲ್ಲಿ ಕ್ವಿಂಟನ್ ಡಿ ಕಾಕ್ ಮತ್ತು ರಿಲೀ ರೊಸೊವ್‌ರನ್ನು ಔಟ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾ ಮೇಲೆ ಒತ್ತಡ ಹೇರಿದರು. ನಂತರ ನಾಯಕ ಟೆಂಬಾ ಬವುಮಾ ಕೂಡ 10 ರನ್ ಗಳಿಸಿ ಶಮಿಗೆ ವಿಕೆಟ್ ಒಪ್ಪಿಸಿದರು. ದಕ್ಷಿಣ ಆಫ್ರಿಕಾ ಮೊದಲ 10 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಕೇವಲ 40 ರನ್ ಗಳಿಸಿತ್ತು.
ಆದರೆ, ಏಡೆನ್ ಮಕ್ರಮ್ ಮತ್ತು ಡೇವಿಡ್ ಮಿಲ್ಲರ್ ಅರ್ಧಶತಕ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಆಸರೆಯಾದರು. ರೋಹಿತ್ ಶರ್ಮಾ ಹಲವು ರನ್ ಔಟ್ ಅವಕಾಶಗಳನ್ನು ಮಿಸ್ ಮಾಡಿದರು. ವಿರಾಟ್ ಕೊಹ್ಲಿ ಕೂಡ ಕ್ಯಾಚ್ ಬಿಟ್ಟರು. ಇದರ ಲಾಭ ಪಡೆದ ಈ ಇಬ್ಬರೂ ಬ್ಯಾಟರ್ ಭಾರತದ ಬೌಲರ್ ಗಳ ಮೇಲೆ ಪ್ರತಿದಾಳಿ ಮಾಡಿದರು. ಅಂತಿಮವಾಗಿ 19.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 5 ವಿಕೆಟ್‌ಗಳ ಜಯ ದಾಖಲಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications