T20 World Cup 2024: ರೋಹಿತ್ ಶರ್ಮಾ ಅರ್ಧಶತಕ; ಸೆಮಿಫೈನಲ್‌ನಲ್ಲಿ ಆಂಗ್ಲರಿಗೆ ಸವಾಲಿನ ಗುರಿ ನೀಡಿದ ಭಾರತ
ಗುರುವಾರ, ಜೂನ್ 27ರಂದು ಗಯಾನಾದ ಪ್ರಾವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಸವಾಲಿನ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದ್ದು, ಇಂಗ್ಲೆಂಡ್ ತಂಡಕ್ಕೆ 172 ರನ್‌ಗಳ ಗುರಿ ನೀಡಿದೆ.

ಭಾರತ ತಂಡದ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಿಧಾನವಾಗಿ ಆಟ ಆರಂಭಿಸಿದರು. ಆದರೆ ತಂಡದ ಮೊತ್ತ 2.4 ಓವರ್‌ಗಳಲ್ಲಿ 19 ರನ್ ಗಳಾಗಿದ್ದಾಗ 9 ರನ್ ಗಳಿಸಿ ಆಡುತ್ತಿದ್ದ ವಿರಾಟ್ ಕೊಹ್ಲಿ ಔಟಾದರು. ನಂತರ ಬಂದ ರಿಷಭ್ ಪಂತ್ ಕೇವಲ 4 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು.
ಆ ಬಳಿಕ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ರೋಹಿತ್ ಶರ್ಮಾ ಮೂರನೇ ವಿಕೆಟ್‌ಗೆ 73 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 39 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 57 ರನ್ ಗಳಿಸಿದ್ದ ರೋಹಿತ್ ಶರ್ಮಾ ಕ್ಲೀನ್ ಬೌಲ್ಡ್ ಆದರು.
ಇನ್ನು ಉತ್ತಮವಾಗಿ ಆಡುತ್ತಿದ್ದ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 47 ರನ್ ಬಾರಿಸಿ ಔಟಾದರು. ನಂತರ ಬಂದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 23 ರನ್ ಗಳಿಸಿದರು.
ಶಿವಂ ದುಬೆ ಡಕ್‌ಗೆ ಔಟಾದರೆ, ರವೀಂದ್ರ ಜಡೇಜಾ 9 ಎಸೆತಗಳಲ್ಲಿ 2 ಬೌಂಡರಿಗಳ ನೆರವಿನಿಂದ ಅಜೇಯ 17 ರನ್ ಗಳಿಸಿದರೆ, ಅಕ್ಷರ್ ಪಟೇಲ್ 6 ಎಸೆತಗಳಲ್ಲಿ 1 ಸಿಕ್ಸರ್ ಮೂಲಕ 10 ರನ್ ಗಳಿಸಿದರೆ, ಅರ್ಶ್‌ದೀಪ್ ಸಿಂಗ್ ಅಜೇಯ 1 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಇಂಗ್ಲೆಂಡ್ ತಂಡದ ಪರ ಕ್ರಿಸ್ ಜೋರ್ಡಾನ್ 3 ಓವರ್‌ಗಳಲ್ಲಿ 37 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ರೀಸ್ ಟೋಪ್ಲೆ, ಜೋಫ್ರಾ ಆರ್ಚರ್, ಸ್ಯಾಮ್ ಕರ್ರಾನ್ ಮತ್ತು ಆದಿಲ್ ರಶೀದ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications