ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇನ್ನೆಂಥಾ ಫಾರ್ಮ್ ಬೇಕು!: ಅದ್ಭುತ ಪ್ರದರ್ಶನ ನೀಡಿದರೂ ವಿಶ್ವಕಪ್‌ಗೆ ಆಯ್ಕೆಯಾಗದ ನಾಲ್ವರು ಕ್ರಿಕೆಟಿಗರು!

T20 world cup 2022: These 4 cricketers are in excellent form but not a part of their nation’s World Cup squad

ಟಿ20 ವಿಶ್ವಕಪ್‌ಗೆ ಕೆಲವೇ ದಿನಗಳು ಮಾತ್ರ ಬಾಕಿಯಿದೆ. ಅಕ್ಟೋಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಕೂಡ ಆಟಗಾರರ ಪಡೆಯನ್ನು ಘೋಷಣೆ ಮಾಡಿದೆ. ಅಂತಿಮ ಹಂತದ ಸಿದ್ಧತೆಯಲ್ಲಿರುವ ತಂಡಗಳು ವಿಶ್ವಕಪ್‌ನಲ್ಲಿ ಮಿಂಚುಹರಿಸಲು ಸರ್ವ ತಯಾರಿಯನ್ನು ನಡೆಸುತ್ತಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಎಲ್ಲಾ ತಂಡಗಳು ಕೂಡ ಬಲಿಷ್ಠ ಆಟಗಾರರ ಪಡೆಯನ್ನು ಈಗಾಗಲೇ ಘೋಷಣೆ ಮಾಡಿದೆ. ಬ್ಯಾಟಿಂಗ್ ಬೌಲಿಂಗ್ ಹಾಗೂ ಆಲ್‌ರೌಂಡರ್ ವಿಭಾಗದಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಆಟಗಾರರನ್ನು ಆಯ್ಕೆ ಮಾಡಿಕೊಂಡು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಸಿದ್ಧವಾಗಿದೆ. ಹಾಗಿದ್ದರೂ ಕೆಲ ತಂಡಗಳು ಕೆಲ ಆಟಗಾರರನ್ನು ಕೈಬಿಟ್ಟಿರುವ ನಿರ್ಧಾರಗಳು ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ.

ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್

ಇತ್ತೀಚಿನ ದಿನಗಳಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿದ ಹೊರತಾಗಿಯೂ ಟಿ20 ವಿಶ್ವಕಪ್‌ನ ತಂಡದಲ್ಲಿ ಸ್ಥಾನ ಪಡೆಯಲಿ ವಿಫಲವಾಗಿರುವ ವಿಶ್ವ ಕ್ರಿಕೆಟ್‌ನ ನಾಲ್ವರು ಆಟಗಾರರ ಬಗ್ಗೆ ಈ ವರದಿಯಲ್ಲಿ ನೋಡೋಣ. ಮುಂದೆ ಓದಿ..

ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್

ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್

ಟೀಮ್ ಇಂಡಿಯಾದ ಯುವ ಬ್ಯಾಟರ್ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಈ ವರ್ಷ ಟಿ20 ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಆಟಗಾರ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸುವ ಸಂದರ್ಭದಲ್ಲಿಯೂ ನಾಯಕತ್ವದ ಹಿಣೆಗಾರಿಕೆಯ ಜೊತೆಗೆ ಬ್ಐಆಟಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುವಲ್ಲಿ ಸಫಲವಾಗಿದ್ದರು. ಇನ್ನು ಭಾರತದ ಪರವಾಗಿಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಸಂಜು ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಚೊಚ್ಚಲ ಟಿ20 ಅರ್ಧ ಶತಕ ಸಿಡಿಸಿದ್ದರು. ಹಾಗಿದ್ದರೂ ಕೂಡ ಟೀಮ್ ಇಂಡಿಯಾದಲ್ಲಿ ಸಂಜು ಸ್ಯಾಮ್ಸನ್‌ಗೆ ಸ್ಥಾನವಿಲ್ಲ. ಬದಲಿಗೆ ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಆಸಿಸ್ ತಂಡದ ಯುವ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್

ಆಸಿಸ್ ತಂಡದ ಯುವ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್

ಆಸ್ಟ್ರೇಲಿಯಾ ತಂಡದ ಯುವ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಭಾರತದ ವಿರುದ್ಧದ ಟಿ20 ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಮಿಂಚುಹರಿಸಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಸಮಾನವಾಗಿ ಕೊಡುಗೆ ನೀಡುವ ಸಾಮರ್ಥ್ಯವಿರುವ ಅದ್ಭುತ ಪ್ರತಿಭೆ ಎಂಬುದನ್ನು ಗ್ರೀನ್ ಸಾಬೀತುಪಡಿಸಿದ್ದಾರೆ. ಬ್ಯಾಟಿಂಗ್‌ನಲ್ಲಿ ಆರಂಭಿಕನಾಗಿ ವಿಧ್ವಂಸಕ ಪ್ರದರ್ಶನ ನೀಡುವ ಮೂಲಕ ಎಂಥಾ ಎದುರಾಳಿಗೂ ಅಪಾಯಕಾರಿಯಾಗಬಲ್ಲ ಬ್ಯಾಟರ್ ಕ್ಯಾಮರೂನ್ ಗ್ರೀನ್. ಆದರೆ ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಕ್ಯಾಮರೂನ್ ಗ್ರೀನ್ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ.

ದ. ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್

ದ. ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್

ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಈಗಲೂ ಅದ್ಭುತ ಪ್ರದರ್ಶನವನ್ನು ನೀಡಿಕೊಂಡು ಬರುತ್ತಿರುವ ಆಟಗಾರನಾಗಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ಆಯ್ಕೆ ಮಂಡಳಿ ಫಾಫ್ ಅವರನ್ನು ನಿರ್ಲಕ್ಷ್ಯ ಮಾಡುವುದನ್ನು ಮುಂದುವರಿಸಿದೆ. ಈ ಬಾರಿಯ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸದ್ಯ ಆಡುತ್ತಿರು ಫಾಫ್ ಅಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತಿದ್ದು ನಾಲ್ಕನೇ ಅತಿ ಹೆಚ್ಚಿನ ರನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಸೈಂಟ್ ಲೂಸಿಯಾ ಕಿಂಗ್ಸ್ ತಂಡದ ಪರವಾಗಿ ಫಾಫ್ ಆಡುತ್ತಿದ್ದಾರೆ. ಆದರೆ ಟಿ20 ವಿಶ್ವಕಪ್‌ನ ತಂಡದಲ್ಲಿ ಫಾಫ್‌ಗೆ ಆಡುವ ಅವಕಾಶ ದೊರೆತಿಲ್ಲ.

ಇಂಗ್ಲೆಂಡ್ ದಾಂಡಿಗ ಬೆನ್ ಡಕ್ಕೆಟ್

ಇಂಗ್ಲೆಂಡ್ ದಾಂಡಿಗ ಬೆನ್ ಡಕ್ಕೆಟ್

ಬೆನ್ ಡಕ್ಕೆಟ್ ಇಂಗ್ಲೆಂಡ್ ತಂಡದ ಪರವಾಗಿ ಸದ್ಯ ನಡೆಯುತ್ತಿರುವ ಪಾಕಿಸ್ತಾನದ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಆಟಗಾರನಾಗಿದ್ದಾರೆ. ಈ ಸರಣಿಯಲ್ಲಿ ಬೆನ್ ಡಕ್ಕೆಟ್ ಈಗಾಗಲೇ 167 ರನ್‌ಗಳನ್ನು ಗಳಿಸಿದ್ದು ಇಂಗ್ಲೆಂಡ್ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗಿದ್ದರೂ ಕೂಡ ಈ ಆಟಗಾರ ಆಸ್ಟ್ರೇಲಿಯಾ ತಂಡದಲ್ಲಿ ಆಯೋಜನೆಯಾಗಿರುವ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುವಲ್ಲಿ ವಿಫಲವಾಗಿದ್ದಾರೆ.

Story first published: Wednesday, September 28, 2022, 12:46 [IST]
Other articles published on Sep 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X