ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

T20 World Cup 2022: ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆ, ಅಂಕಿಅಂಶ

ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾ ಭರ್ಜರಿಯಾಗಿ ಸಿದ್ಧವಾಗುತ್ತಿದೆ. 2007ರ ಚೊಚ್ಚಲ ವಿಶ್ವಕಪ್ ಗೆದ್ದ ನಂತರ ಟೀಂ ಇಂಡಿಯಾ ಇದುವರೆಗೆ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಈವರೆಗೂ 7 ಬಾರಿ ವಿಶ್ವಕಪ್ ಪಂದ್ಯಾವಳಿ ನಡೆದಿದ್ದು, 8ನೇ ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಆಯೋಜನೆಯಾಗಿದೆ.

ಅಕ್ಟೋಬರ್ ತಿಂಗಳಿನಿಂದ ವಿಶ್ವಕಪ್ ಟೂರ್ನಿ ಆರಂಭವಾಗಲಿದ್ದು, ವಿಶ್ವಕಪ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಒಟ್ಟು ಆರು ಟಿ20 ಪಂದ್ಯಗಳನ್ನು ಆಡಲಿದೆ. ಈಗಾಗಲೇ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ.

ಟೀಂ ಇಂಡಿಯಾದ 6ನೇ ಬೌಲರ್‌ ಆಗಿ ವಿರಾಟ್ ಕೊಹ್ಲಿ? ನೆಟ್ಸ್‌ನಲ್ಲಿ ಭರ್ಜರಿ ಬೌಲಿಂಗ್ ಪ್ರಾಕ್ಟೀಸ್!ಟೀಂ ಇಂಡಿಯಾದ 6ನೇ ಬೌಲರ್‌ ಆಗಿ ವಿರಾಟ್ ಕೊಹ್ಲಿ? ನೆಟ್ಸ್‌ನಲ್ಲಿ ಭರ್ಜರಿ ಬೌಲಿಂಗ್ ಪ್ರಾಕ್ಟೀಸ್!

ಬಲಿಷ್ಠ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ರೋಹಿತ್ ಶರ್ಮಾ ವಹಿಸಿಕೊಂಡಿದ್ದಾರೆ. ಭಾರತದ ಆರಂಭಿಕ ಆಟಗಾರನಾಗಿ ಹಲವು ದಾಖಲೆಗಳನ್ನು ಹೊಂದಿರುವ ರೋಹಿತ್ ಶರ್ಮಾ ವಿಶ್ವಕಪ್ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಆಡಲು ಆರಂಭಿಸಿ ಸೆಪ್ಟೆಂಬರ್ 19ಕ್ಕೆ 15 ವರ್ಷ ತುಂಬಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ದಾಖಲೆ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ ಹಲವು ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಹಲವು ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ.

 ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರ

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರ

ರೋಹಿತ್ ಶರ್ಮಾ ಅತಿ ಹೆಚ್ಚು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಆಟಗಾರ ಎನ್ನುವ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಇದುವರೆಗೂ 136 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 140.64 ಸ್ಟ್ರೈಕ್ ರೇಟ್‌ ಮತ್ತು 31.75 ಸರಾಸರಿಯಲ್ಲಿ ಒಟ್ಟು 3620 ರನ್ ಗಳಿಸಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಈವರೆಗೆ 4 ಶತಕ ಮತ್ತು 28 ಅರ್ಧ ಶತಕಗಳನ್ನು ಹೊಡೆದಿದ್ದಾರೆ. ಭಾರತ ತಂಡದ ಪ್ರಮುಖ ಬ್ಯಾಟಿಂಗ್ ಶಕ್ತಿ ರೋಹಿತ್ ಶರ್ಮಾ ತಮ್ಮ ಬಿಗ್ ಹಿಟ್‌ಗಳಿಂದಲೇ ಎದುರಾಳಿ ತಂಡದ ಬೌಲರ್ ಗಳಲ್ಲಿ ಭಯ ಹುಟ್ಟಿಸುವ ಶಕ್ತಿ ಹೊಂದಿದ್ದಾರೆ.

15 ವರ್ಷಗಳಷ್ಟು ಅಪಾರ ಅನುಭವ ಹೊಂದಿರುವ ಹಿರಿಯ ಆಟಗಾರ ರೋಹಿತ್ ಶರ್ಮಾ ಭಾರತ ತಂಡ 2007ರಲ್ಲಿ ಚೊಚ್ಚಲ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದರು. ಇದುವರೆಗೂ ಎಲ್ಲಾ ಟಿ20 ವಿಶ್ವಕಪ್‌ನಲ್ಲಿ ಆಡಿರುವ ಖ್ಯಾತಿ ರೋಹಿತ್ ಶರ್ಮಾ ಅವರದ್ದಾಗಿದೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತಮ ಆರಂಭ ಪಡೆದು, ಬಹುಬೇಗನೆ ಮರೆಯಾದ 3 ಭಾರತದ ಆಟಗಾರರು

ದಾಖಲೆ ನಿರ್ಮಿಸಲು ಬೇಕಿದೆ ಇನ್ನೆರಡು ಸಿಕ್ಸರ್

ದಾಖಲೆ ನಿರ್ಮಿಸಲು ಬೇಕಿದೆ ಇನ್ನೆರಡು ಸಿಕ್ಸರ್

ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಇನ್ನೆರಡು ಸಿಕ್ಸರ್ ಸಿಡಿಸಿದರೆ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಶರ್ಮಾ ಈ ದಾಖಲೆಯನ್ನು ಸಾಧಿಸುವ ವಿಶ್ವಾಸದಲ್ಲಿದ್ದಾರೆ.

ಪ್ರಸ್ತುತ, ನ್ಯೂಜಿಲೆಂಡ್ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ಒಟ್ಟು 172 ಸಿಕ್ಸರ್‌ಗಳೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ರೋಹಿತ್ ಶರ್ಮಾ 171 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ವೆಸ್ಟ್‌ ಇಂಡೀಸ್‌ನ ಕ್ರಿಸ್‌ ಗೇಲ್‌ (124), ಇಂಗ್ಲೆಂಡ್‌ನ ಮಾಜಿ ನಾಯಕ ಇಯಾನ್‌ ಮಾರ್ಗನ್‌ (120) ಮತ್ತು ಆಸ್ಟ್ರೇಲಿಯದ ನಾಯಕ ಆರನ್‌ ಫಿಂಚ್‌ (117) ನಂತರದ ಸ್ಥಾನದಲ್ಲಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅಂಕಿ ಅಂಶ

ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅಂಕಿ ಅಂಶ

2007ರಿಂದ 2021ರ ವರೆಗಿನ ಎಲ್ಲಾ ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ರೋಹಿತ್ ಶರ್ಮಾ ಆಡಿದ್ದಾರೆ. 2007ರ ವಿಶ್ವಕಪ್‌ನಲ್ಲಿ ಆಡಿ 2022ರ ವಿಶ್ವಕಪ್‌ನಲ್ಲಿ ಆಡುತ್ತಿರುವ ಕೆಲವೇ ಆಟಗಾರರಲ್ಲಿ ರೋಹಿತ್ ಶರ್ಮಾ ಕೂಡ ಒಬ್ಬರು. ಟಿ20 ವಿಶ್ವಕಪ್‌ನಲ್ಲಿ 33 ಪಂದ್ಯಗಳಲ್ಲಿ 30 ಇನ್ನಿಂಗ್ಸ್ ಆಡಿರುವ ರೋಹಿತ್ ಶರ್ಮಾ, 38.50 ಸರಾಸರಿಯಲ್ಲಿ 131.52 ಸ್ಟ್ರೈಕ್‌ ರೇಟ್‌ನಲ್ಲಿ 847 ರನ್ ಗಳಿಸಿದ್ದಾರೆ. ಇದರಲ್ಲಿ 8 ಅರ್ಧ ಶತಕಗಳು ಸೇರಿವೆ. 79 ರನ್ ಇವರು ಗಳಿಸಿರುವ ವೈಯಕ್ತಿಕ ಗರಿಷ್ಠ ರನ್ ಎನಿಸಿಕೊಂಡಿದೆ. ಉತ್ತಮ ಫೀಲ್ಡರ್ ಆಗಿರುವ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ ಒಟ್ಟು 15 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದಾರೆ. ಟಾಪ್ 3 ಆಟಗಾರರು ಈಗಾಗಲೇ ನಿವೃತ್ತಿ ಪಡೆದಿರುವುದರಿಂದ ಈ ಬಾರಿ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ನಂಬರ್ 1 ಸ್ಥಾನಕ್ಕೇರಲು ಇಬ್ಬರೂ ಆಟಗಾರರಿಗೆ ಅವಕಾಶವಿದೆ.

ಟಿ20 ಕ್ರಿಕೆಟ್‌ನಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಸಾಧನೆ

ಟಿ20 ಕ್ರಿಕೆಟ್‌ನಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಸಾಧನೆ

ಟಿ20 ಮಾದರಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾದ ಎರಡನೇ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಈವರೆಗೂ ಟೀಂ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಟ್ಟು 37 ಟಿ20 ಪಂದ್ಯಗಳನ್ನಾಡಿದ್ದು ಅದರಲ್ಲಿ 31 ಪಂದ್ಯಗಳಲ್ಲಿ ಜಯ ದಾಖಲಸಿದೆ. ಕೇವಲ ಆರು ಪಂದ್ಯಗಳಲ್ಲಿ ಮಾತ್ರ ಸೋಲನುಭವಿಸಿದೆ. ರೋಹಿತ್ ಶರ್ಮಾ ಗೆಲುವಿನ ಶೇಕಡಾವಾರು 83.78 ಆಗಿದೆ.

ಎಂಎಸ್ ಧೋನಿ ಸಾರ್ವಕಾಲಿಕ ಭಾರತದ ಅತ್ಯಂತ ಯಶಸ್ವಿ ಟಿ20 ನಾಯಕರಾಗಿ ಉಳಿದಿದ್ದಾರೆ. ಅವರು 72 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದರು, ಅದರಲ್ಲಿ ಭಾರತ 41 ಪಂದ್ಯಗಳನ್ನು ಗೆದ್ದಿದ್ದು, 28 ಪಂದ್ಯಗಳಲ್ಲಿ ಸೋಲನುಭವಿಸಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 50 ಪಂದ್ಯಗಳನ್ನಾಡಿದ್ದು 30 ಪಂದ್ಯಗಳಲ್ಲಿ ಜಯ ಸಾಧಿಸಿದೆ. 16 ಪಂದ್ಯಗಳಲ್ಲಿ ಸೋಲನುಭವಿಸಿದೆ. ಎರಡು ಪಂದ್ಯ ಟೈ ಆಗಿದ್ದರೆ, ಇನ್ನೆರಡು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುವ ರೋಹಿತ್ ಶರ್ಮಾ, ಟೂರ್ನಿಯ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಇದುವರೆಗೆ 5 ಬಾರಿ ಚಾಂಪಿಯನ್ ಎನಿಸಿಕೊಂಡಿದ್ದು, ನಾಯಕನಾಗಿ ಒತ್ತಡ ನಿಭಾಯಿಸುವ ಅನುಭವ ಹೊಂದಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ತಮ್ಮ ಅನುಭವನ್ನು ತಂಡಕ್ಕೆ ನೀಡುವ ಮೂಲಕ ಮತ್ತೊಂದು ವಿಶ್ವಕಪ್ ಗೆಲ್ಲಲು ರೋಹಿತ್ ಶರ್ಮಾ ಪಾತ್ರ ಮುಖ್ಯವಾಗುತ್ತದೆ.

Story first published: Friday, December 15, 2023, 13:35 [IST]
Other articles published on Dec 15, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X