T20 World Cup 2024: ಭಾರತ -ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕಾಗಿ ನ್ಯೂಯಾರ್ಕ್ ತಲುಪಿದ ಕ್ರಿಕೆಟ್ ದೇವರು
ಜೂನ್ 8 ಶನಿವಾರ, ಅಮೆರಿಕಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ಮತ್ತು ಭಾರತ ಮುಖಾಮುಖಿಯಾಗಲಿವೆ.
ಜೂನ್ 9 ರಂದು (ಭಾನುವಾರ) ನಡೆಯಲಿರುವ ರೋಹಿತ್ ಶರ್ಮಾ ಮತ್ತು ಬಾಬರ್ ಅಜಮ್ ತಂಡಗಳ ನಡುವಿನ ಈ ಮಹಾ ಘರ್ಷಣೆಯನ್ನು ವೀಕ್ಷಿಸಲು ಇಡೀ ಜಗತ್ತು ಸಿದ್ಧವಾಗಿದೆ. ರಾತ್ರಿ 8:00 ರಿಂದ ಈ ಪಂದ್ಯವನ್ನು ಆರಂಭವಾಗಲಿದೆ.

ಈ ನಡುವೆ ಟೀಮ್ ಇಂಡಿಯಾ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು ಭಾರತ -ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕಾಗಿ ನ್ಯೂಯಾರ್ಕ್‌ಗೆ ತಲುಪಿದ್ದಾರೆ. ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಸಚಿನ್ ಆಗಾಗ್ಗೆ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.
ಇದೀಗ ಭಾರತದಿಂದ ಪ್ರಯಾಣ ಬೆಳೆಸಿರುವ ಸಚಿನ್ ಉಭಯ ತಂಡಗಳ ನಡುವಿನ ಕದನ ವೀಕ್ಷಿಸಲು ಮತ್ತೊಮ್ಮೆ ಅಮೆರಿಕ ತಲುಪಿದ್ದಾರೆ. ಅಮೆರಿಕಾದಲ್ಲಿರುವ ಸಚಿನ್ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಚಿನ್ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳಲಿದ್ದು, ಟೀಮ್ ಇಂಡಿಯಾವನ್ನು ಪ್ರೋತ್ಸಾಹಿಸಲಿದ್ದಾರೆ.
ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 52 ರನ್ ನೀಡಿ ಅರ್ಧಶತಕ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು.
ಆದರೆ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಯುಎಸ್‌ಎ ವಿರುದ್ಧ ಸೂಪರ್ ಓವರ್‌ನಲ್ಲಿ ಅವಮಾನಕರ ಸೋಲನ್ನು ಎದುರಿಸಬೇಕಾಯಿತು. ಇಂತಹ ಪರಿಸ್ಥಿತಿಯಲ್ಲಿ ಭಾರತ ಗೆಲುವಿನ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿದೆ. ಪಾಕಿಸ್ತಾನ ತಂಡ ತನ್ನ ಸೋಲಿನ ಕಹಿಯನ್ನು ಮರೆಯಲು ಭಾರತ ವಿರುದ್ಧ ಗೆಲುವಿಗಾಗಿ ಸಜ್ಜಾಗಿದೆ.
ಪಾಕಿಸ್ತಾನದ ವಿರುದ್ಧ ಸಚಿನ್ ಪ್ರದರ್ಶನ
ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಪರ ದಿಗ್ಗಜ ಬ್ಯಾಟರ್ ಸಚಿನ್ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಪಾಕಿಸ್ತಾನ ವಿರುದ್ಧ 18 ಟೆಸ್ಟ್ ಪಂದ್ಯಗಳಲ್ಲಿ 1057 ರನ್ ಗಳಿಸಿದ್ದಾರೆ. ಇದಲ್ಲದೇ 69 ಏಕದಿನ ಪಂದ್ಯಗಳಲ್ಲಿ 2526 ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications