T20 World Cup 2024: ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್; ಆಸೀಸ್‌ಗೆ ಬೃಹತ್ ಗುರಿ ನೀಡಿದ ಭಾರತ
ಸೋಮವಾರ, ಜೂನ್ 24ರಂದು ಸೇಂಟ್ ಲೂಸಿಯಾದ ಡೇರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 8ರ ರೋಚಕ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಬೃಹತ್ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರೋಹಿತ್ ಶರ್ಮ ಅವರ ಸ್ಫೋಟಕ ಅರ್ಧಶತಕ ಮತ್ತು ಮಧ್ಯಮ ಕ್ರಮಾಂಕ ಅಬ್ಬರದ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದ್ದು, ಆಸ್ಟ್ರೇಲಿಯಾ ತಂಡಕ್ಕೆ 206 ರನ್‌ಗಳ ಗುರಿ ನೀಡಿದೆ.

ಸೂಪರ್ 8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ದೊಡ್ಡ ಆರಂಭ ನೀಡಲಿಲ್ಲ. ಏಕೆಂದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಡಕ್‌ಗೆ ಔಟಾಗಿ ವೈಫಲ್ಯ ಅನುಭವಿಸಿದರು.
ನಂತರ ಬಂದ ರಿಷಭ್ ಪಂತ್ ನಾಯಕನಿಗೆ ಉತ್ತಮ ಸಾಥ್ ನೀಡಿದರು ಮತ್ತು ಎರಡನೇ ವಿಕೆಟ್‌ಗೆ 87 ರನ್‌ಗಳ ಪಾಲುದಾರಿಕೆಯಲ್ಲಿ ಜೊತೆಯಾದರು. 14 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 15 ರನ್ ಗಳಿಸಿ ಔಟಾದರು.

ಆ ಬಳಿಕ ಕ್ರೀಸ್‌ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್ ಕೂಡ ಅಬ್ಬರಿಸಿದರು ಮತ್ತು ಕೇವಲ 16 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 31 ರನ್ ಗಳಿಸಿದರು. ಇನ್ನು ನಾಯಕ ರೋಹಿತ್ ಶರ್ಮಾ ಕೇವಲ 41 ಎಸೆತಗಳಲ್ಲಿ 7 ಬೌಂಡರಿ ಹಾಗೂ 8 ಸಿಕ್ಸರ್‌ಗಳ ಸಮೇತ 92 ರನ್ ಬಾರಿಸಿ 8 ರನ್‌ಗಳಿಂದ ಶತಕ ವಂಚಿತರಾದರು.
ಇನ್ನು ಶಿವಂ ದುಬೆ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 28 ರನ್ ಗಳಿಸಿದರೆ, ಉಪನಾಯಕ ಹಾರ್ದಿಕ್ ಪಾಂಡ್ಯ 17 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ ಅಜೇಯ 27 ರನ್ ಬಾರಿಸಿದರು. ಕೊನೆಯಲ್ಲಿ ರವೀಂದ್ರ ಜಡೇಜಾ 5 ಎಸೆತಗಳಲ್ಲಿ 1 ಸಿಕ್ಸರ್ ಮೂಲಕ ಅಜೇಯ 9 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಮಿಚೆಲ್ ಸ್ಟಾರ್ಕ್ 4 ಓವರ್‌ಗಳಲ್ಲಿ 45 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಮಾರ್ಕಸ್ ಸ್ಟೋಯಿನಿಸ್ 4 ಓವರ್‌ಗಳಲ್ಲಿ 56 ರನ್ ನೀಡಿ 2 ವಿಕೆಟ್ ಪಡೆದರೆ, ಜೋಶ್ ಹೇಜಲ್‌ವುಡ್ 4 ಓವರ್‌ಗಳಲ್ಲಿ 14 ರನ್ ನೀಡಿ 1 ವಿಕೆಟ್ ತಮ್ಮದಾಗಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications