For Quick Alerts
ALLOW NOTIFICATIONS  
For Daily Alerts
 

T20 WC 2024: ಆಸ್ಟ್ರೇಲಿಯಾ ತಂಡಕ್ಕೆ ಆಘಾತಕಾರಿ ಸೋಲುಣಿಸಿದ ಅಫ್ಘಾನಿಸ್ತಾನ; ಏಕದಿನ ವಿಶ್ವಕಪ್ ಸೋಲಿಗೆ ಸೇಡು

ಭಾನುವಾರ, ಜೂನ್ 23ರಂದು ಕಿಂಗ್‌ಸ್ಟೌನ್‌ನ ಅರ್ನೋಸ್ ವೇಲ್ ಗ್ರೌಂಡ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 8ರ ರೋಚಕ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ ತಂಡ 21 ರನ್‌ಗಳಿಂದ ಗೆದ್ದು ಬೀಗಿತು.

ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ ತಂಡಕ್ಕೆ ಮೊದಲ ಗೆಲುವಾಗಿದೆ. ಅಲ್ಲದೆ, ಭಾರತದಲ್ಲಿ ನಡೆದಿದ್ದ 2023ರ ಏಕದಿನ ವಿಶ್ವಕಪ್‌ನಲ್ಲಿ ಗೆಲುವು ಕಸಿದುಕೊಂಡಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಇದೀಗ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್‌ನಲ್ಲಿ ಗೆದ್ದು ಸೇಡು ತೀರಿಸಿಕೊಂಡಿತು.

T20 World Cup 2024 Afghanistan Beat Australia By 21 Runs In Super 8 Match

ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ತಂಡ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಝದ್ರಾನ್ ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148 ರನ್‌ಗಳನ್ನು ಗಳಿಸಿತ್ತು.

149 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಸ್ಫೋಟಕ ಅಧಶತಕದ ಹೊರತಾಗಿಯೂ 19.2 ಓವರ್‌ಗಳಲ್ಲಿ 127 ರನ್‌ಗಳಿಗೆ ಸರ್ವಪತನ ಕಂಡಿತು ಮತ್ತು ಉದಯೋನ್ಮುಖ ಅಫ್ಘಾನಿಸ್ತಾನ ವಿರುದ್ಧ 21 ರನ್‌ಗಳ ಅವಮಾನಕಾರಿ ಸೋಲನುಭವಿಸಿತು.

ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಡೇವಿಡ್ ವಾರ್ನರ್ ಉತ್ತಮ ಆರಂಭ ನೀಡಲಿಲ್ಲ. ಟ್ರಾವಿಸ್ ಹೆಡ್ ಡಕ್‌ಗೆ ಔಟಾದರೆ, ಡೇವಿಡ್ ವಾರ್ನರ್ 3 ರನ್ ಮತ್ತು ಮಿಚೆಲ್ ಮಾರ್ಷ್ 12 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಆಸ್ಟ್ರೇಲಿಯಾ ತಂಡದ ರಕ್ಷಣೆ ಬಂದರು ಮತ್ತು ಅಫ್ಘಾನ್ ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ 41 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 59 ರನ್ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಮತ್ತೆ ಆಟಕ್ಕೆ ತಂದರು.

T20 World Cup 2024 Afghanistan Beat Australia By 21 Runs In Super 8 Match

ಉಳಿದಂತೆ ಮಾರ್ಕಸ್ ಸ್ಟೋಯಿನಿಸ್ 11 ರನ್, ಟಿಮ್ ಡೇವಿಡ್ 2, ಮ್ಯಾಥ್ಯೂ ವೇಡ್ 5, ಪ್ಯಾಟ್ ಕಮ್ಮಿನ್ಸ್ 3, ಆಶ್ಟನ್ ಆಗರ್ 2, ಆಡಮ್ ಝಂಪಾ 9 ಮತ್ತು ಜೋಶ್ ಹೇಜಲ್‌ವುಡ್ 5 ರನ್ ಗಳಿಸಿದರು.

ಅಫ್ಘಾನಿಸ್ತಾನ ಬೌಲರ್‌ಗಳು ತಮ್ಮದೇ ಶೈಲಿಯಲ್ಲಿ ಮರಳಿದರು ಮತ್ತು ಆಸ್ಟ್ರೇಲಿಯಾ ತಂಡವನ್ನು 127 ರನ್‌ಗಳಿಗೆ ಕಟ್ಟಿಹಾಕಿದರು ಮತ್ತು ರೋಚಕ ಗೆಲುವು ದಾಖಲಿಸಿದರು.

ಗುಲ್ಬದಿನ್ ನೈಬ್ 4 ಓವರ್‌ಗಳಲ್ಲಿ 20 ರನ್ ನೀಡಿ 4 ವಿಕೆಟ್ ಪಡೆದರೆ, ನವೀನ್ ಉಲ್ ಹಕ್ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್ ಕಬಳಿಸಿದರು. ಅಲ್ಲದೆ ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್ ಮತ್ತು ರಶೀದ್ ಖಾನ್ ತಲಾ ಒಂದು ವಿಕೆಟ್ ಪಡೆದರು.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಅಫ್ಘಾನಿಸ್ತಾನ ತಂಡದ ಆರಂಭಿಕರಾದ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಝದ್ರಾನ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 15.5 ಓವರ್‌ಗಳಲ್ಲಿ 118 ರನ್‌ಗಳ ಜೊತೆಯಾಟ ನೀಡಿದರು.

ರಹಮಾನುಲ್ಲಾ ಗುರ್ಬಾಜ್ 49 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 60 ರನ್ ಗಳಿಸಿದರೆ, ಇಬ್ರಾಹಿಂ ಝದ್ರಾನ್ 48 ಎಸೆತಗಳಲ್ಲಿ 6 ಬೌಂಡರಿ ಸಮೇತ 51 ರನ್ ಬಾರಿಸಿದರು. ಉಳಿದಂತೆ ಕರೀಂ ಜನತ್ 13 ರನ್, ಮೊಹಮ್ಮದ್ ನಬಿ 10 ರನ್ ಗಳಿಸಿ ತಂಡದ ಮೊತ್ತವನ್ನು 140ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾ ಪರ ಪ್ಯಾಟ್ ಕಮ್ಮಿನ್ಸ್ 3 ವಿಕೆಟ್ ಪಡೆದರೆ, ಆಡಮ್ ಝಂಪಾ 2 ವಿಕೆಟ್ ಮತ್ತು ಮಾರ್ಕಸ್ ಸ್ಟೋಯಿನಿಸ್ 1 ವಿಕೆಟ್ ಪಡೆದರು. ಇದೇ ವೇಳೆ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಟಿ20 ಪಂದ್ಯಗಳಲ್ಲಿ ಸತತ ಹ್ಯಾಟ್ರಿಕ್ ದಾಖಲಿಸಿದ ಮೊದಲ ಬೌಲರ್ ಎನಿಸಿಕೊಂಡರು.

Story first published: Sunday, June 23, 2024, 9:47 [IST]
Other articles published on Jun 23, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+