NZ vs SL: ಗ್ಲೆನ್ ಫಿಲಿಪ್ಸ್ ಆಕರ್ಷಕ ಶತಕ; ಶ್ರೀಲಂಕಾಗೆ ಸವಾಲಿನ ಗುರಿ ನೀಡಿದ ನ್ಯೂಜಿಲೆಂಡ್

ಶನಿವಾರ, ಅಕ್ಟೋಬರ್ 29ರಂದು ನಡೆಯುತ್ತಿರುವ ಟಿ20 ವಿಶ್ವಕಪ್‌ನ ಸೂಪರ್ 12ರಲ್ಲಿ ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ, ಶ್ರೀಲಂಕಾ ತಣಡಕ್ಕೆ 168 ರನ್‌ಗಳ ಗುರಿ ನೀಡಿದೆ.
ನ್ಯೂಜಿಲೆಂಡ್‌ನ ಗ್ಲೆನ್ ಫಿಲಿಪ್ಸ್ (104) ಆಕರ್ಷಕ ಶತಕದ ನೆರವಿನಿಂದ ಶ್ರೀಲಂಕಾ ವಿರುದ್ಧ ಸವಾಲಿನ ಮೊತ್ತ ಗಳಿಸಿತು. ಗ್ಲೆನ್ ಫಿಲಿಪ್ಸ್ ಅವರಿಗೆ ಡೇರಿಲ್ ಮಿಚೆಲ್ (22), ಮಿಚೆಲ್ ಸ್ಯಾಂಟ್ನರ್(11) ಸಾಥ್ ನೀಡಿದರು. ಉಳಿದ ಯಾವ ಬ್ಯಾಟರ್‌ಗಳು ಎರಡಂಕಿ ಮೊತ್ತ ದಾಟಲಿಲ್ಲ.
ನ್ಯೂಜಿಲೆಂಡ್ ತಂಡ ಫಿನ್ ಅಲೆನ್, ಡೆವೊನ್ ಕಾನ್ವೇ ಮತ್ತು ಕೇನ್ ವಿಲಿಯಮ್ಸನ್ ಅವರ ವಿಕೆಟ್ ಬೇಗನೆ ಕಳೆದುಕೊಂಡರು. ಆದರೆ ನಾಲ್ಕನೇ ವಿಕೆಟ್‌ಗೆ ಗ್ಲೆನ್ ಫಿಲಿಪ್ಸ್ ಮತ್ತು ಡೇರಿಲ್ ಮಿಚೆಲ್ ನಡುವೆ 84 ರನ್‌ಗಳ ಜೊತೆಯಾಟವು ನ್ಯೂಜಿಲೆಂಡ್‌ಗೆ ಪುಟಿದೇಳಲು ಸಹಾಯ ಮಾಡಿತು.
ಗ್ಲೆನ್ ಫಿಲಿಪ್ಸ್ 64 ಎಸೆತಗಳಲ್ಲಿ 104 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ನಿರ್ಗಮಿಸಿದರು. ಕಸುನ್ ರಜಿತಾ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರೆ, ಮಹೀಶ್ ತೀಕ್ಷಣ, ಲಹಿರು ಕುಮಾರ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಪಡೆದರು.
ಮತ್ತೊಂದೆಡೆ, ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ ವಿರುದ್ಧ ಮಳೆಯಿಂದ ರದ್ದಾದ ಪಂದ್ಯದ ಮೊದಲು ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆಸೀಸ್ ಅನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿ ದಾಖಲೆ ಅಂತರದಲ್ಲಿ ಗೆದ್ದಿತ್ತು. ನ್ಯೂಜಿಲೆಂಡ್ ಎರಡು ಪಂದ್ಯಗಳಿಂದ ಮೂರು ಅಂಕಗಳೊಂದಿಗೆ ಗುಂಪಿನ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಆಡುವ 11ರ ಬಳಗ
ಶ್ರೀಲಂಕಾ ಆಡುವ 11ರ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಲಹಿರು ಕುಮಾರ, ಕಸುನ್ ರಜಿತಾ.
ನ್ಯೂಜಿಲೆಂಡ್ ಆಡುವ 11ರ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications