SL vs IRE: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಐರ್ಲೆಂಡ್, ಆಡುವ 11ರ ಬಳಗ & ಲೈವ್ ಸ್ಕೋರ್

ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಮೂರನೇ ಪಂದ್ಯ ಶ್ರೀಲಂಕಾ ಮತ್ತು ಐರ್ಲೆಂಡ್ ನಡುವೆ ಭಾನುವಾರ ಹೋಬರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ನಡೆಯುತ್ತಿದೆ. ಎರಡೂ ತಂಡಗಳು ಅರ್ಹತಾ ಸುತ್ತಿನಲ್ಲಿ ತಲಾ ಎರಡು ಪಂದ್ಯಗಳನ್ನು ಗೆದ್ದು ಗ್ರೂಪ್ ಸ್ಟೇಜ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿವೆ.
ಶ್ರೀಲಂಕಾ ವಿರುದ್ಧದ ತಮ್ಮ ಮೊದಲ ಸೂಪರ್ 12 ಪಂದ್ಯದಲ್ಲಿ ಐರ್ಲೆಂಡ್ ನಾಯಕ ಆಂಡ್ರ್ಯೂ ಬಲ್ಬಿರ್ನಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ದಸುನ್ ಶನಕ ನಾಯಕತ್ವದ ಶ್ರೀಲಂಕಾ ಮೊದಲು ಬೌಲಿಂಗ್ ಮಾಡಲಿದೆ.
ಪ್ರಮುಖ ವೇಗಿ ದುಷ್ಮಂತ ಚಮೀರ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್ ದನುಷ್ಕಾ ಗುಣತಿಲಕ ಅವರು ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಅದು ಮಾತ್ರವಲ್ಲದೆ, ಇನ್ ಫಾರ್ಮ್ ಓಪನರ್ ಪಾಥುಮ್ ನಿಸ್ಸಾಂಕಾ ಕೂಡ ಗಾಯದಿಂದ ಬಳಲುತ್ತಿದ್ದಾರೆ. ಇದು ಶ್ರೀಲಂಕಾ ವಿರುದ್ಧ ಐರ್ಲೆಂಡ್ ಸವಾರಿ ಮಾಡುವ ಮುನ್ಸೂಚನೆ ನೀಡಿದೆ. ಏಷ್ಯಾ ಕಪ್ 2022ರ ಚಾಂಪಿಯನ್ ಆಗಿದ್ದರೂ ಶ್ರೀಲಂಕಾ ಸೂಪರ್ 12 ಪ್ರವೇಶಿಸಲು ಪ್ರಯಾಸಪಟ್ಟಿತ್ತು.
ಶ್ರೀಲಂಕಾ ಮತ್ತು ಐರ್ಲೆಂಡ್ ತಂಡಗಳ ಆಡುವ 11ರ ಬಳಗ
ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಸಿಮಿ ಸಿಂಗ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್
ಶ್ರೀಲಂಕಾ: ಕುಸಾಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅಶೇನ್ ಬಂಡಾರ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಜ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಬಿನುರಾ ಫೆರ್ನಾಂಡೊ, ಲಹಿರು ಕುಮಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications