T20 World Cup 2024: ಆಸ್ಟ್ರೇಲಿಯಾ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ; ಹೊರಬೀಳುವ ಭೀತಿಯಲ್ಲಿ ಆಸೀಸ್!
ಸೋಮವಾರ, ಜೂನ್ 24ರಂದು ಸೇಂಟ್ ಲೂಸಿಯಾದ ಡೇರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 8ರ ರೋಚಕ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಈ ಮೂಲಕ 2024ರ ಟಿ20 ವಿಶ್ವಕಪ್‌ನ ಸೂಪರ್ 8ರ ಗುಂಪು 1ರಲ್ಲಿ ಅಗ್ರಸ್ಥಾನಿಯಾಗಿ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಪ್ರವೇಶಿಸಿತು. ಸೆಮಿಫೈನಲ್‌ನಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, 2022ರ ಟಿ20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿದೆ.

ಇನ್ನು ಆಸ್ಟ್ರೇಲಿಯಾ ತಂಡದ ಸೆಮಿಫೈನಲ್ ಆಸೆ ಇದೀಗ ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯದ ಮೇಲೆ ಅವಲಂಬಿಸಿದೆ. ಮಂಗಳವಾರ, ಜೂನ್ 25ರಂದು ನಡೆಯಲಿರುವ ಕೊನೆಯ ಸೂಪರ್ 8ರ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿದರೆ ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಆಗ ಆಸ್ಟ್ರೇಲಿಯಾ ತಂಡದ ಸೆಮಿಫೈನಲ್ ಆಸೆ ಕಮರಿ ಹೋಗಲಿದೆ.
ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶ ಗೆದ್ದರೆ ಮಾತ್ರ ಆಸ್ಟ್ರೇಲಿಯಾ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಸಾಧ್ಯತೆ ಇದೆ. ಈ ವೇಳೆ ನೆಟ್ ರನ್ ರೇಟ್ ಕೂಡ ಪ್ರಮುಖ ಪಾತ್ರ ವಹಿಸುತ್ತದೆ.
ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರೋಹಿತ್ ಶರ್ಮ ಅವರ ಸ್ಫೋಟಕ ಅರ್ಧಶತಕ ಮತ್ತು ಮಧ್ಯಮ ಕ್ರಮಾಂಕ ಅಬ್ಬರದ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು.

206 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಟ್ರಾವಿಸ್ ಹೆಡ್ ಅವರ ಅರ್ಧಶತಕ ಮತ್ತು ಮಿಚೆಲ್ ಮಾರ್ಷ್ ಅವರ ಅಬ್ಬರದ ಬ್ಯಾಟಿಂಗ್ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು ಮತ್ತು ಹೀನಾಯವಾಗಿ ಸೋಲು ಅನುಭವಿಸಿತು.
ಆಸ್ಟ್ರೇಲಿಯಾ ವಿರುದ್ಧ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯಗಳ ಸೋಲಿಗೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಇದೀಗ 2024ರ ಟಿ20 ವಿಶ್ವಕಪ್‌ನಲ್ಲಿ ಗೆದ್ದು ಸೇಡು ತೀರಿಸಿಕೊಂಡಿತು.
ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಡೇವಿಡ್ ವಾರ್ನರ್ ಉತ್ತಮ ಆರಂಭ ನೀಡಲಿಲ್ಲ. ಏಕೆಂದರೆ, ಡೇವಿಡ್ ವಾರ್ನರ್ ಅವರು 6 ರನ್ ಗಳಿಸಿ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಅರ್ಶ್‌ದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ನಾಯಕ ಮಿಚೆಲ್ ಮಾರ್ಷ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು ಮತ್ತು ಟ್ರಾವಿಸ್ ಹೆಡ್ ಜೊತೆಗೂಡಿ ಎರಡನೇ ವಿಕೆಟ್‌ಗೆ 81 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 28 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 37 ರನ್ ಗಳಿಸಿದ್ದಾಗ ಔಟಾದರು.
ಈ ವೇಳೆ ಕ್ರೀಸ್‌ಗೆ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಅಬ್ಬರದಿಂದ ಬ್ಯಾಟಿಂಗ್ ಆರಂಭಿಸಿದರು. 12 ಓವರ್‌ಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 20 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದಾಗಲೇ ಕ್ಲೀನ್ ಬೌಲ್ಡ್ ಆದರು.
ಉಳಿದಂತೆ ಮಾರ್ಕಸ್ ಸ್ಟೋಯಿನಿಸ್ 2 ರನ್, ಟಿಮ್ ಡೇವಿಡ್ 15 ರನ್, ಮ್ಯಾಥ್ಯೂ ವೇಡ್ 1 ರನ್, ಪ್ಯಾಟ್ ಕಮ್ಮಿನ್ಸ್ 11 ರನ್ ಮತ್ತು ಮಿಚೆಲ್ ಸ್ಟಾರ್ಕ್ 4 ರನ್ ಮಾತ್ರ ಗಳಿಸಿದರು.
ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಅರ್ಶ್‌ದೀಪ್ ಸಿಂಗ್ 4 ಓವರ್‌ಗಳಲ್ಲಿ 37 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಕುಲದೀಪ್ ಯಾದವ್ 4 ಓವರ್‌ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಜಸ್ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಭಾರತ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ದೊಡ್ಡ ಆರಂಭ ನೀಡಲಿಲ್ಲ. ವಿರಾಟ್ ಕೊಹ್ಲಿ ಮತ್ತೊಮ್ಮೆ ಡಕ್‌ಗೆ ಔಟಾಗಿ ವೈಫಲ್ಯ ಅನುಭವಿಸಿದರು.
ನಂತರ ಬಂದ ರಿಷಭ್ ಪಂತ್ ನಾಯಕನಿಗೆ ಉತ್ತಮ ಸಾಥ್ ನೀಡಿದರು ಮತ್ತು ಎರಡನೇ ವಿಕೆಟ್‌ಗೆ 87 ರನ್‌ಗಳ ಪಾಲುದಾರಿಕೆಯಲ್ಲಿ ಜೊತೆಯಾದರು. 14 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 15 ರನ್ ಗಳಿಸಿ ಔಟಾದರು.
ಆ ಬಳಿಕ ಕ್ರೀಸ್‌ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್ ಕೂಡ ಅಬ್ಬರಿಸಿದರು ಮತ್ತು ಕೇವಲ 16 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 31 ರನ್ ಗಳಿಸಿದರು. ಇನ್ನು ನಾಯಕ ರೋಹಿತ್ ಶರ್ಮಾ ಕೇವಲ 41 ಎಸೆತಗಳಲ್ಲಿ 7 ಬೌಂಡರಿ ಹಾಗೂ 8 ಸಿಕ್ಸರ್‌ಗಳ ಸಮೇತ 92 ರನ್ ಬಾರಿಸಿ 8 ರನ್‌ಗಳಿಂದ ಶತಕ ವಂಚಿತರಾದರು.
ಇನ್ನು ಶಿವಂ ದುಬೆ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 28 ರನ್ ಗಳಿಸಿದರೆ, ಉಪನಾಯಕ ಹಾರ್ದಿಕ್ ಪಾಂಡ್ಯ 17 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ ಅಜೇಯ 27 ರನ್ ಬಾರಿಸಿದರು. ಕೊನೆಯಲ್ಲಿ ರವೀಂದ್ರ ಜಡೇಜಾ 5 ಎಸೆತಗಳಲ್ಲಿ 1 ಸಿಕ್ಸರ್ ಮೂಲಕ ಅಜೇಯ 9 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಮಿಚೆಲ್ ಸ್ಟಾರ್ಕ್ 4 ಓವರ್‌ಗಳಲ್ಲಿ 45 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಮಾರ್ಕಸ್ ಸ್ಟೋಯಿನಿಸ್ 4 ಓವರ್‌ಗಳಲ್ಲಿ 56 ರನ್ ನೀಡಿ 2 ವಿಕೆಟ್ ಪಡೆದರೆ, ಜೋಶ್ ಹೇಜಲ್‌ವುಡ್ 4 ಓವರ್‌ಗಳಲ್ಲಿ 14 ರನ್ ನೀಡಿ 1 ವಿಕೆಟ್ ತಮ್ಮದಾಗಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications