T20 World Cup 2022 ಟೂರ್ನಿಯ ಹಿನ್ನೋಟ: ಇಂಗ್ಲೆಂಡ್ ಚಾಂಪಿಯನ್ ಆಗಿದ್ದೇಗೆ?; ಭಾರತ ಎಡವಿದ್ದೆಲ್ಲಿ?
ಮೇ 28 ಬುಧವಾರ, 9ನೇ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿ ಜೂನ್ 1ರಿಂದ ಆರಂಭವಾಗಲಿದೆ. ಈ ಪ್ರತಿಷ್ಠಿತ ಟೂರ್ನಿಯನ್ನು ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ದೇಶಗಳು ಆಯೋಜಿಸುತ್ತಿವೆ.
ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಅಮೆರಿಕಾ ಐಸಿಸಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸುತ್ತಿದೆ. ಮೆಗಾ ಟಿ20 ವಿಶ್ವಕಪ್‌ನಲ್ಲಿ 20 ತಂಡಗಳು ಕೂಡ ಮೊದಲ ಬಾರಿಗೆ ಭಾಗವಹಿಸುತ್ತಿವೆ.

ಮತ್ತೊಂದೆಡೆ ಅಮೆರಿಕದಲ್ಲಿ ನಡೆಯಲಿರುವ ಪ್ರತಿಷ್ಠಿತ ಟೂರ್ನಿಯಲ್ಲಿ ಪ್ರಶಸ್ತಿ ಉಳಿಸಿಕೊಳ್ಳಲು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮೇಲೆ ಒತ್ತಡ ಬೀಳಲಿದೆ. ಜೂನ್ 4 ರಂದು ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
ಒಟ್ಟು ಇಲ್ಲಿಯವರೆಗೆ 8 ಟಿ20 ವಿಶ್ವಕಪ್ ಆವೃತ್ತಿಗಳು ಯಶಸ್ವಿಯಾಗಿ ನಡೆದಿವೆ. 2007ರಲ್ಲಿ ಪ್ರಾರಂಭವಾದ ಟಿ20 ವಿಶ್ವಕಪ್ ಟೂರ್ನಿ ಅನ್ನು ಕೊನೆಯ ಬಾರಿ 2022ರಲ್ಲಿ ಆಡಲಾಗಿದೆ.
ಈ ಆವೃತ್ತಿಯಲ್ಲಿ ಇಂಗ್ಲೆಂಡ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿ ಗೆದ್ದುಕೊಂಡಿತ್ತು. ಇದಕ್ಕೂ ಮೊದಲು 2010ರಲ್ಲಿ ಇಂಗ್ಲೆಂಡ್ ಮೊದಲ ಬಾರಿಗೆ ಪ್ರಶಸ್ತಿ ಜಯಿಸಿತ್ತು.

2022ರ ಆವೃತ್ತಿಯಲ್ಲಿ ಇಂಗ್ಲೆಂಡ್ ಪ್ರಯಾಣ
ಕಳೆದ ಆವೃತ್ತಿ ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಇಂಗ್ಲೆಂಡ್ ತನ್ನ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಅಫ್ಘಾನಿಸ್ತಾನವನ್ನು ಸೋಲಿಸಿತ್ತು. ಐರ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಪರಾಭವಗೊಂಡಿತ್ತು.
ಪಂದ್ಯಕ್ಕೆ ಮಳೆಯಿಂದ ಅಡ್ಡಿಪಡಿಸಿದ್ದರಿಂದ ಮ್ಯಾಚ್ ರೆಫರಿ ಡಕ್‌ವರ್ತ್ ಲೂಯಿಸ್ ನಿಯಮದ ಪ್ರಕಾರ ಐರ್ಲೆಂಡ್ ಪರವಾಗಿ 5 ರನ್‌ಗಳಿಂದ ತೀರ್ಪು ನೀಡಿದರು. ಬಳಿಕ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯ ಕೂಡ ಮಳೆಯಿಂದಾಗಿ ಆರಂಭವಾಗಲಿಲ್ಲ.

ಇದರಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ನಾಲ್ಕನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಇಂಗ್ಲಂಡ್ 20 ರನ್‌ಗಳಿಂದ ಸೋಲಿಸಿತು.
ಐದನೇ ಪಂದ್ಯದಲ್ಲಿ ಶ್ರೀಲಂಕಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶಿಸಿತ್ತು. ಸೆಮಿಫೈನಲ್‌ನಲ್ಲಿ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಇಂಗ್ಲೆಂಡ್ ಫೈನಲ್‌ಗೆ ಲಗ್ಗೆ ಇಟ್ಟಿತ್ತು.
2022ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಮುಖಮುಖಿಯಾಗಿದ್ದವು. ಫೈನಲ್‌ನಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 138 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ 19 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದು ಬೀಗಿತ್ತು. ಪಾಕಿಸ್ತಾನ ರನ್ನರ್ ಆಫ್ ಸ್ಥಾನದಲ್ಲಿ ಉಳಿದಿತ್ತು.

ಇಂಗ್ಲೆಂಡ್ ಆಕ್ರಮಣಕಾರಿ ಬೌಲಿಂಗ್ ದಾಳಿ ಮುಂದೆ ಪಾಕಿಸ್ತಾನದ ಬ್ಯಾಟಿಂಗ್ ಕ್ರಮಾಂಕ ಸಂಪೂರ್ಣ ಕುಸಿದಿತ್ತು. ಆದರೆ, ಈ ಸಾಧರಣ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಒಮ್ಮೆಲೇ ಪಾಕಿಸ್ತಾನ ಉರಿ ಬೌಲಿಂಗ್ ದಾಳಿಗೆ ತತ್ತರಿಸಿತ್ತು. ಈ ವೇಳೆ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದ ಬೆನ್ ಸ್ಟೋಕ್ಸ್ 52 ರನ್ ಗಳಿಸಿ ತಂಡವನ್ನು ಚಾಂಪಿಯನ್ ಮಾಡಿದ್ದರು.
ಟೀಮ್ ಇಂಡಿಯಾ ಎಡವಿದ್ದೆಲ್ಲಿ?
ಟೂರ್ನಿಯಲ್ಲಿ ಅದ್ಭುತ ಆರಂಭ ಪಡೆದಿದ್ದ ಟೀಮ್ ಇಂಡಿಯಾ 5 ಲೀಗ್ ಪಂದ್ಯಗಳಲ್ಲಿ 4 ರಲ್ಲಿ ಗೆದ್ದಿತ್ತು. ಅದರಲ್ಲಿ ಆಫ್ರಿಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಸೋತಿತ್ತು. ಬಳಿಕ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳಿಂದ ಭಾರತ ಸೋಲುವ ಮೂಲಕ ಫೈನಲ್ ಹಾದಿಯನ್ನು ತಪ್ಪಿಸಿಕೊಂಡಿತ್ತು.
ಮ್ಯಾನ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ
2022ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಲು ಪ್ರಮುಖ ಸ್ಯಾಮ್ ಕುರ್ರಾನ್ ಪ್ರಮುಖ ಪಾತ್ರವಹಿಸಿದ್ದರು. ತಮ್ಮ ಆಲ್‌ರೌಂಡರ್ ಪ್ರದರ್ಶನದೊಂದಿಗೆ ಟೂರ್ನಿಯಲ್ಲಿ ಮಿಂಚಿದ್ದರು. ಒಟ್ಟು 7 ಪಂದ್ಯಗಳನ್ನು ಆಡಿದ್ದ ಸ್ಯಾಮ್ ಕುರ್ರಾನ್ 13 ವಿಕೆಟ್‌ಗಳನ್ನು ಕಬಳಿಸಿದ್ದರು.
ಇದಲ್ಲದೇ ಪಾಕಿಸ್ತಾನದ ವಿರುದ್ಧದ ಫೈನಲ್ ಪಂದ್ಯದಲ್ಲಿ 12 ರನ್‌ಗಳಿಗೆ 3 ವಿಕೆಟ್ ಪಡೆದು ಇಂಗ್ಲೆಂಡ್ ಗೆಲುವಿಗೆ ನೆರೆವಾಗಿದ್ದರು. ಈ ಪ್ರದರ್ಶನಕ್ಕಾಗಿ ಸ್ಯಾಮ್ ಕುರ್ರಾನ್ ಅವರಿಗೆ ಮ್ಯಾನ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ನೀಡಲಾಗಿತ್ತು.
ಹೆಚ್ಚು ರನ್: ವಿರಾಟ್ ಕೊಹ್ಲಿ
2022ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 6 ಪಂದ್ಯಗಳಲ್ಲಿ 98.66 ಸರಾಸರಿ ಮತ್ತು 136 ಸ್ಟ್ರೈಕ್ ರೇಟ್‌ನಲ್ಲಿ 296 ರನ್ ಗಳಿಸಿದ್ದರು. ಈ ವರ್ಷ ಕೊಹ್ಲಿ 4 ಅರ್ಧಶತಕಗಳ ಹೊಡೆದು ಸಂಭ್ರಮಿಸಿದ್ದರು. 82 ರನ್ ಕೊಹ್ಲಿ ಅತ್ಯುತ್ತಮ ಸ್ಕೋರ್ ಆಗಿತ್ತು.
ಹೆಚ್ಚು ವಿಕೆಟ್‌ಗಳು: ವನಿಂದು ಹಸರಂಗ
ಶ್ರೀಲಂಕಾ ತಂಡ ನಾಯಕ ವನಿಂದು ಹಸರಂಗ 2022ರ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದರು.
ಹಸರಂಗ 8 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಪಡೆದಿದ್ದರು. 8 ರನ್‌ಗಳಿಗೆ 3 ವಿಕೆಟ್ ಉರುಳಿಸಿದ್ದು, ಹಸರಂಗ ತಂಡದ ಅತ್ಯುತ್ತಮ ಪ್ರದರ್ಶನ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications