
ಐಸಿಸಿ ಟೂರ್ನಿಗಳಲ್ಲಿ 50-ಪ್ಲಸ್ ಸ್ಕೋರ್ ಬೃಹತ್ ದಾಖಲೆ
ಭಾನುವಾರ ನಡೆಯುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಬ್ಯಾಟಿಂಗ್ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಪ್ರಸ್ತುತ ಹಂಚಿಕೊಂಡಿರುವ ಐಸಿಸಿ ಟೂರ್ನಿಗಳಲ್ಲಿ 50-ಪ್ಲಸ್ ಸ್ಕೋರ್ ಬೃಹತ್ ದಾಖಲೆಯನ್ನು ಹಿಂದಿಕ್ಕಲು ಎದುರು ನೋಡುತ್ತಿದ್ದಾರೆ.
ಪ್ರಸ್ತುತ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಐಸಿಸಿ ಟೂರ್ನಿಗಳಲ್ಲಿ ತಲಾ 23 ಬಾರಿ 50-ಪ್ಲಸ್ ಸ್ಕೋರ್‌ಗಳನ್ನು ಹೊಂದಿದ್ದಾರೆ. ಪಾಕಿಸ್ತಾನದ ವಿರುದ್ಧ ಒಂದು ಅರ್ಧಶತಕ ಗಳಿಸಿದರೆ ಸಚಿನ್ ತೆಂಡೂಲ್ಕರ್‌ಗಿಂತ ವಿರಾಟ್ ಕೊಹ್ಲಿ ಒಂದು ಹೆಜ್ಜೆ ಮುಂದೆ ಹೋಗಲಿದ್ದಾರೆ.

ವಿರಾಟ್ ಕೊಹ್ಲಿ 2 ಶತಕ ಮತ್ತು 21 ಅರ್ಧಶತಕ
ಐಸಿಸಿ ಈವೆಂಟ್‌ಗಳಲ್ಲಿ ಅವರಿಬ್ಬರ ವೈಯಕ್ತಿಕ ಪ್ರದರ್ಶನಕ್ಕೆ ಬಂದಾಗ, ಐಸಿಸಿ ಈವೆಂಟ್‌ಗಳಲ್ಲಿ ಸಚಿನ್ ತೆಂಡೂಲ್ಕರ್ ಒಟ್ಟು 7 ಶತಕಗಳು ಮತ್ತು 16 ಅರ್ಧ ಶತಕಗಳನ್ನು ಹೊಂದಿದ್ದರೆ, ವಿರಾಟ್ ಕೊಹ್ಲಿ 2 ಶತಕ ಮತ್ತು 21 ಅರ್ಧಶತಕಗಳನ್ನು ಹೊಂದಿದ್ದಾರೆ.
ಐಸಿಸಿ ಟೂರ್ನಿಗಳಲ್ಲಿ ಇಬ್ಬರ ನಡುವಿನ ದೊಡ್ಡ ವ್ಯತ್ಯಾಸವೆಂದರೆ, ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ20 ವಿಶ್ವಕಪ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಏಕದಿನ ವಿಶ್ವಕಪ್‌ಗಳಲ್ಲಿ ಮಾತ್ರ ಆಡಿದ್ದಾರೆ.
ಏಷ್ಯಾ ಕಪ್ 2022ರಲ್ಲಿ ಅಫ್ಘಾನಿಸ್ತಾನದ ವಿರುದ್ಧ ವಿರಾಟ್ ಕೊಹ್ಲಿ ಚೊಚ್ಚಲ ಟಿ20 ಶತಕವನ್ನು ಗಳಿಸಿದರು. ಇದು ಸುಮಾರು ಮೂರು ವರ್ಷಗಳಲ್ಲಿ ಅವರ ಮೊದಲ ಮೂರಂಕಿಯ ಸ್ಕೋರ್ ಗಳಿಸಿದರು.

ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿಯಿಂದ ದೊಡ್ಡ ನಿರೀಕ್ಷೆಗಳಿವೆ
2022ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಯಿಂದ ದೊಡ್ಡ ನಿರೀಕ್ಷೆಗಳಿವೆ. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಭಾರತೀಯ ಬ್ಯಾಟರ್ ಅದ್ಭುತ ದಾಖಲೆಯನ್ನು ಹೊಂದಿದ್ದು, ಇದುವರೆಗಿನ ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾದಲ್ಲಿ ಹಲವಾರು ಸ್ಮರಣೀಯ ಪ್ರದರ್ಶನಗಳನ್ನು ನೀಡಿದ್ದಾರೆ.
ಅಂಕಿಅಂಶವನ್ನು ದೃಷ್ಟಿಯಲ್ಲಿಟ್ಟುಕೊಂಡು ನೋಡುವುದಾದರೆ, ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ಒಟ್ಟು 11 ಟಿ20 ಪಂದ್ಯಗಳನ್ನು ಆಡಿದ್ದಾರೆ, 64.43ರ ಸರಾಸರಿಯಲ್ಲಿ 451 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್-ರೇಟ್ ಸಹ 144.55 ನಲ್ಲಿ ಅತ್ಯುತ್ತಮವಾಗಿದೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ದೊಡ್ಡ ಪ್ರದರ್ಶನವು ವಿರಾಟ್ ಕೊಹ್ಲಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಬೃಹತ್ ದಾಖಲೆಯನ್ನು ಮುರಿಯಲು ಅವಕಾಶ ಕಲ್ಪಿಸುತ್ತದೆ.

ಭಾರತ vs ಪಾಕಿಸ್ತಾನ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್‌ದೀಪ್ ಸಿಂಗ್
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾನ್ ಮಸೂದ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ


Click it and Unblock the Notifications
