T20 World Cup 2024: 32 ವರ್ಷಗಳು, 18 ವಿಶ್ವಕಪ್; ಚೋಕರ್ಸ್ ಪಟ್ಟ ಕಳಚಿಕೊಳ್ಳುತ್ತಾ ದಕ್ಷಿಣ ಆಫ್ರಿಕಾ?
ಜೂನ್ 27 ಗುರುವಾರ, ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ 2024ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದು ಬೀಗಿದೆ.
ಈ ಮೂಲಕ ಕಳೆದ 32 ವರ್ಷಗಳ ಇತಿಹಾಸವನ್ನು ಏಡೆನ್ ಮಾರ್ಕ್ರಾಮ್ ನಾಯಕತ್ವದಲ್ಲಿ 2024ರ ಟಿ20 ವಿಶ್ವಕಪ್ ಆಡುತ್ತಿರುವ ದಕ್ಷಿಣ ಆಫ್ರಿಕಾ ತಂಡ ಬದಲಿಸಿದೆ. 18 ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಹರಿಣಗಳ ಪಡೆ ಫೈನಲ್ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.

ವಿಶ್ವಕಪ್‌ನಲ್ಲಿ 7 ಬಾರಿ ಸೆಮಿಫೈನಲ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಸೋತು ಹೊರಬಿದ್ದಿತ್ತು. ಹೀಗಾಗಿ ಈ ತಂಡಕ್ಕೆ ಚೋಕರ್ಸ್‌ಗಳು ಎಂಬ ಪಟ್ಟ ಸಿಕ್ಕಿತ್ತು. ತಂಡದಲ್ಲಿ ದಿಗ್ಗಜ ಆಟಗಾರರಿದ್ದರೂ ಈವರೆಗೂ ಒಂದು ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ.
ಈಗ ಕನಸು ನನಸಾಗುವುದೇ?
ವಿಶ್ವಕಪ್ ಟೂರ್ನಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದರು ನಾಕೌಟ್ ಹಂತದಲ್ಲಿ ದಕ್ಷಿಣ ಆಫ್ರಿಕಾ ಸಾಕಷ್ಟು ಬಾರಿ ಮುಗ್ಗರಿಸಿದೆ. ನಾಕೌಟ್ ಪಂದ್ಯಗಳಲ್ಲಿ ಒತ್ತಡಕ್ಕೆ ಸಿಲುಕಿ ಸೋಲು ಕಾಣುತ್ತಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ 'ಚೋಕರ್ಸ್' ಎಂಬ ಪಟ್ಟ ಅಲಂಕರಿಸಿತ್ತು.
ಆದರೆ ಅಫ್ಘಾನಿಸ್ತಾನ ವಿರುದ್ಧ ಒಂದು ಗೆಲುವು ಈ ಕಥೆಯನ್ನು ಬದಲಾಯಿಸುವ ಸನಿಹಕ್ಕೆ ಬಂದಿದೆ. ಟಿ20 ವಿಶ್ವಕಪ್ 2024ರ ಸೆಮಿಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸಿದ ಬಳಿಕ ದಕ್ಷಿಣ ಆಫ್ರಿಕಾ ತಂಡವು ಮೊದಲ ಬಾರಿಗೆ ವಿಶ್ವಕಪ್ ಒಂದರ ಫೈನಲ್‌ಗೆ ತಲುಪಿದೆ.
ಹರಿಣಗಳ ಪಡೆಯ ಹಲವು ವರ್ಷಗಳ ಗಾಯಗಳು ವಾಸಿಯಾಗುವ ನಿರೀಕ್ಷೆಗಳಿವೆ. ಆದರೆ ಈ ತಂಡ ವಿಶ್ವ ಚಾಂಪಿಯನ್ ಆಗಲು ಸಾಧ್ಯವೇ ಎಂಬುದು ಈಗ ಪ್ರಶ್ನೆಯಾಗಿದೆ.
ಐಸಿಸಿ ಟೂರ್ನಿಗಳಲ್ಲಿ ಮುಗ್ಗಿರಿಸಿರುವ ದಕ್ಷಿಣ ಆಫ್ರಿಕಾ
1) 1992 ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು
2) 1996 ಏಕದಿನ ವಿಶ್ವಕಪ್ ಕ್ವಾರ್ಟರ್-ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋಲು
3) 1999 ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು
4) 2007 ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು
5) 2009 ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಸೋಲು
6) 2011 ಏಕದಿನ ವಿಶ್ವಕಪ್ ಕ್ವಾರ್ಟರ್-ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು
7) 2013 ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು
8) 2014 ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧ ಸೋಲು
9) 2015 ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು
10) 2022 ಟಿ20 ವಿಶ್ವಕಪ್ ಸೂಪರ್ 12 ನೆದರ್ಲ್ಯಾಂಡ್ಸ್ ವಿರುದ್ಧ ಸೋಲು
11) 2023 ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು
ದಕ್ಷಿಣ ಆಫ್ರಿಕಾ ಪ್ಲೇಯಿಂಗ್-11: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications