
ಅದ್ಧೂರಿ ಪಾರ್ಟಿಗೆ ಯೋಜನೆ
ಸಿಡ್ನಿಯಲ್ಲಿ ಭಾರತೀಯ ತಂಡದ ಆಟಗಾರರು ಅವರ ಪತ್ನಿಯರು ಹಾಗೂ ಮಕ್ಕಳಿಗಾಗಿ ಅದ್ದೂರಿ ಪಾರ್ಟಿಯನ್ನು ಆಯೋಜನೆ ಮಾಡಲು ನಿರ್ಧರಿಸಲಾಗಿತ್ತು. ದೀಪಾವಳಿ ಹಬ್ಬ ಹಾಗೂ ಪಾಕಿಸ್ತಾನದ ವಿರುದ್ಧದ ಗೆಲುವನ್ನು ಸಂಭ್ರಮಿಸಲು ಈ ಪಾರ್ಟಿ ಆಯೋಜನೆಗೆ ತೀರ್ಮಾನಿಸಲಾಗಿತ್ತು. ಆದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೋಚ್ ದ್ರಾವಿಡ್ ಆಟಗಾರರ ಏಕಾಗ್ರತೆ ಹಾಗೂ ಮುಂದಿರುವ ದೊಡ್ಡ ಗುರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಪಾರ್ಟಿಯನ್ನು ರದ್ದುಗೊಳಿಸಿದೆ ಎಂದು ಮಾಹಿತಿ ದೊರೆತಿದೆ.

ಭಾರತದ ಮುಂದಿದೆ ದೊಡ್ಡ ಗುರಿ
ಭಾರತ ತಂಡದ ಸಹಾಯಕ ಸಿಬ್ಬಂದಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾಹಿತಿಯನ್ನು ನೀಡಿದ್ದಾರೆ. ಭಾರತದ ಮುಂದಿರುವ ದೊಡ್ಡ ಗುರಿಯನ್ನು ಆಟಗಾರರಿಗೆ ಹೇಳಲಾಗಿದೆ. ತಂಡ ಉತ್ತಮ ಆರಂಭವನ್ನು ಪಡೆದುಕೊಂಡಿದ್ದು ಅದನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿದೆ. ಟೂರ್ನಮೆಂಟ್ ಇನ್ನೂ ಮುಕ್ತಾಯವಾಗಿಲ್ಲ. ಹಾಗಾಗಿ ಬೇರೆ ಕಡೆ ಗಮನಗಳು ಹರಿಯುವುದು ಬೇಡ"ಎಂದು ಆಟಗಾರರಿಗೆ ತಿಳಿಸಲಾಗಿದೆ ಎಂದು ಭಾರತ ತಂಡದ ಸಹಾಯಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಮತ್ತೊಂದು ಪಂದ್ಯಕ್ಕೆ ಸಜ್ಜಾದ ಟೀಮ್ ಇಂಡಿಯಾ
ಪಾಕಿಸ್ತಾನದ ವಿರುದ್ಧ ಸಾಧಿಸಿದ ರೋಚಕ ಗೆಲುವು ಭಾರತಕ್ಕೆ ಸಹಜವಾಗಿಯೇ ಆತ್ಮವಿಶ್ವಾಸ ಹೆಚ್ಚಿಸಿದೆ. ಯಾವುದೇ ಹಂತದಿಂದಲೂ ಮೇಲೇಳುವ ಹುಮ್ಮಸ್ಸು ತಂಡಕ್ಕೆ ದೊರೆತಿರುವುದು ಮುಂದಿನ ಪಂದ್ಯಗಳಿಗೆ ಹುರುಪು ಮೂಡಿಸಲಿದೆ. ಭಾರತ ತನ್ನ ಎರಡನೇ ಪಂದ್ಯವನ್ನು ನೆದರ್ಲೆಂಡ್ಸ್ ತಂಡದ ವಿರುದ್ಧ ಆಡಲಿದ್ದು ಆ ಪಂದ್ಯಕ್ಕೆ ಈಗಾಗಲೇ ಅಭ್ಯಾಸ ಆರಂಭಿಸಿದೆ. ಅದಾದ ಬಳಿಕ ಮುಂದಿನ ಭಾನುವಾರ ಮತ್ತೊಂದು ಹೈವೋಲ್ಟೇಜ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದ್ದು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಭಾರತದ ಸ್ಕ್ವಾಡ್ ಹೀಗಿದೆ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ


Click it and Unblock the Notifications
