IND vs ENG: ಹೀನಾಯ ಸೋಲಿನಿಂದ ಡಗೌಟ್‌ನಲ್ಲಿ ಬಿಕ್ಕಿಬಿಕ್ಕಿ ಅತ್ತ ರೋಹಿತ್ ಶರ್ಮಾ; ವಿಡಿಯೋ

ಗುರುವಾರ, ನವೆಂಬರ್ 10ರಂದು ಆಸ್ಟ್ರೇಲಿಯಾದ ಅಡಿಲೇಡ್ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಅವಮಾನಕರ ಸೋಲು ಅನುಭವಿಸಿತು ಮತ್ತು ಇದರಿಂದ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಅಭಿಯಾನ ಅಂತ್ಯವಾಯಿತು.
ಭಾರತದ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್ ತಂಡವು ಭಾನುವಾರ, ನವೆಂಬರ್ 13ರಂದು ನಡೆಯುವ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
169 ರನ್‌ಗಳನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ವಿಫಲವಾದ ಭಾರತ ತಂಡದ ಬೌಲಿಂಗ್ ದಾಳಿಯ ವಿರುದ್ಧ ಅಲೆಕ್ಸ್ ಹೇಲ್ಸ್ ಅವರು 47 ಬಾಲ್‌ಗಳಲ್ಲಿ ಅಜೇಯ 86 ರನ್ ಮತ್ತು ನಾಯಕ ಜೋಸ್ ಬಟ್ಲರ್ ಅವರು 49 ಎಸೆತಗಳಲ್ಲಿ ಅಜೇಯ 80 ರನ್ ಗಳಿಸಿದರು.

16 ಓವರ್‌ಗಳಲ್ಲಿ 170 ರನ್ ಗಳಿಸಿದ ಇಂಗ್ಲೆಂಡ್
ಇದರ ಫಲವಾಗಿ ಭಾರತ ವಿರುದ್ಧ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ 16 ಓವರ್‌ಗಳಲ್ಲಿ 170 ರನ್ ಗಳಿಸಿ, 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಹೀನಾಯ ಸೋಲಿನ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಡಗೌಟ್‌ನಲ್ಲಿ ತುಂಬಾ ಭಾವನಾತ್ಮಕವಾಗಿದ್ದರು ಮತ್ತು ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಸಮಾಧಾನಪಡಿಸಿದರು.
ರೋಹಿತ್ ಶರ್ಮಾ ಡಗೌಟ್‌ನಲ್ಲಿ ಕೂತು ಕಣ್ಣೀರು
ಸೆಮಿಫೈನಲ್‌ನಲ್ಲಿ ಅವಮಾನಕರ ಸೋಲಿನ ಬೇಸರದಿಂದ ನಾಯಕ ರೋಹಿತ್ ಶರ್ಮಾ ಡಗೌಟ್‌ನಲ್ಲಿ ಕೂತು ಕಣ್ಣೀರು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾರತ 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ ಭಾರತ ತಂಡ ಈವರೆಗೆ ಒಂದೇ ಒಂದು ಐಸಿಸಿ ಟ್ರೋಫಿ ಗೆದ್ದಿಲ್ಲ. ಈ ಮೂಲಕ ಭಾರತ ಕ್ರಿಕೆಟ್ ತಂಡ ಕಳೆದ ಒಂದು ದಶಕದಿಂದ ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯಗಳಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನು ಮುಂದುವರೆಸಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನ ವಿರುದ್ಧ ಫೈನಲ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಬಗ್ಗೆ ಮಾತನಾಡುವುದಾದರೆ, ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿ, ಎದುರಾಳಿ ತಂಡಕ್ಕೆ 169 ರನ್‌ಗಳ ಗುರಿ ನೀಡಿತು.
169 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ ಆರಂಭಿಕ ಜೋಡಿಯಾದ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಅವರ ಮುರಿಯದ 170 ರನ್‌ಗಳ ಜೊತೆಯಾಟದಿಂದ ಭಾರತದ ವಿರುದ್ಧ ಗೆದ್ದು ಬೀಗಿತು. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications