T20 World Cup 2024: ಅಫ್ಘಾನಿಸ್ತಾನದ ಬೌಲಿಂಗ್ ಸಲಹೆಗಾರನಾಗಿ ಸಿಎಸ್‌ಕೆ ಮಾಜಿ ಸ್ಟಾರ್ ಆಲ್‌ರೌಂಡರ್ ನೇಮಕ
ಮೇ 21 ಮಂಗಳವಾರ, ಭಾರೀ ನಿರೀಕ್ಷೆಯ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳ ಬಾಕಿ ಇದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ದೇಶಗಳು ಮೆಗಾ ಟೂರ್ನಿಗೆ ಅತಿಥೇಯ ವಹಿಸಿವೆ.
ಟೂರ್ನಿಯಲ್ಲಿ ಚಾಂಪಿಯನ್ ಆಗಲು ಈಗಾಗಲೇ ಬಲಿಷ್ಠ ತಂಡಗಳು ಕಾರ್ಯತಂತ್ರ ರೂಪಿಸಲು ಸಜ್ಜಾಗಿವೆ. ಇದರ ಬೆನ್ನಲ್ಲೇ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಬಿಸಿ) ದೊಡ್ಡ ಹೆಜ್ಜೆಯನ್ನಿಟ್ಟಿದೆ.

ಟಿ 20 ವಿಶ್ವಕಪ್‌ಗಾಗಿ ಅಫ್ಘಾನಿಸ್ತಾನ ತಂಡಕ್ಕೆ ಬೌಲಿಂಗ್ ಸಲಹೆಗಾರರಾಗಿ ವೆಸ್ಟ್ ಇಂಡೀಸ್ ಮಾಜಿ ಸ್ಟಾರ್ ಆಲ್‌ರೌಂಡರ್ ಮತ್ತು ಟಿ20 ವಿಶ್ವಕಪ್ ವಿಜೇತ ಡ್ವೇನ್ ಬ್ರಾವೋ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳವಾರ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ.
ಅಫ್ಘಾನಿಸ್ತಾನವು ಈಗಾಗಲೇ ಸೇಂಟ್ ಕಿಟ್ಸ್ ಮತ್ತು ನೆವಿಸ್‌ಗೆ ಆಗಮಿಸಿದ್ದು, 10 ದಿನಗಳ ತರಬೇತಿ ಶಿಬಿರವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಹೀಗಾಗಿ ಬ್ರಾವೋ ಸೇರಿದಂತೆ ಕೋಚಿಂಗ್ ಸಿಬ್ಬಂದಿ ಶಿಬಿರದ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಎಬಿಸಿ ತಿಳಿಸಿದೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ದಾಖಲೆಯನ್ನು ಬ್ರಾವೋ ಹೊಂದಿದ್ದಾರೆ. ವೆಸ್ಟ್ ಇಂಡೀಸ್ ಪರ 295 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಬಲಗೈ ಮಧ್ಯಮ-ವೇಗದ ಬೌಲಿಂಗ್ ಆಲ್ ರೌಂಡರ್, 6423 ರನ್ ಗಳಿಸಿ 363 ವಿಕೆಟ್ ಪಡೆದಿದ್ದಾರೆ. ಬ್ರಾವೋ 100 ಪ್ರಥಮ ದರ್ಜೆ, 227 ಲಿಸ್ಟ್ ಎ ಮತ್ತು 573 ಟಿ20 ಕ್ಯಾಪ್‌ಗಳನ್ನು ಹೊಂದಿದ್ದಾರೆ.
ಡ್ವೇನ್ ಬ್ರಾವೋ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ವೇಗದ ಬೌಲಿಂಗ್ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಕ್ರಿಕೆಟ್ ಮತ್ತು ಹಾಡುಗಳಿಂದ ವಿಶ್ವಾದ್ಯಂತ ಮೆಚ್ಚುಗೆ ಜೊತೆಗೆ ಗೌರವವನ್ನು ಬ್ರಾವೋ ಗಳಿಸಿದ್ದಾರೆ.

ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ, ಐಪಿಎಲ್ ಮತ್ತು ಸಿಪಿಎಲ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಡ್ವೇನ್ ಬ್ರಾವೋ ಗೆದ್ದಿದ್ದಾರೆ. 2024ರ ಐಪಿಎಲ್‌ನಲ್ಲಿ ಡ್ವೇನ್ ಬ್ರಾವೋ ಚೆನ್ನೈ ಸೂಪರ್ ಕಿಂಗ್ಸ್‌ಗೆ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಸಿಎಸ್‌ಕೆ ಪರ ಸ್ಟಾರ್ ಆಲೌ ರೌಂಡರ್ ಆಗಿ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ಅಭಿಯಾನ
ನ್ಯೂಜಿಲೆಂಡ್, ಪಪುವಾ ನ್ಯೂಗಿನಿಯಾ, ಉಗಾಂಡಾ ಮತ್ತು ವೆಸ್ಟ್ ಇಂಡೀಸ್ ಜೊತೆಗೆ ಅಫ್ಘಾನಿಸ್ತಾನವು ಸಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಅಫ್ಘಾನಿಸ್ತಾನವು ಜೂನ್ 4 ರಂದು ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಉಗಾಂಡಾ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ರಶೀದ್ ಖಾನ್ (ನಾಯಕ), ನಂಗ್ಯಾಲ್ ಖರೋಟಿ, ಮುಜೀಬ್ ಉರ್ ರಹಮಾನ್, ನೋವ್ ಉರ್ ರಹಮಾನ್, ಹಕ್, ಫಜಲ್ಹಕ್ ಫಾರೂಕಿ ಮತ್ತು ಫರೀದ್ ಅಹ್ಮದ್ ಮಲಿಕ್.
ಮೀಸಲು ಆಟಗಾರರು: ಸೇದಿಕ್ ಅಟಲ್, ಹಜರತುಲ್ಲಾ ಝಜೈ ಮತ್ತು ಸಲೀಮ್ ಸಫಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications