For Quick Alerts
ALLOW NOTIFICATIONS  
For Daily Alerts
 

T20 World Cup 2024 Final: ಭಾರತ-ದಕ್ಷಿಣ ಆಫ್ರಿಕಾ ನಡುವೆ ಫೈನಲ್‌ ಕದನ; ಹವಾಮಾನ, ಪಿಚ್‌ ವರದಿ, ಹೆಡ್‌-ಟು-ಹೆಡ್‌

ಜೂನ್‌ 29 ಶನಿವಾರ, ಭಾರೀ ಕುತೂಹಲ ಕೆರಳಿಸಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐಸಿಸಿ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯವು ಇಂದು ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ.

ಫೈನಲ್‌ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದ್ದು, ಟಾಸ್ ರಾತ್ರಿ 7.30ಕ್ಕೆ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಮ್‌ ಇಂಡಿಯಾದ ನಾಯಕತ್ವ ವಹಿಸಲಿದ್ದು, ಐಡೆನ್ ಮಾರ್ಕ್ರಾಮ್ ದಕ್ಷಿಣ ಆಫ್ರಿಕಾ ತಂಡವನ್ನು ಮುನನ್ನೆಡೆಸುತ್ತಿದ್ದಾರೆ.

T20 World Cup 2024 Final India vs South Africa Match Pitch Report Weather Possible Playing-11

ಈ ಹೈವೋಲ್ಟೇಜ್‌ ಫೈನಲ್‌ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ. ಉಭಯ ತಂಡಗಳು 2024ರ ಟಿ20 ವಿಶ್ವಕಪ್‌ನಲ್ಲಿ ಸತತ ಗೆಲುವಿನೊಂದಿಗೆ ಫೈನಲ್‌ ತಲುಪಿರುವುದು ವಿಶೇಷವಾಗಿದೆ.

2024ರ ಟಿ20 ವಿಶ್ವಕಪ್‌ನ ಫೈನಲ್‌ ಪಂಂದ್ಯವು ಸಾರ್ವಕಾಲಿಕ ಚೋಕರ್ಸ್‌ ಎಂಬ ಹಣೆಪಟ್ಟಿ ಹೊಂದಿರುವ ದಕ್ಷಿಣ ಆಫ್ರಿಕಾ ಮತ್ತು ದಶಕಗಳಿಂದ ಚೋಕರ್ಸ್‌ ಭಾರತದ ಚೋಕರ್‌ಗಳ ನಡುವೆ ನಡೆಯಲಿದೆ.

ದಕ್ಷಿಣ ಆಫ್ರಿಕಾ ತಂಡದ ಕ್ರಿಕೆಟ್‌ ಇತಿಹಾಸವನ್ನು ನೋಡಿದರೆ, ಅವರು ನಾಕೌಟ್‌ ಪಂದ್ಯಗಳಲ್ಲಿ ಮುಗ್ಗರಿಸಿರುವುದು ಸ್ಪಷ್ಟವಾಗಿದೆ. ಆದ್ದರಿಂದಲೇ ಹರಿಣಗಳ ಪಡೆಗೆ ಚೋಕರ್ಸ್ ಎಂಬ ಪಟ್ಟ ಸಿಕ್ಕಿದೆ. ಈಗ ಭಾರತವನ್ನು ಸೋಲಿಸಿ ಚಾಂಪಿಯನ್‌ ಆಗುವ ಮೂಲಕ ಚೋಕರ್ಸ್‌ ಪಟ್ಟವನ್ನು ಕಳಚಿಕೊಳ್ಳುವ ಅವಕಾಶ ದಕ್ಷಿಣ ಆಫ್ರಿಕಾ ತಂಡಕ್ಕಿದೆ.

ಇನ್ನೊಂದೆಡೆ ಭಾರತವು ಸುಮಾರು ಒಂದು ದಶಕದಿಂದ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಟೀಮ್‌ ಇಂಡಿಯಾ ಕೂಡ ನಾಕೌಟ್‌ ಪಂದ್ಯಗಳಲ್ಲಿ ಸೋತಿದೆ. ಇದೀಗ ಮತ್ತೊಮ್ಮೆ ಭಾರತಕ್ಕೆ 2024ರ ಟಿ20 ವಿಶ್ವಕಪ್‌ ಪ್ರಶಸ್ತಿ ಗೆಲ್ಲುವ ಅವಕಾಶ ಸಿಕ್ಕಿದೆ.

ಭಾರತ vs ದಕ್ಷಿಣ ಆಫ್ರಿಕಾ ಹೆಡ್‌-ಟು-ಹೆಡ್‌

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇಲ್ಲಿಯವರೆಗೆ ಒಟ್ಟು 26 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ 14 ಪಂದ್ಯಗಳನ್ನು ಗೆದ್ದಿದ್ದು, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಉಭಯ ತಂಡಗಳ ನಡುವಿನ ಒಂದು ಪಂದ್ಯ ರದ್ದಾಗಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲಿ ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 6 ಪಂದ್ಯಗಳು ನಡೆದಿವೆ. ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಭಾರತ 2007, 2010, 2012 ಮತ್ತು 2014 ರ ಟಿ20 ವಿಶ್ವಕಪ್‌ನಲ್ಲಿ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 2009 ಮತ್ತು 2022 ರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಜಯ ಕಂಡಿದೆ.

ಕೆನ್ಸಿಂಗ್ಟನ್ ಓವಲ್ ಪಿಚ್ ವರದಿ

ಕೆನ್ಸಿಂಗ್ಟನ್ ಓವಲ್ ಪಿಚ್ ಬೌಲರ್ ಮತ್ತು ಬ್ಯಾಟರ್‌ಗಳಿಗೆ ಉತ್ತಮವಾಗಿದೆ. ಇಲ್ಲಿ ವೇಗದ ಬೌಲರ್‌ಗಳು ಬೌನ್ಸ್ ಮತ್ತು ಸ್ವಿಂಗ್‌ನಲ್ಲಿ ಯಶ ಕಂಡಿದ್ದಾರೆ. ಆದರೆ ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಹಳೆಯ ಬಾಲ್‌ನಲ್ಲಿ ತಮ್ಮಮ ಪ್ರಾಬಲ್ಯ ಸಾಧಿಸಿದ್ದಾರೆ.

ಭಾರತ ತಂಡವು ತನ್ನ ಮೊದಲ ಸೂಪರ್-8 ಪಂದ್ಯವನ್ನು ಅಫ್ಘಾನಿಸ್ತಾನದ ವಿರುದ್ಧ ಈ ಪಿಚ್‌ನಲ್ಲಿ ಆಡಿತು. ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ 181 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನವನ್ನು 134 ಕ್ಕೆ ಆಲೌಟ್ ಮಾಡಿತು.

ಈ ಮೈದಾನದಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 153 ರನ್ ಆಗಿದ್ದು, ಇಲ್ಲಿಯವರೆಗಿನ ಗರಿಷ್ಠ ಸ್ಕೋರ್ 224 ರನ್ ಗಳಿಸಲಷ್ಟೇ ಸಾಧ್ಯವಾಗಿದೆ. ಈ ಪಿಚ್‌ನಲ್ಲಿ 172 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಲಾಗಿದೆ.

ಈ ಮೈದಾನದಲ್ಲಿ ಒಟ್ಟು 32 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ 19 ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡವು ಗೆದ್ದಿದ್ದರೆ, 11 ಪಂದ್ಯಗಳನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ತಂಡವು ಗೆದ್ದಿದೆ. ಈ ಅವಧಿಯಲ್ಲಿ 2 ಪಂದ್ಯಗಳ ಫಲಿತಾಂಶ ಪ್ರಕಟವಾಗಿಲ್ಲ.

ಬ್ರಿಡ್ಜ್‌ಟೌನ್, ಬಾರ್ಬಡೋಸ್‌ನ ಹವಾಮಾನ ವರದಿ

ಹವಾಮಾನ ಇಲಾಖೆ ಪ್ರಕಾರ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ಇಂದು (ಶನಿವಾರ) ಪಂದ್ಯದ ವೇಳೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಆದರೆ, ಭಾನುವಾರ ಅಂದರೆ ಜೂನ್ 30ನ್ನು ಈ ಪಂದ್ಯಕ್ಕೆ ಮೀಸಲು ದಿನವನ್ನಾಗಿ ಇರಿಸಲಾಗಿದೆ.

ಅಕ್ಯುವೆದರ್ ವರದಿಯ ಪ್ರಕಾರ, ಫೈನಲ್‌ ಪಂದ್ಯದಲ್ಲಿ ಸ್ಥಳೀಯ ಕಾಲಮಾನ ಮುಂಜಾನೆ 3 ರಿಂದ 10 ಗಂಟೆಯವರೆಗೆ ಬಲವಾದ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆ ಬೀಳುವ ಸಾಧ್ಯತೆ 70 ಪ್ರತಿಶತದಷ್ಟು ಇದೆ. 11 ಗಂಟೆಗೆ ಶೇ.60 ರಷ್ಟು ಮತ್ತು 12 ಗಂಟೆಗೆ ಶೇ.40 ರಷ್ಟು ಮಳೆಯಾಗುವ ಸಾಧ್ಯತೆ ಇದೆ.

ಇಂತಹ ಪರಿಸ್ಥಿತಿಯಲ್ಲಿ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಳ್ಳಬಹುದು ಹಾಗೂ ಮೈದಾನ ಒದ್ದೆಯಾಗಿರುವ ಕಾರಣ ಪಂದ್ಯ ತಡವಾಗಿ ಆರಂಭವಾಗಬಹುದು.

ಭಾರತ vs ದಕ್ಷಿಣ ಆಫ್ರಿಕಾದ ಸಂಭಾವ್ಯ ಪ್ಲೇಯಿಂಗ್‌-11

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್‌ ಸಿಂಗ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜೆನ್ಸನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

Story first published: Saturday, June 29, 2024, 7:12 [IST]
Other articles published on Jun 29, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+