ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: 4000 ರನ್ ಪೂರೈಸಿದ ಮೊದಲ ಪ್ಲೇಯರ್

ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯಮೋಘ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ 39 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ ವಿರಾಟ್ ಕೊಹ್ಲಿ ಪ್ರಸ್ತುತ ವಿಶ್ವಕಪ್‌ನಲ್ಲಿ 4ನೇ ಅರ್ಧಶತಕ ದಾಖಲಿಸಿದ್ದಾರೆ.
ಅರ್ಧಶತಕ ಸಿಡಿಸಿದ ನಂತರದ ಎಸೆತದಲ್ಲೇ ಕ್ರಿಸ್ ಜೋರ್ಡಾನ್‌ಗೆ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ, ವಿಶ್ವಕಪ್‌ನಲ್ಲಿ ತಮ್ಮ ಅಮೋಘ ಫಾರ್ಮ್ ಮುಂದುವರಿಸಿದ್ದಾರೆ. ವಿರಾಟ್ ಕೊಹ್ಲಿ ಈ ಇನ್ನಿಂಗ್ಸ್‌ನಲ್ಲಿ ಟಿ20 ಕ್ರಿಕೆಟ್‌ನ ಮತ್ತೊಂದು ವಿಶ್ವದಾಖಲೆ ಇವರ ಹೆಸರಿಗೆ ದಾಖಲಾಗಿದೆ.
T20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000ರನ್ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಸಾಧನೆ ಕೊಹ್ಲಿ ಮುಡಿಗೇರಿದೆ. ಪಂದ್ಯದ 15ನೇ ಓವರ್‌ನ ಕೊನೆಯ ಎಸೆತದಲ್ಲಿ ಲಿವಿಂಗ್‌ಸ್ಟೋನ್ ಬೌಲಿಂಗ್‌ನಲ್ಲಿ ಬೌಂಡರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ 4 ಸಾವಿರ ರನ್‌ಗಳ ಗಡಿದಾಟಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ 37ನೇ ಅರ್ಧಶತಕ ದಾಖಲಿಸಿದ ವಿರಾಟ್ ಕೊಹ್ಲಿ 115 ಟಿ20 ಪಂದ್ಯಗಳಲ್ಲಿ ದಾಖಲೆಯ 52.74 ಬ್ಯಾಟಿಂಗ್ ಸರಾಸರಿಯಲ್ಲಿ 4008 ರನ್ ಕಲೆಹಾಕಿದ್ದಾರೆ. ಕೊಹ್ಲಿ ಇನ್ನಿಂಗ್ಸ್‌ನಲ್ಲಿ 1 ಶತಕ ಹಾಗೂ 37 ಅರ್ಧಶತಕಗಳು ಒಳಗೊಂಡಿವೆ.
ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ ಹಿಂಬದಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ 27 ರನ್ ಕಲೆಹಾಕಿದ ರೋಹಿತ್ ಶರ್ಮಾ, ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 148 ಪಂದ್ಯಗಳಿಂದ 30.82ರ ಸರಾಸರಿಯಲ್ಲಿ 3853 ರನ್ ಕಲೆಹಾಕಿದ್ದಾರೆ. 29 ಅರ್ಧಶತಕ ಹಾಗೂ ದಾಖಲೆಯ 4 ಶತಕಗಳು ಹಿಟ್‌ಮ್ಯಾನ್ ಬ್ಯಾಟ್‌ನಿಂದ ಸಿಡಿದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications