Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಸೆಮಿಫೈನಲ್, ಫೈನಲ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ; ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಸದ್ಯ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯು ಅಂತಿಮ ಘಟ್ಟಕ್ಕೆ ತಲುಪಿದ್ದು, ಇನ್ನು ಕೇವಲ ಮೂರು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಎರಡು ಸೆಮಿಫೈನಲ್ ಮತ್ತು ಒಂದು ಫೈನಲ್.

ಭಾರತ, ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವುದರೊಂದಿಗೆ 2024ರ ಟಿ20 ವಿಶ್ವಕಪ್ ತನ್ನ ಕ್ಲೈಮ್ಯಾಕ್ಸ್ ಹಂತವನ್ನು ಸಮೀಪಿಸುತ್ತಿದೆ.

T20 World Cup 2024 Full Schedule of Semi-finals And Final TV Live Streaming Details

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಸೂಪರ್ 8ರಲ್ಲಿ ಪ್ರಾಬಲ್ಯ ಸಾಧಿಸಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ವಿರುದ್ಧ ಗೆಲುವು ಸಾಧಿಸಿ ಅಜೇಯವಾಗಿ ಉಳಿದಿದೆ.

ಅಫ್ಘಾನಿಸ್ತಾನ ತಂಡವು ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತು. ನಂತರ ಭಾರತ ವಿರುದ್ಧ ಸೋತರೂ, ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ರೋಚಕ ಜಯ ಸಾಧಿಸಿ ಸೆಮಿಫೈನಲ್‌ಗೆ ತಲುಪಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಪಂದ್ಯಾವಳಿಯಿಂದ ಹೊರಬೀಳುವಂತೆ ಮಾಡಿತು.

ದಕ್ಷಿಣ ಆಫ್ರಿಕಾ ತಂಡವು ಇಂಗ್ಲೆಂಡ್, ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದು ಅಗ್ರ ನಾಲ್ಕರ ಘಟ್ಟಕ್ಕೆ ಅರ್ಹತೆ ಪಡೆದಿದೆ.

T20 World Cup 2024 Full Schedule of Semi-finals And Final TV Live Streaming Details

ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ವಿರುದ್ಧ ಗೆಲುವು ಸಾಧಿಸಿದ ನಂತರ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿತು. ಎರಡನೇ ತಂಡವಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಮತ್ತು ಫೈನಲ್‌ನ ಸಂಪೂರ್ಣ ವೇಳಾಪಟ್ಟಿಯ ಮಾಹಿತಿ ಇಲ್ಲಿದೆ.

ಸೆಮಿಫೈನಲ್ 1: ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ

ದಿನಾಂಕ: ಬುಧವಾರ, ಜೂನ್ 26. ಸಮಯ: ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ ಆರಂಭ
ಸ್ಥಳ: ಬ್ರಿಯಾನ್ ಲಾರಾ ಸ್ಟೇಡಿಯಂ, ತರೌಬಾ, ಟ್ರಿನಿಡಾಡ್

T20 World Cup 2024 Full Schedule of Semi-finals And Final TV Live Streaming Details

ಸೆಮಿಫೈನಲ್ 2: ಭಾರತ vs ಇಂಗ್ಲೆಂಡ್

ದಿನಾಂಕ: ಗುರುವಾರ, ಜೂನ್ 27. ಸಮಯ: ಭಾರತೀಯ ಕಾಲಮಾನ ಸಂಜೆ 8 ಗಂಟೆಗೆ ಆರಂಭ
ಸ್ಥಳ: ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನಾ

ಫೈನಲ್ ಪಂದ್ಯ: ಸೆಮಿಫೈನಲ್ 1, ಸೆಮಿಫೈನಲ್ 2ರ ವಿಜೇತರು

ದಿನಾಂಕ: ಶನಿವಾರ, ಜೂನ್ 29. ಸಮಯ: ಭಾರತೀಯ ಕಾಲಮಾನ ಸಂಜೆ 8 ಗಂಟೆಗೆ ಆರಂಭ
ಸ್ಥಳ: ಕೆನ್ಸಿಂಗ್ಟನ್ ಓವಲ್, ಬ್ರಿಡ್ಜ್‌ಟೌನ್, ಬಾರ್ಬಡೋಸ್

ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯಗಳ ನೇರಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ಭಾರತ vs ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.

ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯಗಳ ಲೈವ್-ಸ್ಟ್ರೀಮಿಂಗ್ ಹೇಗೆ ವೀಕ್ಷಿಸುವುದು?

ಭಾರತ vs ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯಗಳನ್ನು ಡಿಸ್ನಿ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.

Story first published: Tuesday, June 25, 2024, 22:25 [IST]
Other articles published on Jun 25, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+