For Quick Alerts
ALLOW NOTIFICATIONS  
For Daily Alerts
 

2024ರ ಟಿ20 ವಿಶ್ವಕಪ್‌ಗೆ ಭಯೋತ್ಪಾದಕ ಭೀತಿ!; ಪಾಕಿಸ್ತಾನದಿಂದ ಬೆದರಿಕೆ ಕರೆ ಸ್ವೀಕರಿಸಿದ ವೆಸ್ಟ್ ಇಂಡೀಸ್

ಇದೇ ಜೂನ್ 1ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯುಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿವೆ.

ಇದೇ ವೇಳೆ 2024ರ ಟಿ20 ವಿಶ್ವಕಪ್‌ನ ಸಹ-ಆತಿಥೇಯ ವೆಸ್ಟ್ ಇಂಡೀಸ್‌ಗೆ ಉತ್ತರ ಪಾಕಿಸ್ತಾನದಿಂದ ಭಯೋತ್ಪಾದಕ ಬೆದರಿಕೆ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಇನ್ನು, ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

T20 World Cup 2024 Cricket West Indies Receives Terrorist Threat From North Pakistan

ಟಿ20 ವಿಶ್ವಕಪ್‌ ಕ್ರಿಕೆಟ್ ಪಂದ್ಯಾವಳಿಯ ಮೇಲೆ ಭದ್ರತಾ ಬೆದರಿಕೆ ಪಾಕಿಸ್ತಾನದ ಉತ್ತರದಿಂದ ಬಂದಿದೆ ಎಂದು ಹೇಳಲಾಗುತ್ತದೆ. ಐಸಿಸಿ ಮತ್ತು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಕ್ರಮಕ್ಕೆ ಮುಂದಾಗಲು ಮತ್ತು ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪ್ರೇರೇಪಿಸಿದೆ.

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಕೆರಿಬಿಯನ್ ದ್ವೀಪಗಳು ಉತ್ತರ ಪಾಕಿಸ್ತಾನದಿಂದ ಸಂಭಾವ್ಯ ಭಯೋತ್ಪಾದಕ ಅಪಾಯಗಳ ಬಗ್ಗೆ ಎಚ್ಚರಿಸಲಾಗಿದೆ. 2024ರ ಟಿ20 ವಿಶ್ವಕಪ್ ಟೂರ್ನಿ ಜೂನ್ 1ರಿಂದ 29ರವರೆಗೆ ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ.

ವೆಸ್ಟ್ ಇಂಡೀಸ್‌ನ ಆಂಟಿಗುವಾ ಮತ್ತು ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಅಂಡ್ ಟೊಬಾಗೊದಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸುತ್ತದೆ.

ಯುಎಸ್ಎ ನಗರಗಳಾದ ಫ್ಲೋರಿಡಾ, ನ್ಯೂಯಾರ್ಕ್ ಮತ್ತು ಟೆಕ್ಸಾಸ್‌ನಲ್ಲಿಯೂ ಟಿ20 ವಿಶ್ವಕಪ್ ಪಂದ್ಯಗಳು ಆಯೋಜನೆಯಾಗಿವೆ. ಆದರೆ ಅಮೆರಿಕದಲ್ಲಿ ಪಂದ್ಯಗಳಿಗೆ ಯಾವುದೇ ಅಪಾಯದ ಲಕ್ಷಣಗಳಿಲ್ಲ. ಎರಡು ಸೆಮಿಫೈನಲ್ ಟ್ರಿನಿಡಾಡ್ ಮತ್ತು ಗಯಾನಾದಲ್ಲಿ ನಡೆಯಲಿದ್ದು, ಫೈನಲ್ ಪಂದ್ಯವನ್ನು ಬಾರ್ಬಡೋಸ್‌ನಲ್ಲಿ ನಿಗದಿಪಡಿಸಲಾಗಿದೆ.

"ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಸಂಬಂಧಿತ ಭದ್ರತಾ ಅಧಿಕಾರಿಗಳೊಂದಿಗೆ ನಿಕಟ ಸಂವಹನವನ್ನು ನಿರ್ವಹಿಸುತ್ತಿದ್ದೇವೆ. ಯಾವುದೇ ಗುರುತರ ಅಪಾಯಗಳನ್ನು ತಗ್ಗಿಸಲು ಸೂಕ್ತವಾದ ಯೋಜನೆಗಳು ಜಾರಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಲು ಭದ್ರತಾ ಕ್ರಮಗಳ ನಿರಂತರ ಮೌಲ್ಯಮಾಪನ ನಡೆಯುತ್ತಿದೆ," ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ ತಿಳಿಸಿದೆ.

"ಈ ಬೆದರಿಕೆಯನ್ನು ಐಎಸ್ ಖೊರಾಸನ್‌ಗೆ ಸಂಬಂಧಿಸಿದೆ ಎಂದು ಹೇಳಲಾಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ಟಿ20 ವಿಶ್ವಕಪ್ ಪಂದ್ಯಗಳಿಗೆ ಯಾವುದೇ ಬೆದರಿಕೆಗಳನ್ನು ಎದುರಿಸಲು ಭದ್ರತಾ ಸೇವೆಗಳು ಕಾರ್ಯವಿಧಾನಗಳನ್ನು ಹೊಂದಿವೆ," ಎಂದು ಟ್ರಿನಿಡಾಡ್ ಪ್ರಧಾನಿ ಕೀತ್ ರೌಲಿ ಹೇಳಿದ್ದಾರೆ.

"ಬಾರ್ಬಡೋಸ್ ಪ್ರಾದೇಶಿಕ ಭದ್ರತಾ ಅಧಿಕಾರಿಗಳು ಐಸಿಸಿ ಪಂದ್ಯಾವಳಿಗೆ ಸಂಭಾವ್ಯ ಬೆದರಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಹಾಗೆಯೇ ಟಿ20 ವಿಶ್ವಕಪ್‌ಗೆ ಸಂಭಾವ್ಯ ಬೆದರಿಕೆಯ ಸಂದೇಶವನ್ನು ಪ್ರೊ-ಇಸ್ಲಾಮಿಕ್ ಸ್ಟೇಟ್ ಮಾಧ್ಯಮ ಗುಂಪಿನ 'ನಾಶೀರ್ ಪಾಕಿಸ್ತಾನ್' ಮೂಲಕ ಸ್ವೀಕರಿಸಲಾಗಿದೆ," ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ ಸಿಇಒ ಜಾನಿ ಗ್ರೇವ್ಸ್ ತಿಳಿಸಿದ್ದಾರೆ.

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಭಾಗವಹಿಸುವಿಕೆ ಮೇಲೆ ಪರಿಣಾಮ
ಗಮನಾರ್ಹವಾಗಿ, ಪಾಕಿಸ್ತಾನದಲ್ಲಿ ನಡೆಯಲಿರುವ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಸಂಭಾವ್ಯ ಭಾಗವಹಿಸುವಿಕೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.

ಉತ್ತರ ಪಾಕಿಸ್ತಾನ-ಅಫ್ಘಾನಿಸ್ತಾನ ಪ್ರದೇಶಗಳಿಂದ ಬಂದಿರುವ ಭಯೋತ್ಪಾದಕ ಬೆದರಿಕೆಗಳನ್ನು ಗಮನಿಸಿದರೆ, 2025ರ ಚಾಂಪಿಯನ್ಸ್ ಟ್ರೋಫಿಯ ಆತಿಥೇಯ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತದ ನಿರ್ಧಾರದ ಬಗ್ಗೆ ಅನಿಶ್ಚಿತತೆ ಉಂಟಾಗುತ್ತದೆ.

2024ರ ಟಿ20 ವಿಶ್ವಕಪ್‌ಗೂ ಈ ಬೆದರಿಕೆ ವಿಸ್ತರಿಸಿದೆ ಎಂದು ವರದಿಗಳು ಸೂಚಿಸುತ್ತವೆ. ಪ್ರತಿಕ್ರಿಯೆಯಾಗಿ, ಐಸಿಸಿ ತನ್ನ ವಾರ್ಷಿಕ ಸಾಮಾನ್ಯ ಸಭೆಯನ್ನು ಜುಲೈನಲ್ಲಿ ಈ ವರ್ಷ ಶ್ರೀಲಂಕಾದಲ್ಲಿ ಆಯೋಜಿಸಲಿದೆ.

ಈ ವೇಳೆ ಅಜೆಂಡಾದಲ್ಲಿ ಆಟಗಾರರ ಸುರಕ್ಷತೆ ಮತ್ತು ಭದ್ರತೆಗೆ ಪ್ರಮುಖವಾದ ಪರಿಗಣನೆಯೊಂದಿಗೆ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸುವ ಅಥವಾ ಅದನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯಸಾಧ್ಯತೆಯ ಮೇಲೆ ಚರ್ಚೆಗಳು ಕೇಂದ್ರೀಕೃತವಾಗಿರಲಿವೆ.

ಇತ್ತೀಚೆಗೆ, ಪಿಸಿಬಿ ಅಧಿಕಾರಿಗಳು ಐಸಿಸಿ ಜನರಲ್ ಮ್ಯಾನೇಜರ್ ವಾಸಿಮ್ ಖಾನ್ ಅವರೊಂದಿಗೆ ಸಭೆ ನಡೆಸಿ, ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯ ಸೂಕ್ಷ್ಮ ವಿಷಯಗಳನ್ನು ವಿಶೇಷವಾಗಿ, ಭಾರತದ ಪಂದ್ಯಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ರೂಪಿಸಿದ ಪ್ರಸ್ತಾವಿತ ವೇಳಾಪಟ್ಟಿ ಪ್ರಕಾರ, ಭಾರತ ತಂಡದ ಎಲ್ಲಾ ಪಂದ್ಯಗಳು ಏಕೈಕ ಸ್ಥಳ ಲಾಹೋರ್‌ನಲ್ಲಿ ನಡೆಯಲಿವೆ.

Story first published: Monday, May 6, 2024, 11:34 [IST]
Other articles published on May 6, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+