ಗೆಲುವಿನ ಖಾತೆ ತೆರೆದ ಶ್ರೀಲಂಕಾ: ಯುಎಇ ವಿರುದ್ಧ ರನ್‌ಗಳ ಗೆಲುವು

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಇಂದು ಶ್ರೀಲಂಕಾ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಶ್ರೀಲಂಕಾ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಈ ಬಾರಿಯ ವಿಶ್ವಕಪ್‌ನಲ್ಲಿ ಗೆಲುವಿನ ಖಾತೆ ತೆರೆಯುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಮೊದಲ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಸೋಲು ಅನುಭವಿಸಿದ್ದ ಕಾರಣ ಲಂಕಾ ಪಡೆ ಭಾರೀ ಮುಖಭಂಗಕ್ಕೆ ಒಳಗಾಗಿತ್ತು.
ಯುಎಇ ವಿರುದ್ಧ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಾಧಾರಣ ಗುರಿಯನ್ನು ನಿಗದಿಪಡಿಸಿತ್ತು. ಶ್ರೀಲಂಕಾ ಪರವಾಗಿ ಆರಂಭಿಕ ಆಟಗಾರ ಪಾತುಮ್ ನಿಸ್ಸಾಂಕ ಭರ್ಜರಿ ಪ್ರದರ್ಶನ ನೀಡಿದರು. ಈ ಮೊತ್ತವನ್ನು ಬೆನ್ನಟ್ಟಿದ ಯುಎಇ 73 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ 79 ರನ್‌ಗಳ ಅಂತರದಿಂದ ಶ್ರೀಲಂಕಾ ಗೆಲುವು ಸಾಧಿಸಿದೆ.
ಲಂಕಾಗೆ ಉತ್ತಮ ಆರಂಭ, ಮಧ್ಯಮ ಕ್ರಮಾಂಕ ಕಳಪೆ
ಮೊದಲಿಗೆ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಅಗ್ರ ಕ್ರಮಾಂಕದ ಆಟಗಾರರು ಉತ್ತಮ ಪ್ರದರ್ಶನ ನೀಡಿದರು. ಅದರೆ ಮಧ್ಯಮ ಕ್ರಮಾಂಕದ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾ ತಂಡಕ್ಕೆ ಆಘಾತ ಉಂಟು ಮಾಡಿದರು. ಆದರೆ ಫಾತುಮ್ ನಿಸ್ಸಾಂಕ ಏಕಾಂಗಿ ಹೋರಾಟ ನಡೆಸಿ ತಂಡದ ಮೊತ್ತ 152 ಆಗಲು ಕಾರಣವಾದರು. ನಿಸ್ಸಾಂಕ 74 ರನ್ ಬಾರಿಸಿ ಮಿಂಚಿದ್ದಾರೆ. ಯುಎಇ ಪರವಾಗಿ ಸ್ಪಿನ್ನರ್ ಕಾರ್ತಿಕ್ ಮೆಯ್ಯಪ್ಪನ್ ಹ್ಯಾಟ್ರಿಕ್ ವಿಕೆಟ್ ಕಿತ್ತು ಮಿಂಚಿದ್ದಾರೆ.

ಬೌಲಿಂಗ್‌ನಲ್ಲಿ ಲಂಕಾ ಮಿಂಚು
ಇನ್ನು ಶ್ರೀಲಂಕಾ ತಂಡ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಯುಎಇ ತಂಡ ಆರಂಭದಿಂದಲೇ ಆಘಾತಕ್ಕೆ ಒಳಗಾಯಿತು. ಯಾವ ಆಟಗಾರ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲೇ ಇಲ್ಲ. ಇದರ ಪರಿಣಾಮವಾಗಿ ಕೇವಲ 17.1 ಓವರ್‌ನಲ್ಲಿ ಯುಎಇ 73 ರನ್‌ಗಳಿಸಿ ಆಲೌಟ್ ಆಯಿತು. ಬೌಲಿಂಗ್‌ನಲ್ಲಿ ಶ್ರೀಲಂಕಾ ಪರವಾಗಿ ದುಷ್ಮಂತ ಚಮೀರಾ ಹಾಗೂ ವನಿಂದು ಹಸರಂಗ ತಲಾ ಮೂರು ವಿಕೆಟ್ ಪಡೆದು ಮಿಂಚಿದರು.

ಇತ್ತಂಡಗಳ ಆಡುವ ಬಳಗ
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕಾ ಕರುಣಾರತ್ನೆ, ದುಷ್ಮಂತ ಚಮೀರ, ಪ್ರಮೋದ್ ಮದುಶನ್, ಮಹೇಶ್ ತೀಕ್ಷಣ
ಬೆಂಚ್: ದನುಷ್ಕ ಗುಣತಿಲಕ, ದಿಲ್ಶನ್ ಮಧುಶಂಕ, ಜೆಫ್ರಿ ವಾಂಡರ್ಸೆ, ಲಹಿರು ಕುಮಾರ
ಚಿರಾಗ್ ಸೂರಿ, ಮುಹಮ್ಮದ್ ವಸೀಮ್, ಕಾಶಿಫ್ ದೌದ್, ವೃತ್ಯ ಅರವಿಂದ್ (ವಿಕೆಟ್ ಕೀಪರ್), ಆರ್ಯನ್ ಲಾಕ್ರಾ, ಬಾಸಿಲ್ ಹಮೀದ್, ಚುಂಡಂಗಪೊಯಿಲ್ ರಿಜ್ವಾನ್ (ಸಿ),
ಅಯಾನ್ ಅಫ್ಜಲ್ ಖಾನ್, ಕಾರ್ತಿಕ್ ಮೇಯಪ್ಪನ್, ಜುನೈದ್ ಸಿದ್ದಿಕ್, ಜಹೂರ್ ಖಾನ್
ಬೆಂಚ್: ಜವಾರ್ ಫರೀದ್, ಅಹ್ಮದ್ ರಜಾ, ಅಲಿಶನ್ ಶರಾಫು, ಸಬೀರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications