Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಎಚ್ಚರಿಕೆ ನೀಡಿದ ಮಾಜಿ ಕ್ರಿಕೆಟಿಗ

ಭಾನುವಾರ, ಜೂನ್ 9ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಮ್ಮ ಸಾಂಪ್ರದಾಯಿಕ ಪೈಪೋಟಿಯನ್ನು ಪುನರಾರಂಭಿಸಲಿವೆ.

ಉಭಯ ತಂಡಗಳ ನಡುವಿನ ಕೊನೆಯ ಎರಡು ಟಿ20 ವಿಶ್ವಕಪ್ ಮುಖಾಮುಖಿಯಲ್ಲಿ ತಲಾ ಒಂದು ಗೆಲುವಿನಲ್ಲಿ ಕೊನೆಗೊಂಡಿವೆ. 2021ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು ಭಾರತವನ್ನು 10 ವಿಕೆಟ್‌ಗಳಿಂದ ಆಘಾತಕಾರಿ ಸೋಲು ನೀಡಿತು.

T20 World Cup 2024 Former Cricketer Warns Team India Before Match Against Pakistan

ಒಂದು ವರ್ಷದ ನಂತರ 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ತಂಡವು ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ ವಿರುದ್ಧ 4 ವಿಕೆಟ್‌ಗಳ ಗೆಲುವಿನೊಂದಿಗೆ ಸೇಡು ತೀರಿಸಿಕೊಂಡಿತು.

ಎರಡೂ ತಂಡಗಳು ಕಳೆದ ವರ್ಷ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಿದ್ದವು ಮತ್ತು ಭಾರತ ತಂಡ ಆ ಪಂದ್ಯವನ್ನು ಸಹ ಸುಲಭವಾಗಿ ಗೆದ್ದುಕೊಂಡಿತು.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಸುತ್ತ ಯಾವಾಗಲೂ ಕೆಲವು ರೋಚಕತೆ ತುಂಬಿಕೊಂಡಿರುವಾಗ, ಭಾರತದ ಮಾಜಿ ಬ್ಯಾಟರ್ ಮೊಹಮ್ಮದ್ ಕೈಫ್ ಈ ಬಾರಿ ಬ್ಲಾಕ್‌-ಬಸ್ಟರ್ ಮುಖಾಮುಖಿಗೂ ಮುನ್ನ ಪ್ರಚಾರವನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ.

ಮೊಹಮ್ಮದ್ ಕೈಫ್ ಪ್ರಕಾರ, ಕೆಲವು ಪಂದ್ಯ ವಿಜೇತರನ್ನು ಹೊರತುಪಡಿಸಿ, ಪಾಕಿಸ್ತಾನ ಈ ಬಾರಿ 'ದುರ್ಬಲ' ತಂಡವನ್ನು ಹೊಂದಿದೆ ಎಂದಿದ್ದಾರೆ.

ಆದಾಗ್ಯೂ, ಕಳೆದ ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಪೈಪೋಟಿ ನಡೆಸಿದಾಗ ಪಾಕಿಸ್ತಾನ ತಂಡದ ಸ್ಟಾರ್ ಪ್ರದರ್ಶನಕಾರ ಆಗಿದ್ದ ಪಾಕಿಸ್ತಾನದ ವೇಗದ ಬೌಲರ್ ನಸೀಮ್ ಶಾ ಮೇಲೆ ಕಣ್ಣಿಡುವಂತೆ ಮೊಹಮ್ಮದ್ ಕೈಫ್ ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

"ಪಾಕಿಸ್ತಾನ ತಂಡಕ್ಕೆ ಶಾಹೀನ್ ಶಾ ಆಫ್ರಿದಿ ಮತ್ತು ನಸೀಮ್ ಶಾ ಇದ್ದಾರೆ. ನಸೀಮ್ ಶಾ ಭಾರತಕ್ಕೆ ಏಕದಿನ ವಿಶ್ವಕಪ್ ಆಡಲು ಬಂದಿರಲಿಲ್ಲ. ಆಗ ಅವರು ಗಾಯಗೊಂಡಿದ್ದು, ಇದೀಗ ಟಿ20 ವಿಶ್ವಕಪ್‌ನಲ್ಲಿ ಫಿಟ್ ಆಗಿದ್ದಾರೆ. ಇದು ಬೌನ್ಸಿ ಪಿಚ್ ಆಗಿರುತ್ತದೆ".

"ನಸೀಮ್ ಶಾ ಉತ್ತಮ ಬೌಲರ್. ವಿರಾಟ್ ಕೊಹ್ಲಿ ಗೆದ್ದ ಮೆಲ್ಬೋರ್ನ್ ಪಂದ್ಯದ ಬಗ್ಗೆ ಮಾತನಾಡುವುದಾದರೆ, ನೀವು ನಸೀಮ್ ಶಾ ಅವರ ಮೊದಲ ಸ್ಪೆಲ್ ನೋಡಿದರೆ, ಅವರು ಮೇಲುಗೈ ಪಡೆದರು ಮತ್ತು ಸ್ಲಿಪ್‌ನಲ್ಲಿ ಕ್ಯಾಚ್ ಕೈಬಿಡಲಾಯಿತು," ಎಂದು ಮೊಹಮ್ಮದ್ ಕೈಫ್ ಹೇಳಿದರು.

ಟಿ20 ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ತಂಡ

ಬಾಬರ್ ಅಜಮ್ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಆಫ್ರಿದಿ, ಉಸ್ಮಾನ್ ಖಾನ್.

Story first published: Tuesday, June 4, 2024, 16:58 [IST]
Other articles published on Jun 4, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+